ETV Bharat / state

ಮಹಾಶಿವರಾತ್ರಿ ಪ್ರಯುಕ್ತ ಕೆಎಸ್​ಆರ್​ಟಿಸಿಯಿಂದ 1,500 ಹೆಚ್ಚುವರಿ ವಿಶೇಷ ಬಸ್​ ವ್ಯವಸ್ಥೆ - Bus advance Booking

ಮಾರ್ಚ್​ 8ರ ಮಹಾಶಿವರಾತ್ರಿ ಪ್ರಯುಕ್ತ ಸಾರ್ವಜನಿಕರು ಓಡಾಡಲು ಅನುವಾಗುವಂತೆ ಕೆಎಸ್​ಆರ್​ಟಿಸಿ ವಿಶೇಷ ಬಸ್​ಗಳ ವ್ಯವಸ್ಥೆ ಕಲ್ಪಿಸುತ್ತಿದೆ.

KSRTC
KSRTC
author img

By ETV Bharat Karnataka Team

Published : Mar 5, 2024, 8:16 AM IST

Updated : Mar 5, 2024, 6:06 PM IST

ಬೆಂಗಳೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಭಕ್ತರು ತಮ್ಮ ತಮ್ಮ ಊರುಗಳಿಗೆ ತೆರಳಿ ಹಬ್ಬವನ್ನು ಆಚರಿಸಲು ಪೂರಕವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್‌ಆರ್‌ಟಿಸಿ) 1,500 ಹೆಚ್ಚುವರಿ ವಿಶೇಷ ಬಸ್‌ಗಳ ಸೌಲಭ್ಯ ಕಲ್ಪಿಸಿದೆ. ಕೇವಲ ತೆರಳಲು ಮಾತ್ರವಲ್ಲದೇ ಹಬ್ಬ ಮುಗಿಸಿ ವಾಪಸಾಗುವವರಿಗೂ ಬಸ್ ವ್ಯವಸ್ಥೆ ಒದಗಿಸಲಾಗುತ್ತಿದೆ.

ಮಾರ್ಚ್ 8 ಮಹಾಶಿವರಾತ್ರಿ ಹಾಗು 9 ಮತ್ತು 10 ವಾರಾಂತ್ಯ ದಿನಗಳಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ರಾಜ್ಯದ ವಿವಿಧ ಭಾಗಗಳಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಮಾರ್ಚ್ 7ರಿಂದ 10ರವರೆಗೆ ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ನಂತರ ಹಬ್ಬ ಮತ್ತು ವಾರಾಂತ್ಯದ ರಜೆ ಮುಗಿಸಿ ರಾಜ್ಯದ ವಿವಿಧ ಭಾಗ ಮತ್ತು ಹೊರರಾಜ್ಯಗಳಿಂದ ಬೆಂಗಳೂರಿಗೆ ಮರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಮಾರ್ಚ್ 10 ಮತ್ತು 11ರಂದು ಹೆಚ್ಚುವರಿ ವಿಶೇಷ ಸಾರಿಗೆ ವ್ಯವಸ್ಥೆಯಾಗಿದೆ.

ಯಾವ ನಿಲ್ದಾಣದಿಂದ ಯಾವ ಭಾಗಕ್ಕೆ ಸಂಚಾರ?: ಕೆಂಪೇಗೌಡ ಬಸ್​ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್​ ಮುಂತಾದ ಸ್ಥಳಗಳಿಗೆ ವಿಶೇಷ ಬಸ್​ಗಳನ್ನು ಒದಗಿಸಲಾಗುತ್ತದೆ.

ಹಾಗೆಯೇ, ಮೈಸೂರು ಬಸ್​ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಬಸ್​ಗಳು ತೆರಳಲಿವೆ.

ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಬಕೋಣಂ, ಚೆನ್ನೈ, ಕೊಯಮತ್ತೂರು, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಒದಗಿಸಲಾಗುತ್ತದೆ.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೆಟ್​ಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್ ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಸಾರಿಗೆ ಸಂಸ್ಥೆ ಕೋರಿದೆ.

ಇ-ಟಿಕೆಟ್​ ಬುಕಿಂಗ್‌ ಅನ್ನು www.ksrtc.karnataka.gov.in ವೆಬ್‌ಸೈಟ್ ಮುಖಾಂತರ ಮಾಡಬಹುದು. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇಕಡಾ 5ರಷ್ಟು ರಿಯಾಯಿತಿ ನೀಡಲಾಗುವುದು. ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್​ ಅನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇ.10ರಷ್ಟು ರಿಯಾಯಿತಿ ನೀಡಲಾಗುವುದು.

ಕರ್ನಾಟಕ ಹಾಗೂ ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೇರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳಿದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ ಎಂದು ಕೆಎಸ್​ಆರ್​ಟಿಸಿ ಪ್ರಕಟಣೆ ಮೂಲಕ ತಿಳಿಸಿದೆ.

ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‌ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ. ಹಾಗೂ ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ. ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ತಿಳಿಸಿದೆ.

ಇದನ್ನೂ ಓದಿ: ಮಹದೇಶ್ವರ ಬೆಟ್ಟದ ಮಹಾಶಿವರಾತ್ರಿ ಜಾತ್ರೆಗೆ ಅಗತ್ಯ ಸಿದ್ದತೆ ಕೈಗೊಳ್ಳಿ: ಸಚಿವ ಕೆ ವೆಂಕಟೇಶ್ ಸೂಚನೆ

Last Updated : Mar 5, 2024, 6:06 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.