ETV Bharat / state

ಕೋಲಾರದಲ್ಲಿ ಯಾವ ಶಾಸಕರೂ ರಾಜೀನಾಮೆ ನೀಡಲ್ಲ, ಅಭ್ಯರ್ಥಿಯ ಗೆಲುವಿಗೆ ಒಟ್ಟಾಗಿ ಕೆಲಸ: ಡಿಕೆಶಿ - D K Shivakumar

ಕೋಲಾರದಲ್ಲಿ ಯಾವ ಶಾಸಕರೂ ರಾಜೀನಾಮೆ ನೀಡಲ್ಲ. ಎಲ್ಲಾ ನಾಯಕರು ಒಗ್ಗಟ್ಟಾಗಿ ಕಾಂಗ್ರೆಸ್​ ಅಭ್ಯರ್ಥಿಯ ಗೆಲುವಿಗೆ ಕೆಲಸ ಮಾಡಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್
ಡಿಸಿಎಂ ಡಿ.ಕೆ. ಶಿವಕುಮಾರ್
author img

By ETV Bharat Karnataka Team

Published : Mar 28, 2024, 11:51 AM IST

Updated : Mar 28, 2024, 12:32 PM IST

ಡಿಕೆಶಿ ಪ್ರತಿಕ್ರಿಯೆ

ಬೆಂಗಳೂರು: ಕೋಲಾರದಲ್ಲಿ ಪಕ್ಷದ ಎಲ್ಲಾ ನಾಯಕರು ಒಟ್ಟಾಗಿ ಕಾಂಗ್ರೆಸ್​ ಅಭ್ಯರ್ಥಿಯ ಗೆಲುವಿಗೆ ಕೆಲಸ ಮಾಡಲಿದ್ದಾರೆ. ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು.

ಇಂದು ಸದಾಶಿವನಗರ ನಿವಾಸದ ಬಳಿ ಕೋಲಾರ ಟಿಕೆಟ್ ವಿಚಾರವಾಗಿ ಶಾಸಕರು ರಾಜೀನಾಮೆ ನೀಡಲು ಮುಂದಾಗಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾರೂ ರಾಜೀನಾಮೆ ನೀಡಲ್ಲ. ಟಿಕೆಟ್​ ವಿಚಾರವಾಗಿ ಒತ್ತಡವಿದೆ. ಪಕ್ಷ ಇದುವರೆಗೂ ಯಾರಿಗೂ ಟಿಕೆಟ್ ಘೋಷಣೆ ಮಾಡಿಲ್ಲ. ಇಂದು ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಈ ಕುರಿತು ಚರ್ಚಿಸಲಾಗುವುದು ಎಂದರು.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ತಯಾರಿ ಬಗ್ಗೆ ಮಾತನಾಡುತ್ತಾ, ಇಂದು ಡಿ.ಕೆ.ಸುರೇಶ್​ ಅವರಿಗೆ ಬಿ ಫಾರಂ ನೀಡಿ, ನಮ್ಮ ಮನೆ ದೇವರು ಕೆಂಕೇರಮ್ಮ, ಕಬ್ಬಾಳಮ್ಮ, ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಲಾಗುತ್ತದೆ. ನಂತರ ರಾಮನಗರದಲ್ಲಿ ಮುಖ್ಯಮಂತ್ರಿಗಳೊಂದಿಗೆ ಕಾರ್ಯಕರ್ತರ ಸಭೆ ಮಾಡಿದ ನಂತರ ಸುರೇಶ್ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಿದರು.

