ETV Bharat / state

ಫೆ.28ರೊಳಗೆ ಶೇ.100ರಷ್ಟು ಆರ್ಥಿಕ, ಭೌತಿಕ ಗುರಿ ಸಾಧನೆಗೆ ಸಚಿವ ಚಲುವರಾಯಸ್ವಾಮಿ ಸೂಚನೆ - CHELUVARAYASWAMY MEETING

ರಾಜ್ಯದಲ್ಲಿ ಜಲಾನಯನ ಯೋಜನೆಗಳ ಅನುಷ್ಠಾನ ಕುರಿತು ಸಚಿವ ಎನ್.ಚಲುವರಾಯಸ್ವಾಮಿ ಸಭೆ ನಡೆಸಿದರು.

CHELUVARAYASWAMY MEETING
ಸಚಿವ ಎನ್.ಚಲುವರಾಯಸ್ವಾಮಿ (ETV Bharat)
author img

By ETV Bharat Karnataka Team

Published : Jan 28, 2025, 7:12 PM IST

ಬೆಂಗಳೂರು: ಕೃಷಿ ಹಾಗೂ ಜಲಾನಯನ ಇಲಾಖೆಗಳಲ್ಲಿ ಫೆ. 28ರೊಳಗೆ ಶೇ.100ರಷ್ಟು ಆರ್ಥಿಕ ಹಾಗೂ ಭೌತಿಕ ಗುರಿ ಸಾಧನೆ ಮಾಡಬೇಕು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಜಲಾನಯನ ಯೋಜನೆಗಳ ಅನುಷ್ಠಾನ ಕುರಿತು ಜಂಟಿ ಕೃಷಿ ನಿರ್ದೇಶಕರೊಂದಿಗೆ ವಿಕಾಸಸೌಧದಲ್ಲಿ ಇಂದು ಸಂಜೆ ವಿಡಿಯೋ ಸಂವಾದ ನಡೆಸಿ ಪ್ರಗತಿ ಪರಿಶೀಲಿಸಿದ ಸಚಿವರು, ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಇಲಾಖೆ ಕಾರ್ಯದರ್ಶಿಯವರಿಗೆ ನಿರ್ದೇಶನ ನೀಡಿದರು.

Agriculture Minister Cheluvarayaswamy Meeting
ಅಧಿಕಾರಿಗಳೊಂದಿಗೆ ಸಚಿವ ಎನ್.ಚಲುವರಾಯಸ್ವಾಮಿ ಸಭೆ (ETV Bharat)

ಜಲಾನಯನ ಯೋಜನೆಗಳ ಅನುಷ್ಠಾನದಲ್ಲಿ ಕರ್ನಾಟಕ ರಾಜ್ಯ ದೇಶದಲ್ಲೇ ಮುಂಚೂಣಿಯಲ್ಲಿದ್ದು, ಕಳೆದ ಸಾಲಿನಲ್ಲಿ ಶೇ.124ರಷ್ಟು ಅನುದಾನ ಸದ್ಬಳಕೆ ಮಾಡಲಾಗಿತ್ತು. ಈ ಬಾರಿಯೂ ಅದೇ ರೀತಿಯ ಸಾಧನೆ ನಿರೀಕ್ಷಿಸಲಾಗಿದೆ. ಫೆಬ್ರವರಿ ಅಂತ್ಯದೊಳಗೆ ಸಂಪೂರ್ಣ ಹಣ ನಿಯಮಾನುಸಾರ ವೆಚ್ಚ ಮಾಡಿದ್ದಲ್ಲಿ ಕೆಂದ್ರದಿಂದ ಹೆಚ್ಚುವರಿ ಮಂಜೂರಾತಿ ದೊರೆಯಲಿದೆ ಎಂದು ಸಚಿವರು ತಿಳಿಸಿದರು.

ಅಧಿಕಾರಿಗಳು ಯಾವುದೇ ಅನುದಾನ ವ್ಯರ್ಥವಾಗದಂತೆ ನಿಗಾ ವಹಿಸಬೇಕು ಮತ್ತು ಕಾಲಮಿತಿಯೊಳಗೆ ಯೋಜನೆಗಳ ಸಂಪೂರ್ಣ ಅನುಷ್ಠಾನ ಮಾಡಬೇಕು. ಇದರಿಂದ ರಾಜ್ಯಕ್ಕೆ ಹೆಚ್ಚುವರಿ ಹಣ ಲಭ್ಯವಾಗುವ ಸಾಧ್ಯತೆಗಳಿದ್ದು, ಅಧಿಕ ರೈತರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಇದಲ್ಲದೇ ಕೃಷಿ ಹಾಗೂ ಜಲಾನಯನ ಇಲಾಖೆಗಳ ಇತರ ಯೋಜನೆಗಳೂ ಸಹ ಸಮರ್ಪಕವಾಗಿ ಸಂಪೂರ್ಣವಾಗಿ, ಗುಣಮಟ್ಟದೊಂದಿಗೆ ಅನುಷ್ಠಾನವಾಗಬೇಕು. ಇಲಾಖೆಯ ಅಧಿಕಾರಿಗಳು ಈವರೆಗೆ ಉತ್ತಮವಾಗಿ ಕಾರ್ಯನಿರ್ವಹಿತ್ತಾ ಬಂದಿದ್ದು, ಮುಂದೆಯೂ ಅದನ್ನು ನಿರೀಕ್ಷಿಸಲಾಗಿದೆ ಎಂದರು.

ನಿಗಮ ಮಂಡಳಿಗಳ ಸಭೆ: ದ್ವಿದಳ ಧಾನ್ಯಗಳ ಅಭಿವೃದ್ಧಿ ಮಂಡಳಿಯ ನಿರ್ದೇಶಕ ಮಂಡಳಿ ಸಭೆ ಹಾಗೂ ಕರ್ನಾಟಕ ರಾಜ್ಯ ಸಾವಯವ ಮತ್ತು ಬೀಜ ಪ್ರಮಾಣನ ಸಂಸ್ಥೆಯ ನಿರ್ದೇಶಕ ಮಂಡಳಿ ಸಭೆ ಹಾಗೂ 2025 - 26ನೇ ಸಾಲಿನ ಬಜೆಟ್​ನಲ್ಲಿ ಕೃಷಿ ಯೋಜನೆಗಳ ಅಳವಡಿಕೆ ಕುರಿತು ಅಧಿಕಾರಿಗಳೊಂದಿಗೆ ಸಚಿವರು ಇದೇ ವೇಳೆ, ಸುದೀರ್ಘ ಚರ್ಚೆ ನಡೆಸಿದರು. ಚರ್ಚೆಯಲ್ಲಿ ವಿವಿಧ ಇಲಾಖಾ ಅಧಿಕಾರಿಗಳು ಹಾಜರಿದ್ದರು.

ಇದನ್ನೂ ಓದಿ: ಸರ್ಕಾರದ ಅನುದಾನ ಬಳಕೆಯಲ್ಲಿ ವಿಳಂಬ, ಅಧಿಕಾರಿಗಳಿಗೆ ಸಿಎಂ ತರಾಟೆ - CM SIDDARAMAIAH

ETV Bharat Logo

Copyright © 2025 Ushodaya Enterprises Pvt. Ltd., All Rights Reserved.