ETV Bharat / state

ಅಂತಾರಾಷ್ಟ್ರೀಯ ಮಟ್ಟದ ಕಿತ್ತೂರು ಉತ್ಸವ ಆಚರಿಸಲು ಸಕಲ ಸಿದ್ಧತೆ: ಡಿಸಿ ಮೊಹಮ್ಮದ್ ರೋಷನ್ - KITTURU UTSAVA

author img

By ETV Bharat Karnataka Team

Published : 2 hours ago

Updated : 9 minutes ago

ಕಿತ್ತೂರು ಉತ್ಸವದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದ ಸಾರ್ವಜನಿಕರು, 200 ಜನ ಸಾಧಕರನ್ನು ಗುರುತಿಸಿ ಸನ್ಮಾನಿಸುವ, ಸ್ಮಾರಕಗಳ‌ ಸಂರಕ್ಷಣೆ ಸೇರಿದಂತೆ ಅದ್ಧೂರಿ ಆಚರಣೆಗಾಗಿ ಅನೇಕ ಸಲಹೆಗಳನ್ನು ನೀಡಿದರು.

KITTUR UTSAVA pre-meeting
ಕಿತ್ತೂರು ಉತ್ಸವದ ಪೂರ್ವಭಾವಿ ಸಭೆ (ETV Bharat)

ಬೆಳಗಾವಿ: "ಬ್ರಿಟಿಷರ ವಿರುದ್ಧ ದಿಗ್ವಿಜಯ ಸಾಧಿಸಿದ ಚನ್ನಮ್ಮನ ಕಿತ್ತೂರು ಉತ್ಸವಕ್ಕೆ ಈ ವರ್ಷ 200ನೇ ವರ್ಷಾಚರಣೆ ಹಿನ್ನೆಲೆ ಈ ಬಾರಿ ವಿಶ್ವ ಮಟ್ಟದ ಕಾರ್ಯಕ್ರಮವನ್ನಾಗಿ ವಿಜೃಂಭಣೆಯಿಂದ ಆಚರಿಸಲಾಗುವುದು. ಆ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ" ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.

ಕಿತ್ತೂರಿನ‌ ಶೆಟ್ಟರ್​ ಕಲ್ಯಾಣ‌‌ ಮಂಟಪದಲ್ಲಿ ಮಂಗಳವಾರ ಚನ್ನಮ್ಮನ ಕಿತ್ತೂರು ಉತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ‌ ವಹಿಸಿ ಅವರು ಮಾತನಾಡಿದರು. "200ನೇ‌ ವರ್ಷದ ವಿಜಯೋತ್ಸವದ ಪ್ರಯುಕ್ತ‌ ದೇಶದ‌ ವಿವಿಧ ರಾಜ್ಯಗಳ‌ ಆಹಾರ ಪದ್ಧತಿಯನ್ನು ಪರಿಚಯಿಸುವ ನಿಟ್ಟಿನಲ್ಲಿ ಅನ್ನೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಈ ಬಾರಿಯ ಉತ್ಸವದ ನೆನಪಿಗಾಗಿ ರಾಣಿ ಚನ್ನಮ್ಮನ ಭಾವಚಿತ್ರವಿರುವ ಅಂಚೆ ಚೀಟಿ ಬಿಡುಗಡೆಗಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ವಾಯವ್ಯ ಕರ್ನಾಟಕ ಸಾರಿಗೆ ಹೆಸರನ್ನು "ಕಿತ್ತೂರು ಕರ್ನಾಟಕ ಸಾರಿಗೆ ಸಂಸ್ಥೆ" ಎಂದು ಹಾಗೂ ರಾಣಿ‌ಚನ್ನಮ್ಮ ವಿಶ್ವವಿದ್ಯಾಲಯದ ಬದಲಾಗಿ "ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ' ಎಂದು‌ ಮರು‌ನಾಮಕರಣಕ್ಕಾಗಿ ಈಗಾಗಲೇ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ" ಎಂದು‌ ತಿಳಿಸಿದರು.

"ಈ ಬಾರಿ‌ ಕಿತ್ತೂರು ಉತ್ಸವದ ಮೆರವಣಿಗೆಯಲ್ಲಿ ಕೇವಲ ನಂದಿ ಧ್ವಜಕ್ಕೆ ಅನುಮತಿಸಲಾಗುವುದು. ಅಕ್ಟೋಬರ್ 23ರಿಂದ ಮೂರು ದಿನಗಳ‌ ಕಾಲ‌ ಜರುಗಲಿರುವ ಉತ್ಸವದಲ್ಲಿ ರಾಷ್ಟ್ರಮಟ್ಟದ ಕಲಾವಿದರ ಜತೆಗೆ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು" ಎಂದರು.

"ಈ ಬಾರಿಯ ಕಿತ್ತೂರು‌ ಉತ್ಸವದ ಅಂಗವಾಗಿ ಏರ್ ಶೋ ಆಯೋಜನೆಗಾಗಿ ಕೇಂದ್ರ‌ ರಕ್ಷಣಾ ಸಚಿವಾಲಯವನ್ನು ಸಂಪರ್ಕಿಸಲಾಗಿದೆ. ಏರ್ ಷೋ ನಡೆಯುವ ವಿಶ್ಚಾಸವಿದೆ. ಉತ್ಸವದ ಅಂಗವಾಗಿ ಪಾರಂಪರಿಕ ಕ್ರೀಡೆಗಳ ಆಯೋಜನೆಗೆ ಪಟ್ಟಿ ತಯಾರಿಸಲಾಗುತ್ತಿದ್ದು, ಅಂತಾರಾಷ್ಟ್ರೀಯ ಮಟ್ಟದ ಕುಸ್ತಿ ಆಯೋಜನೆಗೆ ಚಿಂತನೆ ಮಾಡುತ್ತಿದ್ದೇವೆ" ಎಂದು ಹೇಳಿದರು.

