ಬೆಂಗಳೂರು: ಏರೋ ಇಂಡಿಯಾ ವೈಮಾನಿಕ ಪ್ರದರ್ಶನ 2025 ಹಿನ್ನೆಲೆಯಲ್ಲಿ ಫೆಬ್ರವರಿ 5ರಿಂದ 14ರವರೆಗೆ ಕೆಲ ಅವಧಿಗಳಲ್ಲಿ ವಾಯುಪ್ರದೇಶವನ್ನು ಮುಚ್ಚುವುದಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ತಿಳಿಸಿದೆ. ಸದ್ಯ ವಾಯುಪ್ರದೇಶವನ್ನು ಮುಚ್ಚುವ ಪರಿಷ್ಕೃತ ಸಮಯ ಪಟ್ಟಿಯನ್ನು ಕೆಐಎ ಪ್ರಕಟಿಸಿದೆ.
ಫೆಬ್ರವರಿ 5, 6 ಮತ್ತು 8ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ ಮತ್ತು ಮಧ್ಯಾಹ್ನ 3ರಿಂದ 4.30 ರವರೆಗೆ ವಾಯುಪ್ರದೇಶವನ್ನು ಮುಚ್ಚಲಾಗುವುದು ಎಂದು ಕೆಐಎ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹಾಗೆಯೇ ಫೆಬ್ರವರಿ 7 ಮತ್ತು 9ರಂದು ಬೆಳಿಗ್ಗೆ 9ರಿಂದ 11ರವರೆಗೆ, ಫೆಬ್ರವರಿ 7ರಂದು ಮಧ್ಯಾಹ್ನ 3ರಿಂದ ಸಂಜೆ 4.30ರವರೆಗೆ ವಾಯುಪ್ರದೇಶವನ್ನು ಮುಚ್ಚಲಾಗುವುದು.
ಫೆಬ್ರವರಿ 10ರಂದು ಬೆಳಿಗ್ಗೆ 9ರಿಂದ 11.30ರವರೆಗೆ ಮತ್ತು ಮಧ್ಯಾಹ್ನ 2.30ರಿಂದ 3.30ರವರೆಗೆ ಮುಚ್ಚಲಾಗುವುದು. ಫೆಬ್ರವರಿ 11 ಮತ್ತು 12ರಂದು ಮಧ್ಯಾಹ್ನ 12ರಿಂದ 2.30ರವರೆಗೆ ಮುಚ್ಚಲಾಗುವುದು. ಫೆಬ್ರವರಿ 13 ಮತ್ತು 14ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 12ರವರೆಗೆ ಮತ್ತು ಮಧ್ಯಾಹ್ನ 2.30ರಿಂದ ಸಂಜೆ 5ರವರೆಗೆ ವಾಯುಪ್ರದೇಶವನ್ನು ಮುಚ್ಚಲಾಗುವುದು.
ಪರಿಷ್ಕೃತ ಅಥವಾ ಹೊಸ ವಿಮಾನ ವೇಳಾಪಟ್ಟಿಯ ವಿವರಗಳಿಗಾಗಿ ಆಯಾ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸುವಂತೆ ಕೆಐಎ ಪ್ರಯಾಣಿಕರಿಗೆ ಸಲಹೆ ನೀಡಿದೆ. ಫೆಬ್ರವರಿ 5ರಿಂದ 14ರವರೆಗೆ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ ಪ್ರದರ್ಶನ ನಡೆಯಲಿದೆ.
ಇದನ್ನೂ ಓದಿ: ಮಿತಿಮೀರಿ ಬಡ್ಡಿ ವಿಧಿಸುವ ಲೇವಾದೇವಿಗಾರರೇ ಹುಷಾರ್: 10 ವರ್ಷದವರೆಗೆ ಶಿಕ್ಷೆ ವಿಧಿಸಲು ಸಿದ್ಧತೆ! - EXORBITANT INTEREST