ETV Bharat / state

ದರ್ಶನ್, ಸಹಚರರ ನ್ಯಾಯಾಂಗ ಬಂಧನ ಇಂದು ಅಂತ್ಯ - Darshan Judicial Custody - DARSHAN JUDICIAL CUSTODY

ರೇಣುಕಾಸ್ವಾಮಿ ಕೊಲೆ ಆರೋಪಿಗಳಾದ ನಟ ದರ್ಶನ್ ಮತ್ತು ಇತರ ಆರೋಪಿಗಳ ನ್ಯಾಯಾಂಗ ಬಂಧನ ಇಂದು ಅಂತ್ಯವಾಗಲಿದೆ. ಪೊಲೀಸರು ಆರೋಪಿಗಳನ್ನು ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಎದುರು ಹಾಜರುಪಡಿಸಲಿದ್ದಾರೆ.

darshan
ದರ್ಶನ್ (ETV Bharat)
author img

By ETV Bharat Karnataka Team

Published : Aug 28, 2024, 10:55 AM IST

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದು ಅಂತ್ಯವಾಗಲಿದೆ. ದರ್ಶನ್ ಮತ್ತು ಸಂಗಡಿಗರನ್ನು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಪೊಲೀಸರು ಹಾಜರುಪಡಿಸಲಿದ್ದಾರೆ.

ಬಳಿಕ ಆರೋಪಿಗಳನ್ನು ನ್ಯಾಯಾಲಯದ ಆದೇಶದಂತೆ ರಾಜ್ಯದ ವಿವಿಧ ಕಾರಾಗೃಹಗಳಿಗೆ ಸ್ಥಳಾಂತರಿಸಲು ಜೈಲಧಿಕಾರಿಗಳು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಮಧ್ಯಾಹ್ನದ ಬಳಿಕ ಸ್ಥಳಾಂತರ: ಕಾರಾಗೃಹದಲ್ಲಿ ವಿಶೇಷ ಆತಿಥ್ಯ ಪಡೆದ ಆರೋಪ ಕಾರಣಕ್ಕೆ ದರ್ಶನ್ ಮತ್ತು ಸಹಚರರನ್ನು ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡಲು ಅನುಮತಿ ಕೋರಿ ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧೀಕ್ಷಕರು ನಗರದ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಮನವಿ ಪುರಸ್ಕರಿಸಿದ್ದ ನ್ಯಾಯಾಲಯ ಆರೋಪಿಗಳ ಸ್ಥಳಾಂತರ ಮಾಡಲು ಅನುಮತಿ ನೀಡಿತ್ತು.

ಅದರಂತೆ, ಇಂದು ಮಧ್ಯಾಹ್ನದ ಬಳಿಕ ಆರೋಪಿ ದರ್ಶನ್​ರನ್ನು ಬಳ್ಳಾರಿಗೆ, ಪವನ್, ರಾಘವೇಂದ್ರ ಹಾಗೂ ನಂದೀಶ್​ರನ್ನು ಮೈಸೂರು, ಜಗದೀಶ್, ಲಕ್ಷ್ಮಣ್​ರನ್ನು ಶಿವಮೊಗ್ಗ, ಧನರಾಜ್​ನನ್ನು ಧಾರವಾಡ, ವಿನಯ್​ನನ್ನು ವಿಜಯಪುರ, ನಾಗರಾಜ್​ನನ್ನು ಕಲಬುರಗಿ, ಪ್ರದೋಶ್​ನನ್ನು ಬೆಳಗಾವಿ ಕಾರಾಗೃಹಕ್ಕೆ ಸ್ಥಳಾಂತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಉಳಿದಂತೆ ಪವಿತ್ರಾ ಗೌಡ, ಅನುಕುಮಾರ್ ಹಾಗೂ ದೀಪಕ್​ ಎಂಬವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲೇ ಮುಂದುವರೆಸಲಾಗಿದೆ.

ಇದನ್ನೂ ಓದಿ: ದರ್ಶನ್ ಮತ್ತು ಸಹಚರರು ರಾಜ್ಯದ ವಿವಿಧ ಕಾರಾಗೃಹಗಳಿಗೆ ಸ್ಥಳಾಂತರ; ದಾಸ ಬಳ್ಳಾರಿ ಜೈಲಿಗೆ - DARSHAN JAIL SHIFT

ETV Bharat Logo

Copyright © 2024 Ushodaya Enterprises Pvt. Ltd., All Rights Reserved.