ETV Bharat / state

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ: ವಿಧಾನಸಭೆಯಲ್ಲಿ ತಿದ್ದುಪಡಿ ವಿಧೇಯಕ ಮಂಡನೆ - ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಮಸೂದೆ

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷಾ ಬಳಕೆ ಕಡ್ಡಾಯಗೊಳಿಸುವ ತಿದ್ದುಪಡಿ ವಿಧೇಯಕವನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಇಂದು ವಿಧಾನಸಭೆಯಲ್ಲಿ ಮಂಡಿಸಿದರು.

amendment-bill-to-make-the-use-of-60-percentage-kannada-language-mandatory-on-signboard-is-presented-in-the-assembly
ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯ: ವಿಧಾನಸಭೆಯಲ್ಲಿ ತಿದ್ದುಪಡಿ ವಿಧೇಯಕ ಮಂಡನೆ
author img

By ETV Bharat Karnataka Team

Published : Feb 13, 2024, 5:28 PM IST

ಬೆಂಗಳೂರು: ರಾಜ್ಯದ ಎಲ್ಲ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷಾ ಬಳಕೆಯನ್ನು ಕಡ್ಡಾಯಗೊಳಿಸುವ ಮಹತ್ವದ 'ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ'ವನ್ನು ಇಂದು ವಿಧಾನಸಭೆಯಲ್ಲಿ ಮಂಡಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಶಿವರಾಜ ತಂಗಡಗಿ ಅವರ ಪರವಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧೇಯಕವನ್ನು ಮಂಡಿಸಿದರು.

ಭಾಷಾ ಅನುಷ್ಠಾನ ರಾಜ್ಯ ಸಮಿತಿ: ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್​ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು, ಹೋಟೆಲ್‍ಗಳು ಮತ್ತು ಮುಂತಾದೆಡೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.60ರಷ್ಟು ಪ್ರಮಾಣದಲ್ಲಿ ಪ್ರದರ್ಶಿಸುವುದನ್ನು ವಿಧೇಯಕದಲ್ಲಿ ಕಡ್ಡಾಯಗೊಳಿಸಲಾಗಿದೆ. ಇದಕ್ಕಾಗಿ ಅಧಿನಿಯಮದ ಸೆಕ್ಷನ್ 13ಕ್ಕೆ ತಿದ್ದುಪಡಿ ತರಲಾಗಿದ್ದು, ಭಾಷಾ ಅನುಷ್ಠಾನ ರಾಜ್ಯ ಸಮಿತಿಗೆ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ನಿರ್ದೇಶಕರನ್ನು ಸದಸ್ಯರನ್ನಾಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯವರನ್ನು ಸಂಚಾಲಕರನ್ನಾಗಿಯೂ ನೇಮಿಸಲು ನಿರ್ಧರಿಸಲಾಗಿದೆ.

ಪರಿಣಾಮವೇನು?: ಇದರಿಂದ ಇನ್ನು ಮುಂದೆ ಕಾಟಾಚಾರಕ್ಕೆ ಕನ್ನಡ ಬರದಂತೆ ಮಾಡುವುದು ಅಥವಾ ಅಸಡ್ಡೆಯಿಂದ ನಾಮಫಲಕದ ಒಂದು ಮೂಲೆಯಲ್ಲಿ ಕನ್ನಡ ಭಾಷೆ ಬಳಸುವುದಕ್ಕೆ ಕಡಿವಾಣ ಬೀಳಲಿದೆ. ಅನೇಕ ಕಡೆಗಳಲ್ಲಿ, ಅದರಲ್ಲೂ ವಿಶೇಷವಾಗಿ ಬೆಂಗಳೂರಿನಂತಹ ಮೆಟ್ರೋ ರೈಲಿನಲ್ಲಿ ಇಂತಹ ನಿರ್ಲಕ್ಷ್ಯ ಎದ್ದು ಕಾಣುತ್ತಿತ್ತು. ಇದೇ ಕಾರಣಕ್ಕೆ ಕನ್ನಡಿಗರು ಮತ್ತು ಪರಭಾಷಾ ಒಲವಿನ ಖಾಸಗಿಯವರ ನಡುವೆ ತೀವ್ರ ಜಟಾಪಟಿ ನಡೆಯುತ್ತಲೇ ಇತ್ತು. ಬೇರೆ ರಾಜ್ಯಗಳಲ್ಲಿ ಅಲ್ಲಿನ ಸ್ಥಳೀಯ ಭಾಷೆಗಳು ಎದ್ದು ಕಾಣುವಂತೆಯೇ ಕರ್ನಾಟಕದಲ್ಲೂ ಆಗಬೇಕು ಎಂಬುದು ಕನ್ನಡಿಗರೆಲ್ಲರ ಒತ್ತಾಯ.

ಇತ್ತೀಚೆಗೆ ರಾಜಧಾನಿಯಲ್ಲಿ ಕನ್ನಡಪರ ಸಂಘಟನೆಗಳು ಕನ್ನಡ ನಾಮಫಲಕದ ಪರವಾಗಿ ಹೋರಾಟ ನಡೆಸಿದ್ದವು. ಆ ಸಂದರ್ಭದಲ್ಲಿ ಕನ್ನಡ ಸಂಘಟನೆಗಳ ಕಾರ್ಯಕರ್ತರ ಆಕ್ರೋಶಕ್ಕೆ ಪರಭಾಷಾ ನಾಮಫಲಕಗಳು ಗುರಿಯಾಗಿ, ಈ ವಿಷಯ ವ್ಯಾಪಕವಾಗಿ ಗಮನ ಸೆಳೆದಿತ್ತು.

ಇದನ್ನೂ ಓದಿ: ಬೆಳಗಾವಿ ಜಿಲ್ಲೆ ವಿಭಜನೆಗೆ ಮುಂದಾದ ಸರ್ಕಾರ: ವರದಿ‌ ಸಲ್ಲಿಸುವಂತೆ ಪ್ರಾದೇಶಿಕ ಆಯುಕ್ತರಿಗೆ ಸೂಚನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.