ETV Bharat / state

ಮಹಿಳೆಯೊಂದಿಗೆ ಡಿವೈಎಸ್ ಪಿ ಅಸಭ್ಯ ವರ್ತನೆ ; ಬಂಧಿತ ಅಧಿಕಾರಿ ಇಂದು ಕೋರ್ಟ್​ಗೆ ಹಾಜರು - DYSP ARRESTED

ದೂರುದಾರ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದಡಿ ಮಧುಗಿರಿ ಪೊಲೀಸರು ಆರೋಪಿ ಡಿವೈಎಸ್​ಪಿಯನ್ನು ಬಂಧಿಸಿದ್ದು, ಇಂದು ಕೋರ್ಟ್​ಗೆ ಹಾಜರುಪಡಿಸಲಿದ್ದಾರೆ.

MISBEHAVE WITH A LADY
ಡಿವೈಎಸ್ ಪಿ ಅಸಭ್ಯ ವರ್ತನೆ (Etv Bharat)
author img

By ETV Bharat Karnataka Team

Published : Jan 4, 2025, 9:43 AM IST

ತುಮಕೂರು: ದೂರು ನೀಡಲು ಬಂದ ಮಹಿಳೆಯೊಂದಿಗೆ ಪೊಲೀಸ್ ಠಾಣೆಯಲ್ಲೇ ಅಸಭ್ಯವಾಗಿ ವರ್ತಿಸಿದ​ ಆರೋಪದಡಿ ಬಂನಕ್ಕೊಳಗಾಗಿರುವ ಮಧುಗಿರಿ ಡಿವೈಎಸ್ ಪಿ ರಾಮಚಂದ್ರಪ್ಪ‌ ಅವರನ್ನು ಮಧುಗಿರಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಪೊಲೀಸರು ಮೆಡಿಕಲ್ ಟೆಸ್ಟ್ ಮಾಡಿಸಿದರು.

ಶುಕ್ರವಾರ ರಾತ್ರಿ ಬಂಧಿಸಿರುವ ಮಧುಗಿರಿ ಪೊಲೀಸರು, ಆರೋಪಿ ರಾಮಚಂದ್ರಪ್ಪ ಅವರನ್ನು ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಮಧುಗಿರಿ ಜೆಎಂಎಫ್ ಸಿ ಕೋರ್ಟ್​ನ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಸಂತ್ರಸ್ತ ಮಹಿಳೆಯಿಂದ ದೂರು ಪಡೆದು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಆರೋಪಿ ರಾಮಚಂದ್ರಪ್ಪ ಪೊಲೀಸ್ ಠಾಣೆಯಲ್ಲಿಯೇ ರಾತ್ರಿಯಿಡಿ ಕುಳಿತಿದ್ದರು.

ನಂತರ ಡಿವೈಎಸ್ ಪಿಯನ್ನ ಬಂಧಿಸಿ ಕೆಲ ಸಮಯ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಕೂರಿಸಿ ವಿಚಾರಣೆ ನಡೆಸಿದರು.

ಪ್ರಕರಣ ಹಿನ್ನೆಲೆ: ದೂರು ನೀಡಲು ಬಂದಿದ್ದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಆರೋಪದಡಿ ಮಧುಗಿರಿ ಉಪವಿಭಾಗದ ಡಿವೈಎಸ್ಪಿ ರಾಮಚಂದ್ರಯ್ಯ ಅವರನ್ನ ಸಸ್ಪೆಂಡ್ ಮಾಡಿ ಪೊಲೀಸ್ ಇಲಾಖೆ ನಿನ್ನೆಯೇ ಆದೇಶಿಸಿತ್ತು.

ಮಹಿಳೆಯೊಂದಿಗೆ ಅಸಭ್ಯ ವರ್ತನೆ ತೋರಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದರಿಂದ ಪೊಲೀಸ್ ಇಲಾಖೆಯು ತಲೆತಗ್ಗಿಸುವಂತಾಗಿತ್ತು. ಹೀಗಾಗಿ ನಿವೃತ್ತಿಗೆ ಎರಡು ವರ್ಷವಿದ್ದ ರಾಮಚಂದ್ರಯ್ಯ ಅವರನ್ನ ಅಮಾನತು ಮಾಡಿ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಲೋಕ್ ಮೋಹನ್ ಅವರು ಆದೇಶ ಹೊರಡಿಸಿದ್ದಾರೆ.

ಜಮೀನು ವಿಚಾರವಾಗಿ ಮಹಿಳೆಯು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಎಂದು ಕರೆಯಿಸಿಕೊಂಡಿದ್ದ ಡಿವೈಎಸ್ಪಿ ಅವರು ಆ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದರು. ಕೆಲ ದಿನಗಳ ಹಿಂದೆಯೇ ಈ ಕೃತ್ಯವೆಸಗಿದ್ದು, ಶುಕ್ರವಾರ ವಿಡಿಯೋ ವೈರಲ್ ಆಗಿತ್ತು.

ಇದನ್ನೂ ಓದಿ : ದೂರು ನೀಡಲು ಬಂದಿದ್ದ ಮಹಿಳೆಯೊಂದಿಗೆ ಅಸಭ್ಯ ವರ್ತನೆ: ಮಧುಗಿರಿ ಉಪವಿಭಾಗದ ಡಿವೈಎಸ್ಪಿ ಸಸ್ಪೆಂಡ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.