ETV Bharat / state

ನಟ ಸಲ್ಮಾನ್ ಖಾನ್​ಗೆ ಬೆದರಿಕೆ ಪ್ರಕರಣ: ಹಾವೇರಿ ನಗರದಲ್ಲಿ ಆರೋಪಿ ಸೆರೆ - THREAT TO ACTOR SALMAN KHAN

ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಹಾವೇರಿ ಪೊಲೀಸರು ಬಂಧಿಸಿ, ಮುಂಬೈ ಪೊಲೀಸರ ವಶಕ್ಕೆ ನೀಡಿದ್ದಾರೆ.

ಬಂಧಿತ ಆರೋಪಿ
ಬಂಧಿತ ಆರೋಪಿ (ETV Bharat)
author img

By ETV Bharat Karnataka Team

Published : Nov 6, 2024, 8:01 PM IST

ಹಾವೇರಿ: ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ಬಿಕಾರಾಮ್‌ನನ್ನು ಹಾವೇರಿ ನಗರದಲ್ಲಿ ಬಂಧಿಸಲಾಗಿದೆ. ರಾಜಸ್ಥಾನದ ಮೂಲದ ಬಿಕಾರಾಮ್ ಒಂದೂವರೆ ತಿಂಗಳ ಹಿಂದೆ ಕೂಲಿ ಕೆಲಸಕ್ಕೆಂದು ಹಾವೇರಿ ನಗರಕ್ಕೆ ಬಂದಿದ್ದ. ಇಲ್ಲಿನ ಗೌಡರ ಓಣಿಯಲ್ಲಿನ ರೂಮ್​ನಲ್ಲಿ ಕೂಲಿಕಾರರೊಂದಿಗೆ ವಾಸವಾಗಿದ್ದುಕೊಂಡು ಗ್ರಿಲ್ ಕೆಲಸ ಮಾಡಿಕೊಂಡಿದ್ದ.

ಮಹಾರಾಷ್ಟ್ರದ ಪೊಲೀಸರ ಮಾಹಿತಿ ಆಧರಿಸಿ ಆರೋಪಿಯನ್ನು ಬಂಧಿಸಿ, ಮುಂಬೈ ಪೊಲೀಸರ ವಶಕ್ಕೆ ನೀಡಿದ್ದೇವೆ ಎಂದು ಹಾವೇರಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಸಲ್ಮಾನ್​ ಖಾನ್​ಗೆ ನಿಲ್ಲದ ಬೆದರಿಕೆ: ಬಿಷ್ಣೋಯಿ ಸಹೋದರನ ಹೆಸರಲ್ಲಿ ₹5 ಕೋಟಿ ಹಣಕ್ಕೆ ಬೇಡಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.