ETV Bharat / state

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ - Darshan Plea to Bail

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್​ ಜಾಮೀನು ಕೋರಿ ನಗರದ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ಮುಂದೂಡಿಕೆಯಾಗಿದೆ.

darshan
ದರ್ಶನ್ (ETV Bharat)
author img

By ETV Bharat Karnataka Team

Published : Sep 21, 2024, 3:16 PM IST

Updated : Sep 21, 2024, 6:35 PM IST

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಕರಣದಲ್ಲಿ ಜಾಮೀನು ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು 57ನೇ ಸಿಟಿ ಸಿವಿಲ್ ನ್ಯಾಯಾಲಯ ಸೋಮವಾರಕ್ಕೆ ಮುಂದೂಡಿದೆ. ಪ್ರಕರಣದ ಕುರಿತು ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿ ಎರಡು ವಾರದ ಬಳಿಕ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.

ದರ್ಶನ್ ಸಲ್ಲಿಸಿದ್ದ ಅರ್ಜಿಗೆ ಪ್ರತಿಯಾಗಿ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಿ ವಿಶೇಷ ಅಭಿಯೋಜಕರಿಗೆ ನೋಟಿಸ್ ಜಾರಿಗೊಳಿಸಿರುವ ಸಿಟಿ ಸಿವಿಲ್ ಕೋರ್ಟ್ 57ರ ನ್ಯಾಯಾಧೀಶರಾದ ಜೈಶಂಕರ್, ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದರು.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿ 100 ದಿನಗಳ ಬಳಿಕ ಜಾಮೀನು ಕೋರಿ ನಟ ದರ್ಶನ್ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ಇತ್ತೀಚೆಗೆ ವಕೀಲರೊಂದಿಗೆ ಚರ್ಚೆ ನಡೆಸಿದ್ದರು. ಪ್ರಕರಣ ಸಂಬಂಧ ದರ್ಶನ್ ಒಳಗೊಂಡಂತೆ 17 ಮಂದಿ ಆರೋಪಿಗಳ ವಿರುದ್ಧ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು 3,991 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದರು. ದೋಷಾರೋಪ ಪಟ್ಟಿ ಸಲ್ಲಿಕೆಯಾದ ಬೆನ್ನಲ್ಲೇ ನ್ಯಾಯಾಲಯಕ್ಕೆ ದರ್ಶನ್ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆಗಳಿದ್ದವು. ಇದೀಗ ವಕೀಲರೊಂದಿಗೆ ಚರ್ಚಿಸಿದ ಬಳಿಕ ಅಂತಿಮವಾಗಿ ನ್ಯಾಯಾಲಯಕ್ಕೆ ಇಂದು ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ಇತ್ತೀಚೆಗೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾಗೌಡ ಸೇರಿದಂತೆ ಕೆಲ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿತ್ತು. ಸೆಪ್ಟೆಂಬರ್​​ 30ರವರೆಗೆ ನ್ಯಾಯಾಂಗ ಬಂಧನ ಅವಧಿ ಹಿನ್ನೆಲೆಯಲ್ಲಿ ಕೆಲ ಆರೋಪಿಗಳು ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆಯಿದೆ. ಜಾಮೀನು ನಿರಾಕರಣೆ ಕೋರಿ ಸರ್ಕಾರಿ ಪರ ಅಭಿಯೋಜಕರು ಆಕ್ಷೇಪಣೆ ಸಲ್ಲಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಸದ್ಯ ದರ್ಶನ್​ ಬಳ್ಳಾರಿಯ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಕೋರ್ಟ್​ ಆದೇಶದ ಮೇರೆಗೆ ಇತ್ತೀಚೆಗೆ ಅವರನ್ನು ಪರಪ್ಪನ ಆಗ್ರಹಾರ ಜೈಲಿನಿಂದ ಬಳ್ಳಾರಿಗೆ ಸ್ಥಳಾಂತರ ಮಾಡಲಾಗಿದೆ.

ಇದನ್ನೂ ಓದಿ: ರಾಹುಲ್ ಗಾಂಧಿ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು - Rahul Gandhi

Last Updated : Sep 21, 2024, 6:35 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.