ETV Bharat / state

ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ನಟ ರಕ್ಷಿತ್ ಶೆಟ್ಟಿ ಭೇಟಿ

ಉಡುಪಿಯ ಇತಿಹಾಸ ಪ್ರಸಿದ್ಧ ಕಾಪು ಮಾರಿಯಮ್ಮನ ಕ್ಷೇತ್ರ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಇಂದು ನಟ ರಕ್ಷಿತ್​ ಶೆಟ್ಟಿ ಭೇಟಿ ನೀಡಿ ದೇವಿಯ ದರ್ಶನ ಪಡೆದರು.

ಉಡುಪಿ: ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ನಟ ರಕ್ಷಿತ್ ಶೆಟ್ಟಿ ಭೇಟಿ

author img

By ETV Bharat Karnataka Team

Published : Feb 23, 2024, 3:25 PM IST

Updated : Feb 23, 2024, 7:45 PM IST

ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ನಟ ರಕ್ಷಿತ್ ಶೆಟ್ಟಿ ಭೇಟಿ

ಉಡುಪಿ‌: ಕನ್ನಡ ಚಿತ್ರರಂಗದಲ್ಲಿ ಸಿಂಪಲ್ ಸ್ಟಾರ್ ಎಂದೇ ಗುರುತಿಸಿಕೊಂಡಿರುವ ನಟ ರಕ್ಷಿತ್ ಶೆಟ್ಟಿಯವರು ಫೆಬ್ರವರಿ 22ರಂದು ತಮ್ಮ ಹುಟ್ಟೂರಾದ ಉಡುಪಿಯಲ್ಲಿ ಇತಿಹಾಸ ಪ್ರಸಿದ್ಧ ಕಾಪು ಮಾರಿಯಮ್ಮನ ಕ್ಷೇತ್ರ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ ಶ್ರೀದೇವಿಯ ದರ್ಶನ ಪಡೆದರು. ದೇವಳದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಕೆ.ವಾಸುದೇವ ಶೆಟ್ಟಿಯವರು ಶ್ರೀದೇವಿಯಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದ ನೀಡಿದರು.

ನಂತರ ಜೀರ್ಣೋದ್ಧಾರ ಕಾರ್ಯಗಳನ್ನು ವೀಕ್ಷಿಸಿ ಮಾತನಾಡಿದ ರಕ್ಷಿತ್ ಶೆಟ್ಟಿ, ನಾನು ಬಾಲ್ಯದಲ್ಲಿ ಪ್ರತಿವರ್ಷ ತಂದೆಯೊಂದಿಗೆ ಕಾಪುವಿನಲ್ಲಿ ಬಾವನ ಮನೆಗೆ ಬರುವಾಗ ಮಾರಿಗುಡಿಗೆ ಬಂದು ಹೋಗುತ್ತಿದ್ದೆ, ಈಗ ಇದರ ಸಂಪೂರ್ಣ ಚಿತ್ರಣವೆ ಬದಲಾಗಿದೆ, ನನ್ನ ಬಾವ ವಾಸುದೇವ ಶೆಟ್ರ ಮುಂದಾಳತ್ವದಲ್ಲಿ ಈ ಕೆಲಸ ನಡೆಯುತ್ತಿದೆ, ಸುಮಾರು ವರ್ಷಗಳಿಂದ ಅವರು ಈ ದೇವಸ್ಥಾನವನ್ನು ಹೇಗೆ ಅಭಿವೃದ್ಧಿಪಡಿಸುವುದು ಎಂಬ ಚಿಂತನೆಯಲ್ಲಿದ್ದರು, ಪುರಾತನ ಕಾಲದಲ್ಲಿ ಈ ರೀತಿಯಾಗಿ ಕಲ್ಲಿನ ದೇವಸ್ಥಾನಗಳನ್ನು ಕಟ್ಟುತ್ತಿದ್ದರು. ಈಗಿನ ಕಾಲದಲ್ಲಿ ಅನೇಕ ಕಡೆ ಕಾಂಕ್ರೀಟ್​ನಲ್ಲೆ ದೇವಸ್ಥಾನವನ್ನು ಕಟ್ಟುತ್ತಿದ್ದಾರೆ, ದೇವಸ್ಥಾನ ಇದ್ದರೆ ಹೀಗಿರಬೇಕು, ಇಳಕಲ್​ ಕೆಂಪು ಶಿಲೆಯಲ್ಲಿ ಗರ್ಭಗುಡಿ ಬಹಳಷ್ಟು ಅದ್ಭುತವಾಗಿ ಮೂಡಿಬಂದಿದೆ ಎಂದರು.

