ETV Bharat / state

ವಿದ್ಯುತ್ ಬಿಲ್​ನಲ್ಲಿ ಹೆಚ್ಚುವರಿ ಭದ್ರತಾ ಠೇವಣಿ: ಗ್ರಾಹಕರ ಗೊಂದಲಕ್ಕೆ ಬೆಸ್ಕಾಂ ಸ್ಪಷ್ಟನೆ - BESCOM Clarification

ವಿದ್ಯುತ್ ಬಿಲ್​ನಲ್ಲಿ ಹೆಚ್ಚುವರಿ ಭದ್ರತಾ ಠೇವಣಿಯ ಬಗ್ಗೆ ಗ್ರಾಹಕರಲ್ಲಿ ಗೊಂದಲ ಉಂಟಾಗಿದ್ದು, ಬೆಸ್ಕಾಂ ಸ್ಪಷ್ಟನೆ ನೀಡಿದೆ.

SECURITY DEPOSIT  CONSUMER CONFUSION  BESCOM CLARIFIES  BENGALURU
ಬೆಸ್ಕಾಂ (ETV Bharat)
author img

By ETV Bharat Karnataka Team

Published : Jul 22, 2024, 6:42 AM IST

ಬೆಂಗಳೂರು: ವಿದ್ಯುತ್ ಬಿಲ್​ನಲ್ಲಿನ ಹೆಚ್ಚುವರಿ ಭದ್ರತಾ ಠೇವಣಿಯ ಕುರಿತು ಗ್ರಾಹಕರ ಗೊಂದಲಕ್ಕೆ ಬೆಸ್ಕಾಂ ಸ್ಪಷ್ಟನೆ ಕೊಟ್ಟಿದೆ. ನೂತನ ಗ್ರಾಹಕರ ವಿದ್ಯುತ್ ಬೇಡಿಕೆಯನ್ನು ಆಧರಿಸಿ, ಹೆಚ್ಚುವರಿ ಭದ್ರತಾ ಠೇವಣಿಯನ್ನು ನಿರ್ಧರಿಸಲಾಗುತ್ತದೆ. ಮುಂದಿನ ಹಣಕಾಸು ವರ್ಷದ ಆರಂಭದಲ್ಲಿ ಗ್ರಾಹಕರ ಹಿಂದಿನ ವಾರ್ಷಿಕ ಸರಾಸರಿ ಬಳಕೆಯನ್ನು ಆಧರಿಸಿ, ಗ್ರಾಹಕರು ಹೆಚ್ಚುವರಿ ಭದ್ರತಾ ಠೇವಣಿಯನ್ನು ಪಾವತಿಸಬೇಕೇ ಅಥವಾ ಅವರ ಬೇಡಿಕೆ ಕಡಿಮೆಯಿದ್ದಲ್ಲಿ ಗ್ರಾಹಕರಿಗೆ ಮರುಪಾವತಿಸಬೇಕೇ ಎನ್ನುವುದನ್ನು ಬೆಸ್ಕಾಂ ನಿರ್ಧರಿಸುತ್ತದೆ ಎಂದು ತಿಳಿಸಿದೆ.

