ETV Bharat / state

ತಪ್ಪಿಸಿಕೊಳ್ಳಲು ಯತ್ನಿಸಿದ ಪೋಕ್ಸೋ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು - POLICE FIRE AT ACCUSED

ಪೋಕ್ಸೋ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಸೆರೆ ಹಿಡಿದಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ.

POCSO CASE ACCUSED  5 YEAR OLD CHILD RAPED  BALLARI
ಬಳ್ಳಾರಿ ಶೂಟೌಟ್ (IANS)
author img

By ETV Bharat Karnataka Team

Published : Jan 16, 2025, 10:08 AM IST

ಬಳ್ಳಾರಿ: ಪಂಚನಾಮೆ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಪೋಕ್ಸೋ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಸೆರೆ ಹಿಡಿದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.

ಏನಿದು ಪ್ರಕರಣ?: ಆರೋಪಿಯನ್ನು ಮಂಜುನಾಥ್​​ನನ್ನು ಸದ್ಯ ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ (ವಿಮ್ಸ್‌) ದಾಖಲಿಸಲಾಗಿದೆ. ಆರೋಪಿ ಮಂಜುನಾಥ್​ ಇತ್ತೀಚೆಗೆ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ತಲೆಮರೆಸಿಕೊಂಡಿದ್ದನು. ಪೊಲೀಸರು ಆರೋಪಿಯನ್ನು ಬುಧವಾರ ರಾತ್ರಿ ತೋರಣಗಲ್ಲಿನಲ್ಲಿ ಬಂಧಿಸಿದ್ದರು.

ಪೊಲೀಸ್​ ಅಧಿಕಾರಿ ಹೇಳಿದ್ದು ಹೀಗೆ?: ಇಂದು ಬೆಳಗ್ಗೆ ಆತನನ್ನು ಪಂಚನಾಮೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದನು. ಆಗ ಸಿಬ್ಬಂದಿ ಆರೋಪಿ ಕಾಲಿಗೆ ಗುಂಡಿನೇಟು ಹೊಡೆಯಬೇಕಾಯಿತು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿ.ಜೆ ತಿಳಿಸಿದ್ದಾರೆ.

ಓದಿ: ಚಾಮರಾಜನಗರ ನಗರಸಭೆ: ಪಕ್ಷದ ವಿಪ್ ಉಲ್ಲಂಘಿಸಿದ ನಾಲ್ವರು ಕಾಂಗ್ರೆಸ್ ಸದಸ್ಯರು ಅನರ್ಹ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.