ETV Bharat / state

ಕಾಂತಾರ ಚಾಪ್ಟರ್ - 1 ಚಿತ್ರತಂಡ ಷರತ್ತು ಉಲ್ಲಂಘಿಸಿದ್ದರೆ ಕ್ರಮ: ಸಚಿವ ಈಶ್ವರ್ ಖಂಡ್ರೆ - ESHWAR KHANDRE

ಕಾಂತಾರ ಚಾಪ್ಟರ್ 1 ಚಿತ್ರ ತಂಡ ಷರತ್ತು ಉಲ್ಲಂಘಿಸಿದ್ದರೆ ಚಿತ್ರೀಕರಣ ನಿರ್ಬಂಧಿಸಿ, ಕ್ರಮ ಜರುಗಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಸಚಿವ ಈಶ್ವರ್ ಖಂಡ್ರೆ
ಸಚಿವ ಈಶ್ವರ್ ಖಂಡ್ರೆ (ETV Bharat)
author img

By ETV Bharat Karnataka Team

Published : Jan 20, 2025, 6:48 PM IST

ಬೆಂಗಳೂರು: ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಯಸಳೂರು ವಲಯದ ಶನಿವಾರ ಸಂತೆ ಬಳಿ ಹೇರೂರು ಗ್ರಾಮದ ಗವಿಬೆಟ್ಟ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಚಿತ್ರೀಕರಣ ನಡೆಸುತ್ತಿರುವ ಕಾಂತಾರ ಚಾಪ್ಟರ್ 1 ಚಿತ್ರ ತಂಡ ಷರತ್ತು ಉಲ್ಲಂಘಿಸಿದ್ದರೆ ಚಿತ್ರೀಕರಣ ನಿರ್ಬಂಧಿಸಿ, ಕ್ರಮ ಜರುಗಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

ವಿಧಾನಸೌಧದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗವಿಬೆಟ್ಟ ಮತ್ತು ಸುತ್ತಮುತ್ತಲ ಪರಿಭಾವಿತ ಅರಣ್ಯದ ಅಂಚಿನ ಗೋಮಾಳದಲ್ಲಿ 23 ದಿನ ಕಾಂತಾರ ಚಾಪ್ಟರ್ 1 ಚಿತ್ರೀಕರಣ ನಡೆಸಲು ಹೊಂಬಾಳೆ ಫಿಲಂಸ್ ಚಿತ್ರತಂಡ ಅನುಮತಿ ಕೋರಿತ್ತು. ಇದಕ್ಕೆ ಹಾಸನ ಉಪ ಅರಣ್ಯ ಸಂರಕ್ಷಣಾಧಿಕಾರಿ ಷರತ್ತುಬದ್ಧ ಅನುಮತಿ ನೀಡಿದ್ದಾರೆ ಎಂದರು.

ಆದರೆ ಕಾಂತಾರ ತಂಡ ಚಿತ್ರೀಕರಣದ ವೇಳೆ ಸ್ಫೋಟಕ ಬಳಸುತ್ತಿದ್ದು, ಇದರಿಂದ ವನ್ಯಜೀವಿಗಳು ವಿಚಲಿತವಾಗುತ್ತಿವೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿರುತ್ತದೆ. ವಿಷಯ ತಿಳಿಯುತ್ತಿದ್ದಂತೆ ನಾನು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಇಂದೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲು ತಿಳಿಸಿದ್ದೇನೆ. ಚಿತ್ರತಂಡದಿಂದ ಒಂದೊಮ್ಮೆ ಷರತ್ತುಗಳ ಉಲ್ಲಂಘನೆಯಾಗಿ, ವನ್ಯಜೀವಿಗಳಿಗೆ ಅಥವಾ ಸಸ್ಯ ಸಂಕುಲಕ್ಕೆ ಯಾವುದೇ ಹಾನಿ ಆಗಿದ್ದಲ್ಲಿ ಕೂಡಲೇ ಚಿತ್ರೀಕರಣ ಸ್ಥಗಿತಗೊಳಿಸಲು ಮತ್ತು ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದು ತಿಳಿಸಿದರು.

ಇದನ್ನೂ ಓದಿ: ವಾಹನ‌ ಸವಾರರೇ ಎಚ್ಚರ! ಅರಣ್ಯದ ಹೆದ್ದಾರಿಯಲ್ಲಿ ಸಂಚರಿಸುವಾಗ ಪ್ಲಾಸ್ಟಿಕ್ ಇದ್ರೆ ಬೀಳಲಿದೆ ದಂಡ

ಇನ್ನು ಟಾಕ್ಸಿಕ್ ಚಿತ್ರತಂಡಕ್ಕೆ, ಎಚ್​ಎಂಟಿಯಿಂದ ಭೂಮಿ ಖರೀದಿಸಿರುವ ಕೆನರಾ ಬ್ಯಾಂಕ್ ಗುತ್ತಿಗೆ ನೀಡಿದ್ದು, ಮೂರೂ ಸಂಸ್ಥೆಗಳ ಮೇಲೆ ಎಫ್​ಐಆರ್ ಆಗಿದೆ. ಪ್ರಕರಣ ನ್ಯಾಯಾಲಯದಲ್ಲಿದೆ. ಘನ ನ್ಯಾಯಾಲಯ ತಡೆಯಾಜ್ಞೆ ನೀಡಿದ್ದು, ಇದರ ತೆರವಿಗೆ ಕ್ರಮ ವಹಿಸುವಂತೆ ಸೂಚಿಸಲಾಗಿದೆ ಎಂದರು.

