ETV Bharat / state

ಶಿವಮೊಗ್ಗ: ಆಗಸ್ಟ್​ 22 ರಿಂದ 31ರ ವರೆಗೆ ಅಗ್ನಿಪಥ್​ ಸೇನಾ ನೇಮಕಾತಿ ರ‍್ಯಾಲಿ - AGNI PATH RECRUITMENT RALLY

ಆಗಸ್ಟ್​ 22 ರಿಂದ ಆಗಸ್ಟ್​ 31ರ ವರೆಗೆ ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಅಗ್ನಿಪಥ್​ ಸೇನಾ ನೇಮಕಾತಿ ರ‍್ಯಾಲಿ ನಡೆಯಲಿದೆ.

ಅಗ್ನಿಪಥ್​ ಸೇನಾ ನೇಮಕಾತಿ ರ‍್ಯಾಲಿ
ಅಗ್ನಿಪಥ್​ ಸೇನಾ ನೇಮಕಾತಿ ರ‍್ಯಾಲಿ (IANS)
author img

By ETV Bharat Karnataka Team

Published : Aug 13, 2024, 7:40 AM IST

Updated : Aug 13, 2024, 7:53 AM IST

ಶಿವಮೊಗ್ಗ: 2024ನೇ ಸಾಲಿನಲ್ಲಿ ಅಗ್ನಿಪಥ್​​​​​ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಲಿಖಿತ ಪರೀಕ್ಷೆಯಲ್ಲಿ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ದೈಹಿಕ ಹಾಗೂ ವೈದ್ಯಕೀಯ ಪರೀಕ್ಷೆಗಳಿಗಾಗಿ ಅಗ್ನಿವೀರ್​​ ಸೇನಾ ನೇಮಕಾತಿ ರ‍್ಯಾಲಿಯನ್ನು ಆಗಸ್ಟ್​ 22 ರಿಂದ ಆಗಸ್ಟ್​ 31ರ ವರೆಗೆ ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಸೇನಾ ನೇಮಕಾತಿ ನಿರ್ದೇಶಕರು, ಮಂಗಳೂರು ಇವರು ಆಯೋಜಿಸುತ್ತಿದ್ದಾರೆ.

"ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ಪತ್ರಗಳನ್ನು ಅಭ್ಯರ್ಥಿಗಳ ಇಮೇಲ್ ಮೂಲಕ ರವಾನಿಸಲಾಗಿದೆ. ಈ ರ‍್ಯಾಲಿಯು ಶಿವಮೊಗ್ಗ, ದಾವಣಗೆರೆ, ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಗದಗ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಅಭ್ಯರ್ಥಿಗಳಿಗೆ ಮಾತ್ರ ಮೀಸಲಾಗಿರುತ್ತದೆ" ಎಂದು ನೇಮಕಾತಿ ನಿರ್ದೇಶಕರು, ಮಂಗಳೂರು ಇವರ ಕೋರಿಕೆಯ ಮೇರೆಗೆ ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇದನ್ನೂ ಓದಿ: 6,000ಕ್ಕೂ ಹೆಚ್ಚು ಗ್ರಂಥ ಮೇಲ್ವಿಚಾರಕರು ಕನಿಷ್ಠ ವೇತನ ವ್ಯಾಪ್ತಿಗೆ: ಸಿಎಂ ಸಿದ್ದರಾಮಯ್ಯ ಘೋಷಣೆ - Good News For Librarians

Last Updated : Aug 13, 2024, 7:53 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.