ETV Bharat / state

ಲೋಕಸಭಾ ಚುನಾವಣೆಯಲ್ಲಿ ಕಾಲೇಜು ಆವರಣದಲ್ಲಿ ಪ್ರಚಾರ: ಕೋಟಾ ಶ್ರೀನಿವಾಸ ಪೂಜಾರಿ ವಿರುದ್ಧದ ವಿಚಾರಣೆಗೆ ತಡೆ - Kota Srinivasa Pujari

ಲೋಕಸಭಾ ಚುನಾವಣೆ ವೇಳೆ ಕಾಲೇಜಿನ ಆವರಣದಲ್ಲಿ ಪ್ರಚಾರ ಆರೋಪದ ಮೇಲೆ ಕೋಟಾ ಶ್ರೀನಿವಾಸ ಪೂಜಾರಿ ವಿರುದ್ಧದ ವಿಚಾರಣೆಗೆ ಹೈಕೊರ್ಟ್ ತಡೆ ನೀಡಿದೆ.

author img

By ETV Bharat Karnataka Team

Published : Jul 6, 2024, 9:11 AM IST

High Court stay  Kota Srinivasa Pujari
ಲೋಕಸಭಾ ಚುನಾವಣೆ ವೇಳೆ ಕಾಲೇಜಿನ ಆವರಣದಲ್ಲಿ ಪ್ರಚಾರ ಆರೋಪ: ಕೋಟಾ ಶ್ರೀನಿವಾಸ ಪೂಜಾರಿ ವಿರುದ್ಧದ ವಿಚಾರಣೆಗೆ ಹೈಕೊರ್ಟ್ ತಡೆ (ETV Bharat)

ಬೆಂಗಳೂರು: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಉಡುಪಿಯ ಜಿಲ್ಲೆಯ ಕಟಪಾಡಿಯದಲ್ಲಿನ ಖಾಸಗಿ ಕಾಲೇಜುವೊಂದರ ಆವರಣದಲ್ಲಿ ಕಾರ್ಯಕ್ರಮ ನಡೆಸಿ ರಾಜಕೀಯ ಭಾಷಣ ಮಾಡಿದ ಆರೋಪದ ಮೇಲೆ ಉಡುಪಿ-ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ವಿರುದ್ಧ ದಾಖಲಾಗಿರುವ ಖಾಸಗಿ ದೂರಿಗೆ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ತಡೆ ನೀಡಿದೆ.