ಕಿತ್ತೂರು ಶಾಸಕ ಬಾಬಾ ಸಾಹೇಬ ಪಾಟೀಲ್​ ಮಾತನಾಡಿ, "ಈ ಬಾರಿ ಯುವ‌ ಅಧಿಕಾರಿಗಳ ನೇತೃತ್ವದಲ್ಲಿ ಕಿತ್ತೂರು ಉತ್ಸವದ ಆಚರಣೆಗೆ ಅತ್ಯಂತ ಹುಮ್ಮಸ್ಸಿನಿಂದ ಕೆಲಸ ಮಾಡುತ್ತಿದ್ದೇವೆ. ಕಿತ್ತೂರು ಉತ್ಸವದ ಯಶಸ್ಸಿಗೆ ಸಾರ್ವಜನಿಕರ‌ ಪಾಲ್ಗೊಳ್ಳುವಿಕೆ ಹಾಗೂ ಜವಾಬ್ದಾರಿ ಕೂಡ ಅಷ್ಟೇ ಮಹತ್ವದ್ದಾಗಿದೆ. ಉತ್ಸವದ ಯಶಸ್ಸಿಗೆ ಪ್ರತಿಯೊಬ್ಬರು ಕೈಜೋಡಿಸಬೇಕು" ಎಂದು ಮನವಿ ಮಾಡಿದರು.

ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗಿಂದ್ರ ಸ್ವಾಮೀಜಿ ನಮಾತನಾಡಿ, "ಈ ಬಾರಿ ವಿಜಯೋತ್ಸವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸುವುದು ಸರ್ಕಾರ ಜೊತೆಗೆ ಸಾರ್ವಜನಿಕರ ಜವಾಬ್ದಾರಿಯೂ ಆಗಿದೆ. ಈ ಬಾರಿಯ ಉತ್ಸವ ಸ್ಮರಣೀಯ ಉತ್ಸವವಾಗಬೇಕು" ಎಂದು ಕರೆ ನೀಡಿದರು.

ಕಿತ್ತೂರು ಉತ್ಸವದ ಕವಿಗೋಷ್ಠಿಯಲ್ಲಿ ಮಹಿಳೆಯರಿಗೆ ಹಾಗೂ ಪುರುಷರಿಗೆ ಪ್ರತ್ಯೇಕ ಗೋಷ್ಠಿ ಆಯೋಜಿಸಬೇಕು. 200ನೇ ವರ್ಷದ ವಿಜಯೋತ್ಸವದ ಪ್ರಯುಕ್ತ 200 ಜನ ಸಾಧಕರನ್ನು ಗುರುತಿಸಿ ಸನ್ಮಾನಿಸಬೇಕು. ರಾಜ ಮಲ್ಲಸರ್ಜರ ಪುತ್ಥಳಿ ನಿರ್ಮಾಣ, ಕಿತ್ತೂರು ಆಳ್ವಿಕೆಗೆ ಸಂಬಂಧಿಸಿದ ಸ್ಮಾರಕಗಳ‌ ಸಂರಕ್ಷಣೆ, ಉತ್ಸವದ ಮೆರವಣಿಗೆಯಲ್ಲಿ ಪೊಲೀಸ್ ಬ್ಯಾಂಡ್ ಹಾಗೂ ಮರಾಠಾ ಲೈಟ್ ಇನಫ್ಯಾಂಟರಿ ಬ್ಯಾಂಡ್ ಕರೆತರುವುದರ ಮೂಲಕ ಅದ್ಧೂರಿ‌ ಕಿತ್ತೂರು ಉತ್ಸವ ಆಚರಣೆಗಾಗಿ ಸಾರ್ವಜನಿಕರು ಅನೇಕ ಸಲಹೆಗಳನ್ನು ನೀಡಿದರು. ಸಭೆಯಲ್ಲಿ ಜಿಪಂ ಸಿಇಒ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಪ್ರಶಿಕ್ಷಣಾರ್ಥಿ ಐಎಎಸ್ ಅಧಿಕಾರಿ ದಿನೇಶ್​ ಕುಮಾರ್​ ಮೀನಾ, ಬೈಲಹೊಂಗಲ ಎಸಿ ಪ್ರಭಾವತಿ‌ ಫಕೀರಪೂರ, ಬೆಳಗಾವಿ ಎಸಿ ಶ್ರವಣ್​ ನಾಯಕ, ಚಿಕ್ಕೋಡಿ ಎಸಿ ಸುಭಾಷ್​ ಸಂಪಗಾವಿ ಸೇರಿ ಮತ್ತಿತರರು ಇದ್ದರು.

ಇದನ್ನೂ ಓದಿ: ಕಲ್ಯಾಣ ಕರ್ನಾಟಕ ಉತ್ಸವ: ರಾಷ್ಟ್ರ ಧ್ವಜಾರೋಹಣ ಮಾಡಿದ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ - Kalyana Karnataka Utsav

Last Updated : 9 minutes ago
ETV Bharat Logo

Copyright © 2024 Ushodaya Enterprises Pvt. Ltd., All Rights Reserved.