ETV Bharat / state

ಉತ್ತರ ಕನ್ನಡದಲ್ಲಿ ಮತ ಎಣಿಕೆಗೆ ಸಕಲ ಸಿದ್ಧತೆ: 23 ಸುತ್ತಿನ ಬಳಿಕ ಹೊರಬೀಳಲಿದೆ ಸ್ಪಷ್ಟ ಫಲಿತಾಂಶ - vote counting preparation - VOTE COUNTING PREPARATION

ಉತ್ತರ ಕನ್ನಡ ಜಿಲ್ಲೆ ಜೂನ್​ 4 ರಂದು ನಡೆಯಲಿರುವ ಲೋಕಸಭೆ ಚುನಾವಣಾ ಮತ ಎಣಿಕೆಗೆ ಸಂಪೂರ್ಣ ಸಿದ್ಧವಾಗಿದ್ದು, ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಮಾಹಿತಿ ನೀಡಿದ್ದಾರೆ.

ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಮಾಹಿತಿ
ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಮಾಹಿತಿ (ETV Bharat)
author img

By ETV Bharat Karnataka Team

Published : Jun 2, 2024, 7:03 AM IST

Updated : Jun 2, 2024, 7:15 AM IST

ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಮಾಹಿತಿ (ETV Bharat)

ಕಾರವಾರ: ದೇಶದಲ್ಲಿ 7 ಹಂತದಲ್ಲಿ ನಡೆದ ಲೋಕಸಭೆ ಚುನಾವಣೆಯ ಫಲಿತಾಂಶ ಜೂನ್ 4 ರಂದು ಹೊರಬೀಳಲಿದೆ. ಈ ಸಂಬಂಧ ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ ಎಣಿಕೆಗೆ ಕುಮಟಾದ ಡಾ. ಎ. ವಿ. ಬಾಳಿಗಾ ಕಾಲೇಜಿನಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಒಟ್ಟು 9 ರೂಮ್​ಗಳಲ್ಲಿ ಮತ ಎಣಿಕೆ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.

ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಹಿತಿ ನೀಡಿದ ಅವರು, 'ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಂದರಂತೆ ಒಟ್ಟು 8 ಮತ ಎಣಿಕೆ ಕೊಠಡಿಗಳನ್ನು ಗುರುತಿಸಲಾಗಿದ್ದು, ಪ್ರತಿ ಕೊಠಡಿಯಲ್ಲಿ 14 ಟೇಬಲ್‌ಗಳನ್ನು ಅಳವಡಿಸಲಾಗಿದೆ. ಇದಲ್ಲದೆ ಮತ್ತೊಂದು ಕೊಠಡಿಯಲ್ಲಿ ಅಂಚೆ ಮತಪತ್ರಗಳ ಎಣಿಕೆ ನಡೆಯಲಿದೆ. ಮತ ಎಣಿಕಾ ಕಾರ್ಯಕ್ಕೆ 112 ಮತ ಎಣಿಕೆ ಮೇಲ್ವಿಚಾರಕರು, 112 ಮತ ಎಣಿಕೆ ಸಹಾಯಕರು ಹಾಗೂ 112 ಮೈಕ್ರೋ ಅಬ್ಸರ್‌ವರ್ ಗಳನ್ನು ನೇಮಿಸಲಾಗಿದೆ. ಮತ ಎಣಿಕೆಯ ಸಿಬ್ಬಂದಿಗೆ 2 ಹಂತದಲ್ಲಿ ತರಬೇತಿಯನ್ನು ನೀಡಲಾಗಿದೆ' ಎಂದರು.

'ಅಂಚೆ ಮತಪತ್ರಗಳ ಎಣಿಕೆಗಾಗಿ 20 ಟೇಬಲ್‌ಗಳನ್ನು ಹಾಕಲಾಗಿದ್ದು, 20 ಮಂದಿ ಸಹಾಯಕ ಎಣಿಕೆಯ ಅಧಿಕಾರಿಗಳು, 20 ಮಂದಿ ಎಣಿಕೆ ಮೇಲ್ವಿಚಾರಕರು, 40 ಮಂದಿ ಎಣಿಕೆ ಸಹಾಯಕರು ಹಾಗೂ 20 ಮಂದಿ ಮೈಕ್ರೋ ಅಬ್ಸರ್‌ವರ್‌ಗಳನ್ನು ನೇಮಿಸಲಾಗಿದ್ದು, ಇಟಿಪಿಬಿಎಸ್ ಮತಗಳ ಎಣಿಕೆಗಾಗಿ ಪ್ರತ್ಯೇಕ ಕೊಠಡಿಯನ್ನು ತೆರೆಯಲಾಗಿದೆ. ಮತ ಎಣಿಕೆ ಕಾರ್ಯಕ್ಕಾಗಿ ಒಟ್ಟು 562 ಅಧಿಕಾರಿ ಸಿಬ್ಬಂದಿ ನೇಮಕ ಮಾಡಲಾಗಿದೆ'.