ಫೆಬ್ರವರಿ ಮೊದಲ ವಾರ ಅರ್ಜುನ ಸ್ಮಾರಕ ಉದ್ಘಾಟನೆ : ಇದಕ್ಕೂ ಮುನ್ನ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮುಖಾಮುಖಿರಹಿತ ಪ್ರಮಾಣಪತ್ರ ನೀಡಿಕೆ ವ್ಯವಸ್ಥೆಗೆ ಚಾಲನೆ ನೀಡಿ ಮಾತನಾಡಿದ ಸಚಿವರು, ಹಾಸನ ಜಿಲ್ಲೆಯ ಯಸಳೂರು ಅರಣ್ಯದಲ್ಲಿ 2023ರ ಡಿ. 4ರಂದು ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮನಾದ ದಸರಾ ಅಂಬಾರಿ ಹೊರುತ್ತಿದ್ದ ಗಜಶ್ರೇಷ್ಠ ಅರ್ಜುನನ ಸ್ಮಾರಕವನ್ನು ಫೆಬ್ರವರಿ ಮೊದಲ ವಾರ ಉದ್ಘಾಟಿಸುವುದಾಗಿ ತಿಳಿಸಿದರು.

ಹುತಾತ್ಮ ಅರ್ಜುನನ ಸ್ಮಾರಕ ಸಂಪೂರ್ಣ ಸಿದ್ಧವಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಮಾಲೋಚಿಸಿ ಫೆಬ್ರವರಿ ಮೊದಲ ವಾರದಲ್ಲಿ ಉದ್ಘಾಟಿಸಲಾಗುವುದು. ಹುತಾತ್ಮ ಅರ್ಜುನನ ಸ್ಮಾರಕವನ್ನು ಡಿ. 4ರ ಪ್ರಥಮ ಪುಣ್ಯ ತಿಥಿಯೊಳಗಾಗಿ ನೆರವೇರಿಸುವ ಉದ್ದೇಶ ಇತ್ತು. ಆದರೆ, ತಾಂತ್ರಿಕ ಕಾರಣಗಳಿಂದ ತಡವಾಗಿದೆ. ಸ್ಮಾರಕ ಅರಣ್ಯ ಪ್ರದೇಶದಲ್ಲಿದ್ದು, ಸಾರ್ವಜನಿಕರು ಸ್ಮಾರಕ ದರ್ಶನಕ್ಕೆ ಬರಲು ತೊಡಕಾಗದ ರೀತಿಯಲ್ಲಿ ಕ್ರಮ ವಹಿಸಲಾಗುವುದು ಎಂದು ಹೇಳಿದರು.

ಬಳ್ಳೆಯಲ್ಲೂ ಸ್ಮಾರಕ : ಕಾಕನಕೋಟೆಯಲ್ಲಿ 1968ರಲ್ಲಿ ನಡೆದ ಖೆಡ್ಡಾ ಕಾರ್ಯಾಚರಣೆಯಲ್ಲಿ ಸೆರೆಹಿಡಿಯಲಾಗಿದ್ದ ಅರ್ಜುನ ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿರುವ ಬಳ್ಳೆ ಆನೆ ಶಿಬಿರದಲ್ಲಿದ್ದ ಹಿನ್ನೆಲೆಯಲ್ಲಿ ಬಳ್ಳೆಯಲ್ಲಿ ಕೂಡ ಸ್ಮಾರಕ ನಿರ್ಮಿಸಲಾಗಿದ್ದು, ಫೆಬ್ರವರಿ ಅಂತ್ಯ ಅಥವಾ ಮಾರ್ಚ್ ಮೊದಲ ವಾರದಲ್ಲಿ ಆ ಸ್ಮಾರಕವನ್ನೂ ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಲಾಗುವುದು ಎಂದು ಸಚಿವರು ತಿಳಿಸಿದರು.

ಇದೇ ವೇಳೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ವಿವಿಧ ಸೇವೆಗಳನ್ನು ಒಂದೇ ಸೂರಿನಡಿ ತರುವ ಮುಖಾಮಖಿ ರಹಿತ ಆನ್​ಲೈನ್ ವ್ಯವಸ್ಥೆಗೆ ಅರಣ್ಯ ಸಚಿವರು ಚಾಲನೆ ನೀಡಿದರು.

ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಂಜುಂಪರ್ವೇಜ್, ಪರಿಸರ ಇಲಾಖೆ ಪ್ರಧಾನ ಕಾರ್ಯದರ್ಶಿ ವಿಜಯ್ ಮೋಹನ್ ರಾಜ್, ಐಐಐಟಿಬಿಯ ನಿರ್ದೇಶಕ ದೇಬಬ್ರತ ದಾಸ್ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ: ಬಂಕಾಪುರ ಧಾಮ: 8 ಮರಿಗಳಿಗೆ ಜನ್ಮ ನೀಡಿದ ತೋಳ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.