ETV Bharat / state

ಮದ್ಯದ ಅಮಲಿನಲ್ಲಿ ವ್ಯಕ್ತಿಯ ತಲೆಗೆ ಹೊಡೆದು ಕೊಲೆ - Murder In Bengaluru - MURDER IN BENGALURU

ಕುಡಿದ ಅಮಲಿನಲ್ಲಿ ವ್ಯಕ್ತಿಯ ತಲೆಗೆ ಹೊಡೆದು ಕೊಲೆ ಮಾಡಿರುವ ಘಟನೆ ತಡರಾತ್ರಿ ಬೆಂಗಳೂರಿನಲ್ಲಿ ನಡೆದಿದೆ.

Bengaluru  murder case in Bengaluru
ಕೊಲೆಗೀಡಾದ ವ್ಯಕ್ತಿ (ETV Bharat)
author img

By ETV Bharat Karnataka Team

Published : Jul 8, 2024, 3:11 PM IST

ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್ ಮಾಹಿತಿ (ETV Bharat)

ಬೆಂಗಳೂರು: ಮದ್ಯದ ಅಮಲಿನಲ್ಲಿ ವ್ಯಕ್ತಿಯ ತಲೆಗೆ ಹೊಡೆದು ಹತ್ಯೆ ಮಾಡಿರುವ ಘಟನೆ ಕೋಣನಕುಂಟೆ ಠಾಣಾ ವ್ಯಾಪ್ತಿಯ ಕೊತ್ತನೂರು ಸಮುದಾಯ ಭವನದ ಬಳಿ ನಡೆದಿದೆ. ನೇಪಾಳ ಮೂಲದ ಬಾಲಾಜಿ (43) ಹತ್ಯೆಯಾದ ವ್ಯಕ್ತಿ. ಕೃತ್ಯದ ಬಳಿಕ ಇಬ್ಬರು ಆರೋಪಿಗಳು ನಾಪತ್ತೆಯಾಗಿದ್ದಾರೆ.

ದಿನಗೂಲಿ ಕೆಲಸ ಮಾಡಿಕೊಂಡಿದ್ದ ಬಾಲಾಜಿ ಹಾಗೂ ಇಬ್ಬರು ವ್ಯಕ್ತಿಗಳು ತಡರಾತ್ರಿ ಮದ್ಯಪಾನ ಮಾಡಿದ್ದರು. ಈ ವೇಳೆ ಪರಸ್ಪರ ಗಲಾಟೆ ಮಾಡಿಕೊಂಡು ಬಾಲಾಜಿಯನ್ನು ಹತ್ಯೆಗೈದಿರುವ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಕೋಣನಕುಂಟೆ ಠಾಣಾ ಪೊಲೀಸರು ಭೇಟಿ ನೀಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

''ಆರೋಪಿಗಳೂ ಸಹ ದಿನಗೂಲಿ ಕೆಲಸ ಮಾಡಿಕೊಂಡಿದ್ದರು ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಹತ್ಯೆಯಾದ ಬಾಲಾಜಿ ಹಾಗೂ ಆರೋಪಿಗಳು ಪರಸ್ಪರ ಪರಿಚಿತರಾ? ಹತ್ಯೆಗೆ ಯಾವ ಆಯುಧ ಬಳಸಿದ್ದಾರೆ? ಮತ್ತು ನಿಖರ ಕಾರಣವೇನು ಎಂಬುದು ತನಿಖೆಯಿಂದ ತಿಳಿಯಬೇಕಿದೆ'' ಎಂದು ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್ ತಿಳಿಸಿದ್ದಾರೆ‌.

ಇದನ್ನೂ ಓದಿ: ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿಹಾರ ಒದಗಿಸುವಲ್ಲಿ ವಿಳಂಬ ಸಲ್ಲದು: ಸಿಎಂ - Farmer Suicide Cases

ETV Bharat Logo

Copyright © 2025 Ushodaya Enterprises Pvt. Ltd., All Rights Reserved.