ಹೆಚ್ಚುವರಿ ಭದ್ರತಾ ಠೇವಣಿಗೆ ನೂತನ ಹಣಕಾಸು ವರ್ಷದ‌ ಮೊದಲ ತ್ರೈಮಾಸಿಕದ ಅಂತ್ಯದಲ್ಲಿ ಠೇವಣಿಯ ಮೇಲಿನ ಬಡ್ಡಿಯನ್ನು ಗ್ರಾಹಕರ ಖಾತೆಗೆ ಪಾವತಿಸಲಾಗುತ್ತದೆ. ಪ್ರಸ್ತುತ ಗೃಹಜ್ಯೋತಿ ಯೋಜನೆ ಜಾರಿಯಲ್ಲಿರುವುದರಿಂದ ಶೂನ್ಯ ಬಿಲ್ ಪಡೆಯುತ್ತಿರುವ ಗ್ರಾಹಕರಿಗೆ ಅವರ ಖಾತೆಯಲ್ಲೇ ಭದ್ರತಾ ಠೇವಣಿಯ ಬಡ್ಡಿ ಹಣ ಜಮಾ ಆಗಿರುತ್ತದೆ. ಶೂನ್ಯ ಬಿಲ್‌ನಿಂದ ಹೊರಬಂದಾಗ ಅವರ ಖಾತೆಯಲ್ಲಿ ಜಮೆಯಾಗಿರುವ ಬಡ್ಡಿಯ ಹಣವನ್ನು ವಿದ್ಯುತ್ ಶುಲ್ಕದೊಂದಿಗೆ ಹೊಂದಿಸಲಾಗುತ್ತದೆ. ಹೆಚ್ಚುವರಿ ಭದ್ರತಾ ಠೇವಣಿ ಯಾವುದೇ ರೀತಿಯ ತೆರಿಗೆ ಅಥವಾ ಗ್ರಾಹಕರಿಂದ ಹೆಚ್ಚುವರಿಯಾಗಿ ವಸೂಲಿ ಮಾಡುವ ಮೊತ್ತವಲ್ಲ. ಬದಲಾಗಿ, ಗ್ರಾಹಕರ ವಿದ್ಯುತ್ ಬಳಕೆಗೆ ಅನುಗುಣವಾಗಿ, ಅವರ ವಾರ್ಷಿಕ ಸರಾಸರಿ ಬಳಕೆಯನ್ನು ಆಧರಿಸಿ, ನಿರ್ಧರಿಸಲಾಗುವ ಭದ್ರತಾ ಠೇವಣಿ. ವರ್ಷಾಂತ್ಯದಲ್ಲಿ ಆ ಠೇವಣಿ ಹಣಕ್ಕೆ ಗ್ರಾಹಕರಿಗೆ ಬಡ್ಡಿಯ ಲಾಭಾಂಶ ‌ನೀಡಲಾಗುತ್ತದೆ.

ಜೂನ್ ತಿಂಗಳಲ್ಲಿ ಸಾಮಾನ್ಯ ಪ್ರಮಾಣಕ್ಕಿಂತ ಹೆಚ್ಚು ವಿದ್ಯುತ್ ಬಿಲ್ ಬರುವ ಯಾವುದೇ ಕಾರಣಗಳು ಇಲ್ಲ. ವಿದ್ಯುತ್ ಬಿಲ್‌ ಗೃಹಜ್ಯೋತಿಯಡಿ ಶೂನ್ಯ. ನಿಮ್ಮ ವಿದ್ಯುತ್ ಬಿಲ್‌ನಲ್ಲಿ ಋಣಾತ್ಮಕ ಮೊತ್ತ ನಮೂದಾಗಿದ್ದರೆ, ಅದು ಜೂನ್ ತಿಂಗಳ ಅಂತ್ಯದಲ್ಲಿ ನಿಮ್ಮ ಹೆಚ್ಚುವರಿ ಭದ್ರತಾ ಠೇವಣಿಗೆ ನೀಡುವ ಬಡ್ಡಿದರವಾಗಿದೆ. ಅದನ್ನು ಮುಂದೆ ಶೂನ್ಯ ಬಿಲ್‌ನಿಂದ ಹೊರಬಂದಾಗ, ವಿದ್ಯುತ್ ಶುಲ್ಕಕ್ಕೆ ಸರಿಹೊಂದಿಸಲಾಗುವುದು. ಈ ಋಣಾತ್ಮಕ ಮೊತ್ತವನ್ನು ಗ್ರಾಹಕರು ಪಾವತಿಸಬೇಕಿರುವುದಿಲ್ಲ.

ಕೆ.ಇ.ಆರ್.ಸಿ ಆದೇಶಗಳನ್ವಯ, ಗ್ರಾಹಕರ ಹೆಚ್ಚುವರಿ ಭದ್ರತಾ ಠೇವಣಿಯನ್ನು ಅವರ ವಾರ್ಷಿಕ ವಿದ್ಯುತ್ ಬಳಕೆಯ ಸರಾಸರಿಯನ್ನು ಆಧರಿಸಿ ನಿರ್ಧರಿಸಬೇಕಿದ್ದು, ಬೇಡಿಕೆಗಿಂತ ಸರಾಸರಿ ಕಡಿಮೆಯಿದ್ದಲ್ಲಿ ಗ್ರಾಹಕರಿಗೆ ಭದ್ರತಾ ಠೇವಣಿ ಹಣವನ್ನು ಮರುಪಾವತಿಸಲಾಗುತ್ತದೆ ಅಥವಾ ಸರಾಸರಿಯು ಬೇಡಿಕೆಗಿಂತ ಹೆಚ್ಚಿದ್ದಲ್ಲಿ ಅದರನ್ವಯ ಬೇಡಿಕೆಯ ಭದ್ರತಾ ಠೇವಣಿಯನ್ನು ಗ್ರಾಹಕರಿಗೆ ವಿಧಿಸಲಾಗುತ್ತದೆ.