ನಾವು ಇಂದು ಕೇವಲ ಚುನಾವಣೆಗಾಗಿ ಮಾತ್ರವೇ ತಯಾರಿ ಮಾಡುತ್ತಿಲ್ಲ. ಸುರೇಶ್ ಅವರು ಗೆದ್ದ ಮೊದಲ ದಿನದಿಂದ ಪ್ರತಿನಿತ್ಯ ಕೆಲಸ ಮಾಡಿಕೊಂಡೇ ಬಂದಿದ್ದಾರೆ. ಕೋವಿಡ್ ಸಮಯದಲ್ಲಿ ಸಚಿವ ಸುರೇಶ್ ಅಂಗಡಿ ಅವರ ಮೃತದೇಹವನ್ನು ಅವರ ತವರೂರಿಗೆ ತರಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವೇ ಅವಕಾಶ ನೀಡಲಿಲ್ಲ. ಆದರೆ ಡಿ.ಕೆ.ಸುರೇಶ್ ಅವರು ಕೋವಿಡ್ ಕಷ್ಟಕಾಲದಲ್ಲಿ ರೈತರಿಂದ ಹಣ್ಣು, ತರಕಾರಿ ಖರೀದಿಸಿ ಜನರಿಗೆ ಉಚಿತವಾಗಿ ಹಂಚಿದ್ದಾರೆ. ಜನರಿಗೆ ಮೆಡಿಕಲ್ ಕಿಟ್‌ಗಳನ್ನು ನೀಡಿ ಸಹಾಯ ಮಾಡಿದ್ದಾರೆ. ಸರ್ಕಾರ ಶವಗಳನ್ನು ಜೆಸಿಬಿಯಲ್ಲಿ ಎಸೆಯುತ್ತಿರುವಾಗ, ಕೋವಿಡ್​ನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಅವರ ಮನೆಯವರು ಮುಂದೆ ಬಾರದಿದ್ದಾಗ ಡಿ.ಕೆ.ಸುರೇಶ್​ ಪಿಪಿಇ ಕಿಟ್​ ಧರಿಸಿ ಶವಗಳ ಅಂತ್ಯಸಂಸ್ಕಾರ ಮಾಡಿದರು.

ಎಲ್ಲಾ ನಾಯಕರು ಮನೆಯಿಂದಾಚೆ ಬರಲು ಹಿಂಜರಿದಾಗ, ಸುರೇಶ್​​ ಕೋವಿಡ್​​ ಆಸ್ಪತ್ರೆಗಳಿಗೆ ಹೋಗಿ, ಸೋಂಕಿತರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ದರು. ಅಂತಹ ಕಷ್ಟ ಕಾಲದಲ್ಲಿ ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಕ್ಷೇತ್ರದ ಜನರಿಗಾಗಿ ಶ್ರಮಿಸಿದ್ದಾರೆ. ಇದ್ಯಾವುದೂ ಚುನಾವಣೆಯ ಸಮಯದಲ್ಲಿ ಮಾಡಿದ ಕೆಲಸವಲ್ಲ. ಸುರೇಶ್ ಅವರು ಪ್ರತೀ ಹಳ್ಳಿ ಹಳ್ಳಿ ಸುತ್ತಾಡಿ ಪಂಚಾಯಿತಿ ಸದಸ್ಯನಂತೆ ಕೆಲಸ ಮಾಡಿದ್ದಾರೆ. ಹೀಗಾಗಿ ನಾವು ಈ ಬಾರಿಯ ಚುನಾವಣೆಯಲ್ಲಿ ವಿಶೇಷವಾದ ತಯಾರಿ ಮಾಡುವ ಅಗತ್ಯವಿಲ್ಲ. ನಮ್ಮ ಪರವಾಗಿ ಜನ, ಕಾರ್ಯಕರ್ತರು ಇದ್ದಾರೆ ಎಂದರು.

