ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಸೋಮವಾರ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಸೇರಿದಂತೆ ಎಲ್ಲ ಆರೋಪಿಗಳು ಕಾರಾಗೃಹದಿಂದಲೇ ವಿಡಯೋ ಕಾನ್ಫರನ್ಸ್ ಮೂಲಕ ನ್ಯಾಯಾಧೀಶರ ಮುಂದೆ ನಾಳೆ ಹಾಜರಾಗಲಿದ್ದಾರೆ.
ಪ್ರಕರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿದ್ದ ಕೆಲ ಆರೋಪಿಗಳಿಗೆ ವಿಶೇಷ ಆತಿಥ್ಯ ದೊರೆಯುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಕಾರಾಗೃಹಗಳಿಗೆ ಸ್ಥಳಾಂತರ ಮಾಡಲಾಗಿತ್ತು. ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಿದ್ದರೆ, ಇನ್ನುಳಿದ ಆರೋಪಿಗಳನ್ನು ಮೈಸೂರು, ತುಮಕೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ, ವಿಜಯಪುರ ಮತ್ತು ಕಲಬುರಗಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಆರೋಪಿಗಳ ನ್ಯಾಯಾಂಗ ಬಂಧನ ಸೋಮವಾರ ಮುಕ್ತಾಯವಾಗಲಿರುವ ಹಿನ್ನೆಲೆ ಆಯಾ ಕಾರಾಗೃಹಗಳಿಂದಲೇ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ನಗರದ 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರಾಗಲಿದ್ದಾರೆ.
ಇದೇ ವೇಳೆ ಪೊಲೀಸರು ಸಲ್ಲಿಸಿರುವ ಚಾರ್ಜ್ ಶೀಟ್ ಎಲ್ಲಾ 17 ಜನ ಆರೋಪಿಗಳ ಕೈ ಸೇರಲಿದೆ. ಚಾರ್ಜ್ ಶೀಟ್ ಕೈ ಸೇರಿದ ಬಳಿಕ ಹಲವು ಆರೋಪಿಗಳು ನಾಳೆಯೇ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ. ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆಯಾಗಿರುವುದರಿಂದ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಪ್ರಮುಖ ಆರೋಪಿಗಳು ಸೋಮವಾರ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಇದನ್ನೂ ಓದಿ: 'ಕೊಲೆ ಪ್ರಕರಣದಿಂದ ದರ್ಶನ್ ಬೇಗ ಹೊರಬರಲಿ, ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರ': ನೆನಪಿರಲಿ ಪ್ರೇಮ್ - Nenapirali Prem