ಪ್ರಕರಣ ಸಂಬಂಧ ತಮ್ಮ ವಿರುದ್ಧದ ಖಾಸಗಿ ದೂರು ಮತ್ತು ಆ ಕುರಿತ ಬೆಂಗಳೂರಿನ 42ನೇ ಎಸಿಎಂಎಂ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ) ವಿಚಾರಣಾ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ, ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರುಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಮೆಂಡನ್ ಹಾಗೂ ತ್ರಿಶಾ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಎಸ್. ಗೋಪಾಲಕೃಷ್ಣ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠ, ವಿಚಾರಣೆಗೆ ತಡೆ ನೀಡಿ ಆದೇಶಿಸಿತು. ಅಲ್ಲದೆ, ಪ್ರಕರಣದಲ್ಲಿ ದೂರುದಾರರಾಗಿರುವ ಕಾಪು ವಿಧಾನಸಭಾ ಕ್ಷೇತ್ರದ ಚುನಾವಣಾ ಸಂಚಾರ ವಿಚಕ್ಷಣಾ ಅಧಿಕಾರಿಯಾಗಿದ್ದ ವಿಶ್ವನಾಥ್ ಶೆಟ್ಟಿ ಅವರಿಗೆ(ಸರ್ಕಾರಕ್ಕೆ) ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಎಂ. ಅರುಣ್ ಶ್ಯಾಮ್ ಹಾಜರಾಗಿ, ಪ್ರಕರಣ ಸಂಬಂಧ ಚುನಾವಣಾ ಸಂಚಾರ ವಿಚಕ್ಷಣಾ ಅಧಿಕಾರಿಯು ಅರ್ಜಿದಾರರ ವಿರುದ್ಧ ಭಾರತ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 188 ದೂರು ದಾಖಲಿಸಿದ್ದಾರೆ. ಈ ವಿಚಾರವಾಗಿ ಅವರು ದೂರು ದಾಖಲಿಸುವ ಅಧಿಕಾರ ವ್ಯಾಪ್ತಿಯನ್ನು ವಿಚಕ್ಷಣಾ ಅಧಿಕಾರಿ ಹೊಂದಿಲ್ಲ. ದೂರು ದಾಖಲಿಸುವಲ್ಲಿ ಕಾನೂನು ಉಲ್ಲಂಘನೆಯಾಗಿದ್ದು, ಖಾಸಗಿ ದೂರನ್ನು ರದ್ದುಪಡಿಸಬೇಕು ಎಂದು ಕೋರಿದರು. ಈ ವಾದ ಮಾನ್ಯ ಮಾಡಿದ ನ್ಯಾಯಪೀಠ ಈ ಮೇಲಿನಂತೆ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ: ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಸ್ಪರ್ಧಿಸಿದ್ದ ಕೋಟಾ ಶ್ರೀನಿವಾಸ ಪೂಜಾರಿ, ಕಟಪಾಡಿಯ ಖಾಸಗಿ ಕಾಲೇಜುವೊಂದರ ಆವರಣದಲ್ಲಿ 2024ರ ಮಾ.30 ರಂದು ಕಾರ್ಯಕ್ರಮ ನಡೆಸಿದ್ದರು. ಈ ವೇಳೆ ಹಲವು ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಮಕ್ಕಳಿಗೆ ಹಲವು ಉಚಿತ ಯೋಜನೆ ಜಾರಿಗೊಳಿಸುವುದಾಗಿ ಭರವಸೆ ನೀಡಿದ್ದರು.

ಇದರಿಂದ ಚುನಾವಣಾ ಅಧಿಕಾರಿಗಳ ಅನುಮತಿ ಪಡೆಯದೇ ಕಾರ್ಯಕ್ರಮ ನಡೆಸಿ, ರಾಜಕೀಯ ಭಾಷಣ ಮಾಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಕಾಪು ವಿಧಾನಸಭಾ ಕ್ಷೇತ್ರದ ಚುನಾವಣಾ ಸಂಚಾರ ವಿಚಕ್ಷಣಾ ಅಧಿಕಾರಿ ನಗರದ 42ನೇ ಎಸಿಎಂಎಂ ನ್ಯಾಯಾಲಯಕ್ಕೆ 2024ರ ಏ.4ರಂದು ಖಾಸಗಿ ದೂರು ದಾಖಲಿಸಿದ್ದರು. ಅದರ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸಬೇಕು ಎಂದು ಸ್ಥಳೀಯ ಠಾಣಾ ಪೊಲೀಸರಿಗೆ ನಿರ್ದೇಶಿಸಿತ್ತು. ಜೊತೆಗೆ, ಸಂಸದ ಕೋಟಾ ಶ್ರಿನಿವಾಸ ಪೂಜಾರಿ ಹಾಗೂ ಇತರೆ ಆರೋಪಿಗಳಿಗೆ ಸಮನ್ಸ್ ಜಾರಿಗೊಳಿಸಿತ್ತು. ಇದರಿಂದ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಇದನ್ನೂ ಓದಿ: ಕೈಗಾರಿಕೆ ಇಲಾಖೆಯ ನೇಮಕಾತಿಯಲ್ಲಿ ಅಕ್ರಮ ಆರೋಪ: ಬಂಧಿಸದೆ ಮುರುಗೇಶ್ ನಿರಾಣಿ ವಿರುದ್ಧದ ಪ್ರಕರಣ ವಿಚಾರಣೆಗೆ ಹೈಕೋರ್ಟ್ ಅಸ್ತು - Murugesh Nirani

ETV Bharat Logo

Copyright © 2024 Ushodaya Enterprises Pvt. Ltd., All Rights Reserved.