ನಾವು ದೇವೇಗೌಡರ ಕುಟುಂಬದ ವಿರುದ್ಧ ಅನೇಕ ಚುನಾವಣೆಗಳನ್ನು ಮಾಡಿದ್ದೇವೆ. ಅವರ ವಿರುದ್ಧ ಓರ್ವ ಮಹಿಳೆಯನ್ನು ನಿಲ್ಲಿಸಿ ಗೆಲ್ಲಿಸಿದ್ದೇವೆ. ನಾನು ಕುಮಾರಸ್ವಾಮಿ ವಿರುದ್ಧ ಸ್ಪರ್ಧಿಸಿ ಗೆದ್ದಿದ್ದೇನೆ. 2013ರ ಉಪಚುನಾವಣೆಯಲ್ಲಿ ಇದೇ ರೀತಿ ಜೆಡಿಎಸ್ ಹಾಗೂ ಬಿಜೆಪಿ ಸೇರಿ ಅನಿತಾ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಿದಾಗ ಸುರೇಶ್​ ಗೆದ್ದಿದ್ದರು. ಆಗ ಸಿದ್ದರಾಮಯ್ಯರ ಸರ್ಕಾರ ಇದ್ದರೂ ನಾನು ಸಚಿವನಾಗಿರಲಿಲ್ಲ. ಆಗ ನನಗೆ ದೊಡ್ಡ ಸವಾಲಾಗಿತ್ತು. ಆಗಲೂ ನಾವು ಸಹೋದರಿ ಅನಿತಾ ಕುಮಾರಸ್ವಾಮಿ ಅವರನ್ನು 1.30 ಲಕ್ಷ ಮತಗಳಿಂದ ಮಣಿಸಿದೆವು. ನಂತರ ಜನರು ಸುರೇಶ್ ಅವರನ್ನು ಸತತವಾಗಿ ಗೆಲ್ಲಿಸಿಕೊಂಡು ಬಂದಿದ್ದಾರೆ ಎಂದು ತಿಳಿಸಿದರು.

ಬಿಜೆಪಿ ದುರ್ಬಲ, ಹಾಲಿ ಸಂಸದರಿಗೆ ಟಿಕೆಟ್​ ನೀಡಿಲ್ಲ: ಚಿತ್ರದುರ್ಗದಲ್ಲಿ ಬಿಜೆಪಿಯಿಂದ ಮಾಜಿ ಸಚಿವ ಗೋವಿಂದ ಕಾರಜೋಳ ಸ್ಪರ್ಧೆ ಬಗ್ಗೆ ಕೇಳಿದಾಗ, ಅವರ ಪಕ್ಷದಿಂದ ಯಾರನ್ನಾದರೂ ನಿಲ್ಲಿಸಲಿ. ನಾವು ಚಂದ್ರಪ್ಪ ಅವರನ್ನು ಕಣಕ್ಕಿಳಿಸಿದ್ದೇವೆ. ಹಾಲಿ ಸಚಿವರಿಗೆ, ಹಾಲಿ ಸಂಸದರಿಗೆ ಬಿಜೆಪಿ ಟಿಕೆಟ್ ನೀಡಿಲ್ಲ. ಆ ಮೂಲಕ ಅವರ ಪಕ್ಷ ದುರ್ಬಲವಾಗಿದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಟೀಕಿಸಿದರು.

ಚುನಾವಣೆಯ ಸ್ಟಾರ್​ ಪ್ರಚಾರಕರಾಗಿ ಯಾರು ಆಗಮಿಸಲಿದ್ದಾರೆ ಎಂಬುದಕ್ಕೆ, ಎಐಸಿಸಿ ಅಧ್ಯಕ್ಷರು ನಮ್ಮವರೇ. ರಾಹುಲ್​ ಗಾಂಧಿ, ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರಿಗೆ ಆಗಮಿಸುವಂತೆ ಮನವಿ ಮಾಡಿದ್ದೇವೆ. ಅವರು ಇಡೀ ದೇಶದಲ್ಲಿ ಪ್ರಚಾರ ಮಾಡಬೇಕಿದ್ದು, ಅವರಿಂದ ರಾಜ್ಯದಲ್ಲಿ ಹೆಚ್ಚು ದಿನಗಳ ಪ್ರಚಾರ ನಿರೀಕ್ಷೆ ಮಾಡಲು ಆಗುವುದಿಲ್ಲ ಎಂದು ತಿಳಿಸಿದರು.

ಇದಕ್ಕೇ ಓದಿ: ನಾಮಪತ್ರ ಸಲ್ಲಿಕೆಗೂ ಮುನ್ನ ಮನೆ ದೇವರಿಗೆ ಪೂಜೆ ಸಲ್ಲಿಸಿದ ಡಿ.ಕೆ.ಸುರೇಶ್ - D K Suresh

Last Updated : Mar 28, 2024, 12:32 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.