ETV Bharat / state

ಹೊಸ ಜಾಹೀರಾತು ನೀತಿ, ಒಂದು ವಾರದೊಳಗೆ ಸಾರ್ವಜನಿಕ ಚರ್ಚೆಗೆ ಅವಕಾಶ: ಡಿಸಿಎಂ - NEW ADVERTISEMENT POLICY - NEW ADVERTISEMENT POLICY

ಒಂದು ವಾರದೊಳಗೆ ಜಾಹೀರಾತು ನೀತಿಯ ಕರಡು ಪ್ರತಿಯನ್ನು ಸಾರ್ವಜನಿಕರ ಚರ್ಚೆಗಾಗಿ ಬಿಡುಗಡೆ ಮಾಡಲಿದ್ದೇವೆ. ಕರಡು ಪ್ರತಿಯ ಬಗ್ಗೆ ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗುವುದಾಗಿ ಡಿಸಿಎಂ ಡಿಕೆ ಶಿವಕುಮಾರ್​ ತಿಳಿಸಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್
ಡಿಸಿಎಂ ಡಿ.ಕೆ.ಶಿವಕುಮಾರ್ (ETV Bharat)
author img

By ETV Bharat Karnataka Team

Published : Jun 22, 2024, 10:58 AM IST

ಬೆಂಗಳೂರು: ಮುಂದಿನ ಒಂದು ವಾರದೊಳಗೆ ಜಾಹೀರಾತು ನೀತಿಯ ಕರಡು ಪ್ರತಿಯನ್ನು ಸಾರ್ವಜನಿಕ ಚರ್ಚೆಗೆ ಬಿಡುಗಡೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ನಡೆದ ಅಧಿಕಾರಿಗಳ ಸಭೆ ಬಳಿಕ ಮಾಧ್ಯಮ ಗೋಷ್ಠಿ ನಡೆಸಿ ಮಾತನಾಡಿದ ಅವರು, ಕರಡು ಪ್ರತಿಯ ಕುರಿತು ಆಕ್ಷೇಪಣೆಗಳನ್ನು ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗುವುದು. ಅನೇಕ ವರ್ಷಗಳಿಂದ ನ್ಯಾಯಾಲಯದಲ್ಲಿ ಪ್ರಕರಣಗಳು ಇದ್ದ ಕಾರಣಕ್ಕೆ ಕಳೆದ ಒಂದು ವರ್ಷದಿಂದ ಜಾಹೀರಾತು ನೀತಿ ಬಾಕಿ ಉಳಿದಿತ್ತು. ಪ್ರಸ್ತುತ ಸಂಘ, ಸಂಸ್ಥೆಗಳ ಜೊತೆ ಚರ್ಚೆ ನಡೆಸಲಾಗಿದೆ ಎಂದು ಹೇಳಿದರು.

60 ಅಡಿಗಿಂತ ಹೆಚ್ಚು ಅಗಲ ಇರುವ ರಸ್ತೆಗಳಲ್ಲಿ ಗ್ರೂಪ್ ಪ್ಯಾಕೇಜ್ ತಯಾರಿಸಿ ಅವಕಾಶ ನೀಡಲಾಗುವುದು. ಸರ್ಕಾರಿ ಮತ್ತು ಖಾಸಗಿ ಕಟ್ಟಡಗಳ ಮೇಲೆ ಜಾಹೀರಾತು ನೀಡಲು ಅವಕಾಶ ನೀಡಲಾಗುವುದು. ಬಿಬಿಎಂಪಿಗೆ ತೆರಿಗೆ ನೀಡಿ ಖಾಸಗಿ ಕಟ್ಟಡಗಳು ಬಾಡಿಗೆ ನೀಡಬಹುದು. ಕಟ್ಟಡಗಳ ವಿಸ್ತೀರ್ಣ, ಎತ್ತರಕ್ಕೆ ತಕ್ಕಂತೆ ಯೂನಿಫಾರ್ಮಿಟಿ ತರಲಾಗುವುದು. ಮನಬಂದಂತೆ ಹಾಕಲು ಅವಕಾಶವಿಲ್ಲ. ಫಲಕಗಳನ್ನು ಮಾಡಲು ಯಾವ ಗುಣಮಟ್ಟದ ವಸ್ತು ಬಳಸಬೇಕು ಎಂದು ನಂತರ ತಿಳಿಸಲಾಗುವುದು. ಸರ್ಕಾರದಲ್ಲಿ ಇರುವ ಮೀಸಲಾತಿಗೆ ಅನುಗುಣವಾಗಿ ನೀಡಲಾಗುವುದು. ಪಿಪಿಪಿ ಮಾದರಿಯಲ್ಲಿ ಹಿಂದಿನ ಸರ್ಕಾರ ಒಂದಷ್ಟು ಅವಕಾಶ ನೀಡಿದ್ದು ಕಾನೂನು ಪ್ರಕಾರವಾಗಿ ಇದ್ದರೆ ರಕ್ಷಣೆ ಮಾಡಲಾಗುವುದು. ಏನೂ ಮಾಡದೇ ಇದ್ದವರನ್ನು ಕಾನೂನಿನ ಪ್ರಕಾರ ವಜಾ ಮಾಡಲಾಗುವುದು ಎಂದು ಹೇಳಿದರು.

