ETV Bharat / state

ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಬೇಡಿಕೆ ಬಗ್ಗೆ ಪರಿಶೀಲಿಸಿ ಕ್ರಮ: ಸಿಎಂ ಸಿದ್ದರಾಮಯ್ಯ - CM Siddaramaiah - CM SIDDARAMAIAH

ಪ್ರಾಥಮಿಕ ಶಾಲಾ ಶಿಕ್ಷಕರ ವಿವಿಧ ಸೇವಾ ಬೇಡಿಕೆಗಳ ಸಂಬಂಧ ಶೀಘ್ರದಲ್ಲೇ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಶಿಕ್ಷಣ ಸಚಿವರು ಹಾಗೂ ಅಧಿಕಾರಿಗಳೊಂದಿಗೆ, ಕಾನೂನು ತೊಡಕುಗಳು ಹಾಗೂ ಇನ್ನಿತರ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಿದರು.

teachers
ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ (ETV Bharat)
author img

By ETV Bharat Karnataka Team

Published : Sep 4, 2024, 3:53 PM IST

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳ ಸಂಬಂಧ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗದೊಂದಿಗೆ ಅವರ ಬೇಡಿಕೆಗಳ ಕುರಿತು ಸಿಎಂ ಸಭೆ ನಡೆಸಿದರು. ಶಿಕ್ಷಣ ಸಚಿವರು ಹಾಗೂ ಅಧಿಕಾರಿಗಳೊಂದಿಗೆ, ಕಾನೂನು ತೊಡಕುಗಳು ಹಾಗೂ ಇನ್ನಿತರ ವಿಷಯಗಳ ಬಗ್ಗೆ ಸಮಗ್ರವಾಗಿ ಸಮಾಲೋಚನೆ ನಡೆಸಿ, ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

Siddaramaiah Meeting
ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ (ETV Bharat)

ಶಿಕ್ಷಕರ ಆಗ್ರಹ ಏನು?: ಸಭೆಯಲ್ಲಿ ಮಾತನಾಡಿದ ನಿಯೋಗದ ಪ್ರತಿನಿಧಿಗಳು, 2017ರಲ್ಲಿ ವೃಂದ ಮತ್ತು ನೇಮಕಾತಿ ನಿಯಮಾವಳಿಗೆ ತಿದ್ದುಪಡಿ ಮಾಡಿದ ಬಳಿಕ ಸೇವಾ ನಿಯಮಗಳನ್ನು ಪೂರ್ವಾನ್ವಯವಾಗುವಂತೆ ಅನುಷ್ಠಾನಗೊಳಿಸಬಾರದು. ಪದವೀಧರರಾಗಿರುವ 40 ಸಾವಿರಕ್ಕೂ ಹೆಚ್ಚು ಇರುವ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರು ಎಂದು ಪರಿಗಣಿಸಿ ಆದೇಶ ಹೊರಡಿಸಬೇಕು. ನೇಮಕಾತಿ 7ನೇ ತರಗತಿವರೆಗೆ ಎಂದು ಹೇಳಿ ಈಗ 5ನೇ ತರಗತಿವರೆಗೆ ಹಿಂಬಡ್ತಿ ನೀಡಲಾಗಿದೆ. ಆಯಾ ಜಿಲ್ಲಾ ನೇಮಕಾತಿ ಸಮಿತಿಯ ಮಟ್ಟದಲ್ಲಿ ಮುಖ್ಯೋಪಾಧ್ಯಾಯ ಹುದ್ದೆಗಳಿಗೆ ಈ ಮೊದಲು ಮುಂಬಡ್ತಿ ನೀಡಲಾಗುತ್ತಿತ್ತು. ಅದನ್ನು ಕಳೆದ ಮೂರು ವರ್ಷಗಳಿಂದ ನಿಲ್ಲಿಸಲಾಗಿದ್ದು, ಇದನ್ನು ಮುಂದುವರೆಸಬೇಕು ಎಂದು ಆಗ್ರಹಿಸಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಯಲ್ಲಿ, ಮುಂಬಡ್ತಿ ಹುದ್ದೆಗಳನ್ನು ಶೇಕಡಾ 50ರಷ್ಟು ನಿಗದಿ ಪಡಿಸಬೇಕು. ಮುಂಬಡ್ತಿ ಸಂದರ್ಭದಲ್ಲಿ ಸೇವಾ ಜೇಷ್ಟತೆಯನ್ನು ಪರಿಗಣಿಸಬೇಕು ಎಂದು ಶಿಕ್ಷಕರ ಸಂಘದ ನಿಯೋಗ ಮನವಿ ಸಲ್ಲಿಸಿತು.

ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಗೋವಿಂದ ರಾಜು, ನಸೀರ್‌ ಅಹ್ಮದ್‌, ವಿಧಾನಪರಿಷತ್‌ ಸದಸ್ಯ ಪುಟ್ಟಣ್ಣ, ಸಾಹಿತಿ ಬರಗೂರು ರಾಮಚಂದ್ರಪ್ಪ, ನಿರಂಜನಾರಾಧ್ಯ, ಇಲಾಖಾ ಪ್ರದಾನ ಕಾರ್ಯದರ್ಶಿ ರಿತೇಶ್‌ ಕುಮಾರ್‌ ಸಿಂಗ್ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ: ಕೇರಳದ ನ್ಯಾ. ಹೇಮಾ ಸಮಿತಿಯಂತೆ ಸ್ಯಾಂಡಲ್​ವುಡ್​ನಲ್ಲೂ ಕಮಿಟಿ ರಚಿಸಿ : ಸಿಎಂಗೆ FIRE ಒತ್ತಾಯ - FIRE urges to make Committee

ETV Bharat Logo

Copyright © 2024 Ushodaya Enterprises Pvt. Ltd., All Rights Reserved.