ETV Bharat / state

"ರಾಜ್ಯದಲ್ಲಿರುವ ATM ಸರ್ಕಾರಕ್ಕೆ ನಿಗಮ ಮಂಡಳಿಗಳೇ ATM ಗಳು!": ಆರ್. ಅಶೋಕ್ - R ASHOK - R ASHOK

ಕರ್ನಾಟಕವನ್ನು ಲೂಟಿ ಮಾಡಿ ಕಾಂಗ್ರೆಸ್ ಹೈಕಮಾಂಡ್​ಗೆ ಟಕಾಟಕ್ ಅಂತ ಹಣ ವರ್ಗಾವಣೆ ಮಾಡುತ್ತಿರುವ ರಾಜ್ಯ ಕಾಂಗ್ರೆಸ್​ ಸರ್ಕಾರಕ್ಕೆ ರಾಜ್ಯದ ನಿಗಮ ಮಂಡಳಿಗಳೇ ಎಟಿಎಂಗಳೆಂದು ಆರ್​. ಅಶೋಕ್​ ಆರೋಪಿಸಿದ್ದಾರೆ.

ಆರ್. ಅಶೋಕ್
ಆರ್. ಅಶೋಕ್ (ETV Bharat)
author img

By ETV Bharat Karnataka Team

Published : Jun 2, 2024, 11:58 AM IST

ಬೆಂಗಳೂರು: ಕರ್ನಾಟಕವನ್ನು ಲೂಟಿ ಮಾಡಿ ಕಾಂಗ್ರೆಸ್​​ ಹೈಕಮಾಂಡ್​ಗೆ ಟಕಾಟಕ್​ ಅಂತ ಹಣ ವರ್ಗಾವಣೆ ಮಾಡುತ್ತಿರುವ ರಾಜ್ಯ ಕಾಂಗ್ರೆಸ್​ ಸರ್ಕಾರಕ್ಕೆ ರಾಜ್ಯದ ನಿಗಮ ಮಂಡಳಿಗಳೇ ಎಟಿಎಂಗಳು ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.

"ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬ್ರಹ್ಮಾಂಡ ಭ್ರಷ್ಟಾಚಾರ ಗಮನಿಸಿದರೆ, ರಾಜ್ಯದಲ್ಲಿರುವ ಎಲ್ಲಾ ನಿಗಮ ಮಂಡಳಿಗಳನ್ನು ಭ್ರಷ್ಟಾಚಾರಕ್ಕೆ ಬಳಸಿಕೊಂಡಿರುವ ದಟ್ಟವಾದ ಶಂಕೆ ಮೂಡುತ್ತಿದೆ. ದಲಿತರು, ಹಿಂದುಳಿದವರು, ಬಡವರು, ರೈತರು, ಗ್ರಾಮೀಣ ಪ್ರದೇಶಗಳ ಜನರ ಕಲ್ಯಾಣಕ್ಕೆ ವಿನಿಯೋಗವಾಗಬೇಕಿದ್ದ ನಿಗಮ ಮಂಡಳಿಗಳ ಹಣ ಭ್ರಷ್ಟರ ಪಾಲಾಗುತ್ತಿರುವ ವಾಸನೆ ಬರುತ್ತಿದೆ" ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅಶೋಕ್ ಪೋಸ್ಟ್ ಮಾಡಿದ್ದಾರೆ.

"ಕರ್ನಾಟಕದ ಜನತೆಯಲ್ಲಿ ಮೂಡಿರುವ ಈ ಅನುಮಾನ ನಿವಾರಿಸಲು, ರಾಜ್ಯದ ಎಲ್ಲಾ ನಿಗಮ ಮಂಡಳಿಗಳ ಹಣಕಾಸಿನ ಸ್ಥಿತಿಗತಿ ಬಗ್ಗೆ ಒಂದು ಸಂಪೂರ್ಣ ಆಡಿಟ್ ನಡೆಸಿ, ನಿಗಮ ಮಂಡಳಿಗಳ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತ ಪತ್ರ ಹೊರಡಿಸಬೇಕು" ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ.

"2013 ರಲ್ಲಿ ಶುದ್ಧಹಸ್ತರಲ್ಲ ಎಂದು ಡಿ.ಕೆ. ಶಿವಕುಮಾರ್​ ಅವರನ್ನೇ ಒಂದು ವರ್ಷ ಸಂಪುಟದಿಂದ ಹೊರಗಿಟ್ಟಿದ್ದ ಸಿಎಂ ಸಿದ್ದರಾಮಯ್ಯ ಅವರು ಈಗ ತಮ್ಮ ಎರಡನೇ ಅವಧಿಯಲ್ಲಿ ಭ್ರಷ್ಟಾಚಾರದಲ್ಲಿ ರೆಡ್​ ಹ್ಯಾಂಡಾಗಿ ಸಿಕ್ಕಿ ಹಾಕಿಕೊಂಡಿರುವ ಒಬ್ಬ ಸಚಿವನ ರಾಜೀನಾಮೆಯನ್ನೂ ಪಡೆಯಲಾಗದಷ್ಟು ದುರ್ಬಲರಾಗಿದ್ದಾರೆ" ಎಂದು ಅಶೋಕ್​ ಟೀಕಿಸಿದ್ದಾರೆ.

"ಸಿಎಂ ಸಿದ್ದರಾಮಯ್ಯನವರೇ, ನಿಮ್ಮ ಪರಿಸ್ಥಿತಿ ಕಂಡರೆ ಅಯ್ಯೋ ಎಂದು ಕನಿಕರ ಮೂಡುತ್ತಿದೆ. ಭ್ರಷ್ಟ ಸಚಿವರಿಂದ ಬ್ಲಾಕ್ ಮೇಲ್ ಮಾಡಿಸಿಕೊಂಡು ಕುರ್ಚಿ ಉಳಿಸಿಕೊಳ್ಳುವಂತಹ ದುರ್ಗತಿ ನಿಮಗೆ ಬರಬಾರದಿತ್ತು. ಕರ್ನಾಟಕದ ಅತ್ಯಂತ ವೀಕ್ ಮುಖ್ಯಮಂತ್ರಿ ಎಂದು ಇತಿಹಾಸದಲ್ಲಿ ಕುಖ್ಯಾತಿ ಪಡೆದುಕೊಳ್ಳುವ ಬದಲು ರಾಜೀನಾಮೆ ಕೊಟ್ಟು ಗೌರವದಿಂದ ನಿವೃತ್ತರಾಗಿ" ಎಂದು ಅಶೋಕ್​ ಟ್ವಿಟ್ಟರ್​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಚಾರ್ ಸೌ ಪಾರ್ ದಾಟಿ ಮುಂದಕ್ಕೆ ಹೋಗುತ್ತೇವೆ: ಪ್ರಲ್ಹಾದ್ ಜೋಶಿ ವಿಶ್ವಾಸ - pralhad joshi

ETV Bharat Logo

Copyright © 2025 Ushodaya Enterprises Pvt. Ltd., All Rights Reserved.