ETV Bharat / state

ನಲ್ಲಿಗಳಿಗೆ ಏರಿಯೇಟರ್ ಅಳವಡಿಕೆಯ ಗಡುವು ವಿಸ್ತರಣೆ, ಮೇ 8 ರಿಂದ ದಂಡ: ಜಲಮಂಡಳಿ ಅಧ್ಯಕ್ಷ - Aerators installation

ನಲ್ಲಿಗಳಿಗೆ ಏರಿಯೇಟರ್ ಅಳವಡಿಕೆ ಗಡುವುದು ಮೇ 7ರವರೆಗೆ ವಿಸ್ತರಿಸಲಾಗಿದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಮಾಹಿತಿ ನೀಡಿದ್ದಾರೆ.

AERATORS INSTALLATION
AERATORS INSTALLATION
author img

By ETV Bharat Karnataka Team

Published : May 2, 2024, 9:34 AM IST

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನೀರಿನ ಅಭಾವ ಉಂಟಾದ ಹಿನ್ನೆಲೆಯಲ್ಲಿ ನೀರು ಪೋಲಾಗುವುದನ್ನು ತಡೆಯಲು ಜಲಮಂಡಳಿ ಮುಂದಾಗಿ ಏರಿಯೇಟರ್ ಅಳವಡಿಸಿಕೊಳ್ಳುವಂತೆ ಸೂಚಿಸಿತ್ತು. ಇದೀಗ ಏರಿಯೇಟರ್ ಅಳವಡಿಕೆಯ ಗಡುವು ಮೇ 7 ರವರೆಗೆ ವಿಸ್ತರಿಸಲಾಗಿದೆ. ಏರಿಯೇಟರ್ ಅಳವಡಿಸಿಕೊಳ್ಳದವರಿಗೆ ಮೇ 8 ರಿಂದ ದಂಡ ಹಾಕಲಾಗುವುದು ಎಂದು ಜಲಮಂಡಳಿ ಅಧ್ಯಕ್ಷ ರಾಮ್‌ ಪ್ರಸಾತ್‌ ಮನೋಹರ್‌ ಹೇಳಿದ್ದಾರೆ.

ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ನೀರು ಉಳಿತಾಯ ಹಾಗೂ ನೀರಿನ ಸದ್ಬಳಕೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಮಾಲ್‌ಗಳಲ್ಲಿ, ವಾಣಿಜ್ಯ ಸಂಕೀರ್ಣಗಳಲ್ಲಿ, ಅಪಾರ್ಟ್‌ಮೆಂಟ್‌ಗಳಲ್ಲಿ, ಸರ್ಕಾರಿ ಕಟ್ಟಡಗಳಲ್ಲಿ, ಐಷಾರಾಮಿ ಹೊಟೇಲ್‌ಗಳಲ್ಲಿ, ರೆಸ್ಟೋರೆಂಟ್‌ಗಳಲ್ಲಿ ಹಾಗೂ ಧಾರ್ಮಿಕ ಸ್ಥಳಗಳನ್ನೊಳಗೊಂಡ ಸಾರ್ವಜನಿಕ ಪ್ರದೇಶಗಳಲ್ಲಿ ಸ್ವಚ್ಛತೆಗಾಗಿ ಬಳಸುವ ನಲ್ಲಿಗಳಲ್ಲಿ ಕಡ್ಡಾಯವಾಗಿ ಏರಿಯೇಟರ್‌(ಫ್ಲೋ ರಿಸ್ಟ್ರಿಕ್ಟರ್‌) ಅಳವಡಿಸಿಕೊಳ್ಳಲು ಏಪ್ರಿಲ್​​ವರೆಗೆ ಅವಕಾಶ ನೀಡಲಾಗಿತ್ತು. ಆದರೆ, ಸಾರ್ವಜನಿಕರು ಈ ಗಡುವನ್ನು ವಿಸ್ತರಿಸುವಂತೆ ಕೋರಿದ ಹಿನ್ನೆಲೆ ಮೇ 7 ರವರೆಗೆ ಅವಕಾಶ ವಿಸ್ತರಿಸಲಾಗಿದೆ ಎಂದಿದ್ದಾರೆ.