ಇದು ಮೂರ್ನಾಲ್ಕು ಜನ ಸೇರಿ ಮಾಡುತ್ತಿರುವ ಕೆಲಸವಲ್ಲ, ಪ್ರತಿಯೊಬ್ಬ ಭಕ್ತ ಇದರಲ್ಲಿ ತೊಡಗಿಸಿಕೊಳ್ಳಬೇಕೆಂದು ಸಮಿತಿಯ ಮಹದಾಸೆ. ಈ ಪುಣ್ಯ ಕಾರ್ಯಕ್ಕೆ ಬಹಳಷ್ಟು ದಾನಿಗಳು ಸಹಕರಿಸಿದ್ದಾರೆ. ಇದು ಅಮ್ಮನ ಪ್ರೇರಣೆಯೆಂದು ಅನಿಸುತ್ತಿದೆ, ಕೆಲಸಗಳು ಪೂರ್ಣಗೊಂಡಾಗ ಇನ್ನೆಷ್ಟು ಅದ್ಭುತವಾಗಿ ಕಾಣಬಹುದು, ರಾಜ್ಯದ ಜನರೆಲ್ಲರೂ ಬಂದು ಕಣ್ತುಂಬಿಕೊಳ್ಳಿ, ಇಲ್ಲಿನ ಭಕ್ತರಿಗೆ ಒಂದು ವಿಶೇಷ ಅವಕಾಶವನ್ನು ಕಲ್ಪಿಸಲಾಗಿದೆ. 9 ಶಿಲೆ ಅಂದರೆ 9,999 ರೂಪಾಯಿ ಮೇಲ್ಪಟ್ಟು ನೀಡಿದರೆ "ಕಾಪುವಿನ ಅಮ್ಮನ ಮಕ್ಕಳು" ತಂಡದ ಸದಸ್ಯರಾಗಬಹುದು. ಈ ತಂಡಕ್ಕೆ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಸೇರಬೇಕೆಂದು ನಟ ವಿನಂತಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ರಮೇಶ್ ಹೆಗ್ಡೆ ಕಲ್ಯಾ, ಜೀರ್ಣೋದ್ಧಾರದ ಆರ್ಥಿಕ ಸಮಿತಿಯ ಪ್ರಧಾನ ಸಂಚಾಲಕರಾದ ಉದಯ ಸಂದರ್ ಶೆಟ್ಟಿ, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕರಾದ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ಪುಣೆ ಸಮಿತಿಯ ಕಾರ್ಯಾಧ್ಯಕ್ಷರಾದ ಮಾಧವ ಆರ್.ಶೆಟ್ಟಿ ಪಾದೂರು ಹೊಸಮನೆ, ಆರ್ಥಿಕ ಸಮಿತಿಯ ಚಂದ್ರಘಂಟಾ ತಂಡದ ಮುಖ್ಯ ಸಂಚಾಲಕರಾದ ಬಿ.ಕೆ.ಶ್ರೀನಿವಾಸ್, ಕಾತ್ಯಾಯಿನಿ ತಂಡದ ಮುಖ್ಯ ಸಂಚಾಲಕರಾದ ಬೀನಾ ವಿ.ಶೆಟ್ಟಿ, ಸಂಚಾಲಕರಾದ ಅನುರಾಧ ಮನೋಹರ್ ಶೆಟ್ಟಿ, ಅರ್ಚನಾ ಶೆಟ್ಟಿ, ಕವಿತಾ ಶೆಟ್ಟಿ, ಅನಿತಾ ಹೆಗ್ಡೆ, ಪ್ರಬಂಧಕರಾದ ಗೋವರ್ಧನ್ ಸೇರಿಗಾರ್ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಇದನ್ನೂ ಓದಿ: ನಮ್ಮ ಬತ್ತಳಿಕೆಯಲ್ಲಿ ಅಸ್ತ್ರಗಳಿವೆ, ಅವರ ಬತ್ತಳಿಕೆಯಲ್ಲಿ ಏನಿದೆ ಎಂಬುದು ನಮಗೆ ಗೊತ್ತು: ಡಿಸಿಎಂ

Last Updated : Feb 23, 2024, 7:45 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.