ETV Bharat / state

ಬೆಂಗಳೂರಲ್ಲಿ ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯ: ಸರಣಿ ಅಪಘಾತ - Bengaluru Serial Accident - BENGALURU SERIAL ACCIDENT

ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿಯಲ್ಲಿ ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯದಿಂದ ಸರಣಿ ಅಪಘಾತ ಸಂಭವಿಸಿದೆ.

Bengaluru serial accident
ಬೆಂಗಳೂರು ಸರಣಿ ಅಪಘಾತ
author img

By ETV Bharat Karnataka Team

Published : Apr 27, 2024, 11:16 AM IST

ಬೆಂಗಳೂರು: ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯದಿಂದ ಸರಣಿ ಅಪಘಾತ ಸಂಭವಿಸಿರುವ ಘಟನೆ‌ ಶುಕ್ರವಾರ ರಾತ್ರಿ 10.45ರ ಸುಮಾರಿಗೆ ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ನಡೆದಿದೆ. ಸಿಟಿ ಮಾರ್ಕೆಟ್ ಕಡೆಯಿಂದ ಗುಡ್ಡದಹಳ್ಳಿ ಮಾರ್ಗವಾಗಿ ವೇಗವಾಗಿ ಬಂದ ಆ್ಯಂಬುಲೆನ್ಸ್ ಚಾಲಕ ನಿಯಂತ್ರಣ ತಪ್ಪಿ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಈ ವೇಳೆ, ಗಾಬರಿಯಲ್ಲಿ ಬ್ರೇಕ್ ಬದಲು ಎಕ್ಸಲರೇಟರ್ ತುಳಿದ ಪರಿಣಾಮ ಮುಂದಿದ್ದ ಎರಡು ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ ಸಂಭವಿಸಿದೆ.

ಬೆಂಗಳೂರಲ್ಲಿ ಸರಣಿ ಅಪಘಾತ
ಬೆಂಗಳೂರಲ್ಲಿ ಸರಣಿ ಅಪಘಾತ

ಅಪಘಾತದ ವೇಳೆ ಕಾರಿಲ್ಲಿದ್ದ ನಾಲ್ಕು ತಿಂಗಳ ಗರ್ಭಿಣಿ ಮಹಿಳೆ ಅದೃಷ್ಟವಶಾತ್ ಪಾರಾಗಿದ್ದು, ದ್ವಿಚಕ್ರ ವಾಹನ ಸವಾರನ ಕಾಲಿಗೆ ಹಾಗೂ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆ್ಯಂಬುಲೆನ್ಸ್ ಚಾಲಕ ಸುಮಂತ್​​ನನ್ನ ಬ್ಯಾಟರಾಯನಪುರ ಸಂಚಾರಿ ಠಾಣಾ ಪೊಲೀಸರು ವಶಕ್ಕೆ ಪಡೆದು ದಾಖಲಿಸಿಕೊಂಡಿದ್ದಾರೆ.

ಬೆಂಗಳೂರಲ್ಲಿ ಸರಣಿ ಅಪಘಾತ
ಬೆಂಗಳೂರಲ್ಲಿ ಸರಣಿ ಅಪಘಾತ

ಇದನ್ನೂ ಓದಿ: ಭೀಕರ ಅಪಘಾತ: ಮಹಾರಾಷ್ಟ್ರಕ್ಕೆ ಮದುವೆಗೆಂದು ತೆರಳುತ್ತಿದ್ದ ಬಾಗಲಕೋಟೆಯ ಐವರು ದುರ್ಮರಣ - Road Accident

ಇದನ್ನೂ ಓದಿ: ಭೀಕರ ರಸ್ತೆ ಅಪಘಾತ: ಬಾಲಕಿ ಸೇರಿ ಆರು ಮಂದಿ ದುರ್ಮರಣ - Six killed in accident in Telangana

ETV Bharat Logo

Copyright © 2025 Ushodaya Enterprises Pvt. Ltd., All Rights Reserved.