ಹೆಚ್ಚುವರಿ ಭದ್ರತಾ ಠೇವಣಿಯನ್ನು ನಿರ್ಧರಿಸಿ, ಗ್ರಾಹಕರಿಗೆ ನೋಟಿಸ್ ನೀಡುವ ಜವಾಬ್ದಾರಿ ಆಯಾ ಉಪವಿಭಾಗಗಳಿಗೆ ಸಂಬಂಧಿಸಿದ್ದಾಗಿದೆ. ಉಪವಿಭಾಗದಿಂದ ಸಹಾಯಕ ಅಭಿಯಂತರರು ನೋಟಿಸ್ ಹೊರಡಿಸುತ್ತಾರೆ. ಬೆಸ್ಕಾಂನ ನಿಗಮ ಕಚೇರಿಯ ಅಧಿಕೃತ ಜ್ಞಾಪನ ಪತ್ರದ ಮೂಲಕ ಈ ರೀತಿಯ ನೋಟಿಸ್ ನೀಡಲಾಗುವುದಿಲ್ಲ. ನೂತನವಾಗಿ ನಿರ್ಧರಿಸಲಾಗುವ ಭದ್ರತಾ ಠೇವಣಿಯನ್ನು ಆನ್‌ಲೈನ್ ಮೂಲಕವೂ ಪಾವತಿಸಬಹುದಾಗಿದ್ದು, ಬೆಸ್ಕಾಂ ಮಿತ್ರ ಮೊಬೈಲ್ ಆ್ಯಪ್ ಅಥವಾ ಬೆಸ್ಕಾಂನ ಅಧಿಕೃತ ವೆಬ್‌ಸೈಟ್ ಮೂಲಕ ಪಾವತಿಸಬಹುದು.

ಬೆಸ್ಕಾಂಗೆ ಸರ್ಕಾರದ ಸಬ್ಸಿಡಿಗಳು ಕೇವಲ ಕೃಷಿ‌ ಪಂಪ್‌ಸೆಟ್ ಹಾಗೂ ಗೃಹ ಜ್ಯೋತಿ ಯೋಜನೆಯಿಂದ ಮಾತ್ರ ಅನ್ವಯವಾಗುತ್ತಿದ್ದು, ಇತರೆ ಅನುದಾನವನ್ನು ಗ್ರಾಹಕರಿಗೆ ವಿದ್ಯುತ್ ಪೂರೈಕೆಯ ಮೊತ್ತದ ಮೂಲಕವೇ ಬೆಸ್ಕಾಂ ಪಡೆಯಬೇಕಿದೆ. ಹೆಚ್ಚುವರಿ ಭದ್ರತಾ ಠೇವಣಿ ಕುರಿತಾದ ಯಾವುದೇ ಗೊಂದಲಗಳಿದ್ದಲ್ಲಿ, 24×7 ಸಹಾಯವಾಣಿ 1912ಕ್ಕೆ ಕರೆಮಾಡಿ ಪರಿಹರಿಸಿಕೊಳ್ಳಬಹುದು ಎಂದು ಬೆಸ್ಕಾಂ ಹೇಳಿದೆ.

ಇದನ್ನೂ ಓದಿ: ಭೂಮಿಯ ತಿರುಗುವಿಕೆ ವೇಗ ತಗ್ಗಿದೆಯೇ?: ಭವಿಷ್ಯದಲ್ಲಿ ದಿನದ ಅವಧಿ 25 ಗಂಟೆ ಆಗಲಿದೆಯಾ!? - earth rotation speed change

ETV Bharat Logo

Copyright © 2024 Ushodaya Enterprises Pvt. Ltd., All Rights Reserved.