ಬೆಂಗಳೂರು: ಬೆಳಗಾವಿ ಚಳಿಗಾಲ ಅಧಿವೇಶನದ ವಿಧಾನಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿರುವ ಆರೋಪ ಸಂಬಂಧ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅಖಿಲ ಭಾರತ ವೀರಶೈವ ಮಹಾಸಭಾ ಸರ್ಕಾರವನ್ನು ಒತ್ತಾಯಿಸಿದೆ.
ಘಟನೆಯ ಕುರಿತು ವಿಷಾದ ವ್ಯಕ್ತಪಡಿಸಿರುವ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ, ''ಭಾರತದಲ್ಲಿ ಹೆಣ್ಣುಮಕ್ಕಳಿಗೆ ವಿಶೇಷ ಸ್ಥಾನಮಾನ ಮತ್ತು ಗೌರವ ನೀಡಲಾಗಿದೆ. ನಾಲಿಗೆಯು ನಾಗರಿಕತೆಯನ್ನ ಹೇಳುತ್ತದೆ. ಜನಪ್ರತಿನಿಧಿಗಳಾದವರು ಸದನದ ಗೌರವ, ಘನತೆ ಕಾಪಾಡಬೇಕು'' ಎಂದಿದ್ದಾರೆ.
ಇದನ್ನೂ ಓದಿ: ಸಿ.ಟಿ ರವಿ ಫೇಕ್ ಎನ್ಕೌಂಟರ್ ಮಾಡುವ ಉದ್ದೇಶ ಪೊಲೀಸರಿಗೆ ಇತ್ತಾ?: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
''ಸದನದ ಒಳಗೆ ಹಾಗೂ ಹೊರಗೆ ಜನಪ್ರತಿನಿಧಿಗಳ ನಡವಳಿಕೆಗಳು ಇತರರಿಗೆ ಮಾದರಿಯಾಗಿರಬೇಕು. ಸಿ.ಟಿ.ರವಿ ಅವರು ಅಸಾಂವಿಧಾನಿಕ ಪದಬಳಕೆ ಮಾಡಿರುವುದು ಸದನದ ಇತಿಹಾಸಕ್ಕೆ ಕಪ್ಪುಚುಕ್ಕೆಯಾಗಿದೆ. ಸಿ.ಟಿ.ರವಿ ಅವರ ವಿರುದ್ಧ ಅಗತ್ಯ ಕಾನೂನು ಕ್ರಮಕೈಗೊಳ್ಳಬೇಕು'' ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ವತಿಯಿಂದ ಶಾಮನೂರು ಶಿವಶಂಕರಪ್ಪ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಆಂಬ್ಯುಲೆನ್ಸ್ ಸೈರನ್ ಬಳಸಿ ಸಿ ಟಿ ರವಿಗೆ ಸ್ವಾಗತ; ತುರ್ತು ವಾಹನ ಮಾಲೀಕನ ವಿರುದ್ಧ ಎಫ್ಐಆರ್