ETV Bharat / state

ಮೈಸೂರಿಗೆ ನಾಲ್ಕು ವಾರ ತೆರಳಲು ಅನುಮತಿ ಕೋರಿ ಕೋರ್ಟ್ ಮೊರೆ ಹೋದ ದರ್ಶನ್ - DARSHAN

ನಟ ದರ್ಶನ್ ಅವರು ಮೈಸೂರಿಗೆ ತೆರಳಲು ಅನುಮತಿ ನೀಡುವಂತೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.

Darshan
ನಟ ದರ್ಶನ್ (Photo: ETV Bharat)
author img

By ETV Bharat Karnataka Team

Published : 2 hours ago

ಬೆಂಗಳೂರು: ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್, ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ ನೀಡುವಂತೆ ಕೋರಿ ಇಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಹತ್ಯೆ ಪ್ರಕರಣದ ಎರಡನೇ ಆರೋಪಿಯಾಗಿರುವ ದರ್ಶನ್ ಪರ ವಕೀಲರು ಅನುಮತಿ‌ ಕೋರಿ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಸಿದ 57ನೇ ಸಿಸಿಹೆಚ್ ನ್ಯಾಯಾಲಯ, ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಿ ಅಭಿಯೋಜಕರಿಗೆ ಸೂಚಿಸಿದೆ.

ಡಿ.13ರಂದು ಹೈಕೋರ್ಟ್, ದರ್ಶನ್ ಸೇರಿ ಏಳು ಮಂದಿಗೆ ಷರತ್ತುಬದ್ಧ ಜಾಮೀನು ನೀಡಿತ್ತು. ನ್ಯಾಯಾಲಯದ ವ್ಯಾಪ್ತಿ ಬಿಟ್ಟು ತೆರಳಕೂಡದು ಎಂಬ ಷರತ್ತು ಕೂಡಾ ಇದರಲ್ಲಿ ಒಳಗೊಂಡಿದೆ. ಈ ಹಿನ್ನೆಲೆಯಲ್ಲಿ ಅನುಮತಿ ಕೋರಿ ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: 'ಎಲ್ಲರನ್ನೂ ಮಿಸ್​ ಮಾಡಿಕೊಳ್ಳುತ್ತೇನೆ, ಜ.26ರಂದು ಸಿಗೋಣ': ಶಿವರಾಜ್​ಕುಮಾರ್​

ಮೈಸೂರಿನಲ್ಲಿ ದರ್ಶನ್ ಫಾರ್ಮ್ ಹೌಸ್ ಹೊಂದಿದ್ದು, ಸಿನಿಮಾ ಶೂಟಿಂಗ್ ಇಲ್ಲದಿದ್ದಾಗ ಅಲ್ಲಿನ ತೋಟದ ಮನೆಯಲ್ಲಿ ವಾಸ್ತವ್ಯ ಹೂಡುತ್ತಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.