60 ಅಡಿಗಿಂತ ರಸ್ತೆ ಕಡಿಮೆ ಇದ್ದು, ಕಮರ್ಷಿಯಲ್ ವಲಯ ಎಂದು ಗುರುತಿಸಿದ್ದರೆ ಅಲ್ಲಿ ಜಾಹೀರಾತು ಅಳವಡಿಕೆಗೆ ಅವಕಾಶ ನೀಡಲಾಗುವುದು. ಜನಸಾಂದ್ರತೆ ಹಾಗೂ ವಹಿವಾಟು ಹೆಚ್ಚಿರುವ ಕಡೆ ಅವಕಾಶ ನೀಡಲಾಗುವುದು. ಸರ್ಕಾರಕ್ಕೆ ಹಣ ಬಾಕಿ ಉಳಿಸಿಕೊಂಡಿರುವ, ದಾವೆ ಹೂಡಿರುವವರಿಗೆ ಯಾವುದೇ ಕಾರಣಕ್ಕೂ ಅವಕಾಶ ಮಾಡಿಕೊಡುವುದಿಲ್ಲ. ನಾವು ಹೇಗೆ ಚುನಾವಣೆಗೆ ನಿಲ್ಲುವಾಗ ಯಾವುದೇ ಬಾಕಿಗಳನ್ನು ಉಳಿಸಿಕೊಳ್ಳದೇ ಇರುತ್ತೇವೆ, ಅದೇ ರೀತಿ ಇಲ್ಲಿ ಭಾಗವಹಿಸುವವರು ಎಲ್ಲಾ ಬಾಕಿಗಳನ್ನು ಕಟ್ಟಬೇಕು ಎಂದರು.

ನ್ಯಾಯಲಯದಲ್ಲಿರುವ ಒಂದಷ್ಟು ಪ್ರಕರಣಗಳ ಕುರಿತ ಪ್ರಶ್ನೆಗೆ ಉತ್ತರಿಸಿ, ಆ ಪ್ರಕರಣಗಳಿಗೆ ನಾವು ಏನು ಮಾಡಲು ಆಗುವುದಿಲ್ಲ. ಅಲ್ಲಿ ತೀರ್ಮಾನವಾದ ನಂತರ ಬಗೆಹರಿಸಬಹುದು. ಜೊತೆಗೆ ನ್ಯಾಯಾಲಯವು ಒಂದಷ್ಟು ಸೂಚನೆಗಳನ್ನು ನೀಡಿತ್ತು ಅದನ್ನು ಗಣನೆಗೆ ತೆಗೆದುಕೊಂಡು ನಿಯಮಗಳನ್ನು ರೂಪಿಸಲಾಗಿದೆ. ಮೆಟ್ರೋ ಒಳಗೆ ನಿಗಮ ನೋಡಿಕೊಳ್ಳುತ್ತದೆ. ಹೊರಗಡೆ ಪಾಲಿಕೆ ಮತ್ತು ಮೆಟ್ರೋ ಸಹಭಾಗಿತ್ವದಲ್ಲಿ ಪ್ರತ್ಯೇಕ ಪ್ಯಾಕೇಜ್ ಘೋಷಣೆ ಮಾಡಲಾಗುವುದು ಎಂದು ಹೇಳಿದರು.

ಸುಮಾರು 600 ಕೋಟಿ ಜಾಹೀರಾತು ಹಣ ಬಾಕಿ ಇದೆ ಇದಕ್ಕೆ ಪರಿಹಾರ ಏನು ಎನ್ನುವ ಪ್ರಶ್ನೆಗೆ ಉತ್ತರಿಸಿ, ಎಲ್ಲವನ್ನು ವಸೂಲಿ ಮಾಡಲಾಗುವುದು, ಹಾಗೂ ಬಾಕಿ ಉಳಿಸಿಕೊಂಡವರು ಭಾಗವಹಿಸಲು ಅವಕಾಶ ನೀಡುವುದಿಲ್ಲ ಎಂದರು. ವಾರ್ಷಿಕ ಆದಾಯದ ಕುರಿತ ಪ್ರಶ್ನೆಗೆ ಇನ್ನು ಮಗುನೇ ಹುಟ್ಟಿಲ್ಲ, ಮೊದಲೇ ಬಟ್ಟೆಯನ್ನು ಏಕೆ ಹೊಲೆಸಲಿ ಎಂದು ಮರು ಪ್ರಶ್ನಿಸಿದರು.

ಇದನ್ನೂ ಓದಿ: ಮೆಜೆಸ್ಟಿಕ್ ಸುತ್ತಮುತ್ತ ಎಲ್ಲೆಂದರಲ್ಲಿ ವಾಹನ ಪಾರ್ಕಿಂಗ್​​​ಗೆ ನಿಷೇಧ: ಉಲ್ಲಂಘಿಸಿದರೆ ಭಾರಿ ದಂಡ - Parking Ban Near Majestic

ETV Bharat Logo

Copyright © 2024 Ushodaya Enterprises Pvt. Ltd., All Rights Reserved.