ಈಗಾಗಲೇ ನಗರದಾದ್ಯಂತ ಬಹಳಷ್ಟು ಕಡೆಗಳಲ್ಲಿ ಸುಮಾರು 6 ಲಕ್ಷಕ್ಕೂ ಹೆಚ್ಚು ಏರಿಯೇಟರ್‌ಗಳನ್ನು ಅಳವಡಿಸಿಕೊಳ್ಳಲಾಗಿದೆ. ಮಾಲ್‌, ವಾಣಿಜ್ಯ ಸಂಕೀರ್ಣ, ಅಪಾರ್ಟ್‌ಮೆಂಟ್‌, ಸರ್ಕಾರಿ ಕಟ್ಟಡ, ಐಷಾರಾಮಿ ಹೊಟೇಲ್‌, ರೆಸ್ಟೋರೆಂಟ್‌ ಹಾಗೂ ಧಾರ್ಮಿಕ ಸ್ಥಳಗಳನ್ನೊಳಗೊಂಡ ಸಾರ್ವಜನಿಕ ಪ್ರದೇಶಗಳಲ್ಲಿ. ಮೇ 7 ರ ಒಳಗಾಗಿ ಏರಿಯೇಟರ್‌/ಫ್ಲೋ ರಿಸ್ಟ್ರಿಕ್ಟರ್‌ ಅಳವಡಿಸಿಕೊಳ್ಳದೇ ಇದ್ದಲ್ಲಿ ಮೇ 8 ರ ನಂತರ ಜಲಮಂಡಳಿ ಅಧಿಕಾರಿಗಳು ಪರಿಶೀಲನೆ ನಡೆಸಿ ದಂಡ ವಿಧಿಸಲಿದ್ದಾರೆ ಎಂದು ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಸಿಲಿನ ಝಳಕ್ಕೆ ಬೆಂಡಾದ ಬೆಂಗಳೂರಿಗರು: ರಾಜ್ಯಾದ್ಯಂತ ಇನ್ನೂ ಒಂದು ವಾರ ಬಿಸಿ ಗಾಳಿ - Heatwave In Karnataka

ಜಲಮಂಡಳಿ ಸಿಬ್ಬಂದಿಗೆ ಉಚಿತ ಚಿಕಿತ್ಸೆ: ಬೆಂಗಳೂರು ನಗರಕ್ಕೆ ನಿರಂತರವಾಗಿ ನೀರು ಸರಬರಾಜು ಮಾಡಲು ಹಾಗೂ ನಗರದ ಸ್ವಾಸ್ಥ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತಿರುವ ಜಲಮಂಡಳಿಯ ವಾಟರ್‌ಮ್ಯಾನ್‌, ಸ್ಯಾನಿಟರಿ ವರ್ಕರ್‌, ಜೆಟ್ಟಿ ಡ್ರೈವರ್‌ ಸೇರಿದಂತೆ ಎಲ್ಲ ಸಿಬ್ಬಂದಿಗೂ ಜಲ ಮಂಡಳಿ ವತಿಯಿಂದ ಮೇ ತಿಂಗಳಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ ನಡೆಸಲಾಗುವುದು ಎಂದು ಜಲಮಂಡಳಿ ಅಧ್ಯಕ್ಷ ಡಾ. ವಿ ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದರು.

ಬುಧವಾರ ನಗರದ ಹೆಚ್‌ ಬಿ ಆರ್‌ ಜಲಮಂಡಳಿ ಕಚೇರಿಯಲ್ಲಿ ಕಾರ್ಮಿಕ ದಿನಾಚರಣೆ ನಿಮಿತ್ತ ಆಲ್ಟಿಯಸ್‌ ಮತ್ತು ಲಕ್ಷ್ಮಿ ಗ್ರೂಪ್‌ ಆಸ್ಪತ್ರೆ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕಾರ್ಮಿಕರು ಹಾಗೂ ಸಿಬ್ಬಂದಿಯ ಆರೋಗ್ಯದ ಬಗ್ಗೆ ಮಂಡಳಿ ವಿಶೇಷ ಕಾಳಜಿ ಹೊಂದಿದೆ. ಮಂಡಳಿಯ ಕಾರ್ಮಿಕರ ಆರೋಗ್ಯವನ್ನು ಸುಸ್ಥಿಯಲ್ಲಿಡುವ ದೃಷ್ಟಿಯಿಂದ ಪ್ರತಿವರ್ಷ ಮೇ ತಿಂಗಳಲ್ಲಿ ಉಚಿತ ಆರೋಗ್ಯ ತಪಾಸಣೆ ನಡೆಸಲಾಗುವುದು ಎಂದು ಡಾ.ರಾಮ್‌ ಪ್ರಸಾತ್‌ ಮನೋಹರ್‌ ಮಾಹಿತಿ ನೀಡಿದರು.

ಈ ವೇಳೆ ನಿರ್ವಹಣಾ ವಿಭಾಗದ ಮುಖ್ಯ ಅಭಿಯಂತರರಾದ ಕುಮಾರ್ ನಾಯ್ಕ್, ಎಸ್ ಈ ದಲಾಯತ್, ಕಾರ್ಯನಿರ್ವಾಹಕ ಇಂಜಿನಿಯರ್ ಚನ್ನಬಸವರಾಜು ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ 300 ಕ್ಕೂ ಹೆಚ್ಚು ಸಿಬ್ಬಂದಿ ಹಾಗೂ ಅವರ ಕುಟುಂಬದ ಸದಸ್ಯರು ಆರೋಗ್ಯ ಶಿಬಿರದ ಲಾಭ ಪಡೆದುಕೊಂಡರು.

ಇದನ್ನೂ ಓದಿ: ಬತ್ತಿದ ಜಲ ಮೂಲಗಳು: ಪ್ರಾಣಿಗಳ ದಾಹ ನೀಗಿಸಲು ಕೆರೆಗೆ ಟ್ಯಾಂಕರ್​ ನೀರು - Tanker Water For wild animals

ETV Bharat Logo

Copyright © 2024 Ushodaya Enterprises Pvt. Ltd., All Rights Reserved.