'ಮತ ಎಣಿಕೆ ಕಾರ್ಯವನ್ನು ಬೆಳಗ್ಗೆ 8 ಗಂಟೆಗೆ ಆರಂಭಿಸಲಾಗುವುದು. ಎಣಿಕೆ ಅಬ್ಸರ್‌ವರ್, ಜಿಲ್ಲಾ ಚುನಾವಣಾಧಿಕಾರಿ ಮತ್ತು ಸಹಾಯಕ ಚುನಾವಣಾಧಿಕಾರಿಗಳು ಮತ್ತು ಅಭ್ಯರ್ಥಿ, ಅಭ್ಯರ್ಥಿಗಳ ಏಜೆಂಟರ್​ ಅವರ ಸಮ್ಮುಖರದಲ್ಲಿ ಭದ್ರತಾ ಕೊಠಡಿಯನ್ನು ತೆರೆಯಲಾಗುವುದು. ಮೊದಲಿಗೆ ಅಂಚೆ ಮತ ಪತ್ರಗಳ ಎಣಿಕೆಯ ಕಾರ್ಯ ಆರಂಭಿಸಲಾಗುವುದು' ಎಂದು ತಿಳಿಸಿದರು.

'ಜಿಲ್ಲೆಯಲ್ಲಿ ಮನೆಯಿಂದಲೇ ನಡೆದ ಮತದಾನದಲ್ಲಿ 85 ವರ್ಷ ಮೇಲ್ಪಟ್ಟ 2,985 ಮಂದಿ, 1,924 ವಿಕಲಚೇತನರು, 253 ಅಗತ್ಯ ಸೇವೆಯ ನೌಕರರು ಹಾಗೂ 1,164 ಚುನಾವಣಾ ಕರ್ತವ್ಯದಲ್ಲಿದ್ದ ಸಿಬ್ಬಂದಿಗಳ ಮತದಾನ ಸೇರಿದಂತೆ ಒಟ್ಟು 6,236 ಮಂದಿಯ ಮತದಾನವಾಗಿದೆ. ಗರಿಷ್ಠ 23 ಸುತ್ತಿನ ಮತ ಎಣಿಕೆ ನಡೆಯಲಿದ್ದು, ಮಧ್ಯಾಹ್ನ 12 ಗಂಟೆಯ ವೇಳೆಗೆ ಸಂಪೂರ್ಣ ಫಲಿತಾಂಶ ಘೋಷಣೆಯಾಗುವ ಸಾಧ್ಯತೆಯಿದೆ.

'ಮತ ಎಣಿಕೆ ಆವರಣದಲ್ಲಿ ಮೊಬೈಲ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದ್ದು, ವಿವಿಧ ರಾಜಕೀಯ ಪಕ್ಷಗಳ ಮತ್ತು ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳು ಮತ್ತು ಅವರ ಏಜೆಂಟರ್​ಗೆ ಒಟ್ಟು 318 ಮತ ಎಣಿಕಾ ಕೊಠಡಿಯ ಪಾಸ್​ಗಳನ್ನು ವಿತರಿಸಲಾಗಿದೆ' ಎಂದು ಜಿಲ್ಲಾಧಿಕಾರಿ ವಿವರಿಸಿದರು.

ಇದನ್ನೂ ಓದಿ: ಕರ್ನಾಟಕ ಲೋಕಸಭೆ ಕ್ಷೇತ್ರಗಳ ಚುನಾವಣೋತ್ತರ ಸಮೀಕ್ಷೆ; ಬಿಜೆಪಿ​ಗೆ ಎಷ್ಟು ನಷ್ಟ, ಕಾಂಗ್ರೆಸ್​ಗೆ ಎಷ್ಟು ಲಾಭ? - exit poll results 2024

Last Updated : Jun 2, 2024, 7:15 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.