ETV Bharat / state

ಅಮೆರಿಕ ಪ್ರವಾಸ ಖಾಸಗಿಯದ್ದು, ಯಾವ ನಾಯಕರನ್ನೂ ಭೇಟಿ ಮಾಡುತ್ತಿಲ್ಲ: ಡಿಸಿಎಂ ಡಿಕೆಶಿ ಸ್ಪಷ್ಟನೆ - D K Shivakumar US Tour - D K SHIVAKUMAR US TOUR

ಅಮೆರಿಕ ಪ್ರವಾಸದ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಪ್ರವಾಸವು ಖಾಸಗಿಯದ್ದಾಗಿದೆ ಎಂದಿದ್ದಾರೆ.

d k shivakumar
ಡಿ.ಕೆ.ಶಿವಕುಮಾರ್ (ETV Bharat)
author img

By ETV Bharat Karnataka Team

Published : Sep 8, 2024, 8:26 PM IST

ಬೆಂಗಳೂರು: ತಾವು ಕುಟುಂಬ ಸದಸ್ಯರ ಜೊತೆ ಕೈಗೊಳ್ಳುತ್ತಿರುವ ಒಂದು ವಾರದ ಅಮೆರಿಕ ಪ್ರವಾಸ ಖಾಸಗಿಯದ್ದಾಗಿದೆ. ಯಾವುದೇ ನಾಯಕರನ್ನು ಭೇಟಿ ಮಾಡುತ್ತಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಇಂದಿನಿಂದ ಸೆಪ್ಟೆಂಬರ್​​ 15ರವರೆಗೆ ಕೈಗೊಳ್ಳುತ್ತಿರುವ ಅಮೆರಿಕ ಪ್ರವಾಸ ಸಂದರ್ಭದಲ್ಲಿ ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಹಾಗೂ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿರುವ ಕಮಲಾ ಹ್ಯಾರಿಸ್ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಸುದ್ದಿ ಮಾಧ್ಯಮಗಳಲ್ಲಿ ವರದಿಗಳಾಗಿತ್ತು. ಈ ಹಿನ್ನೆಲೆಯಲ್ಲಿ ಡಿಕೆಶಿ ಮಾಧ್ಯಮ ಹೇಳಿಕೆ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಅಮೆರಿಕ ಪ್ರವಾಸ ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದಿರುವ ಪತ್ರವನ್ನು ಸಹ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ. ಇಂದು ಸಾಯಂಕಾಲ 6.30ರ ಸಮಯದಲ್ಲಿ ಬೆಂಗಳೂರಿನಿಂದ ಡಿಕೆಶಿ ಅಮೆರಿಕದತ್ತ ಪ್ರಯಾಣ ಬೆಳೆಸಿದ್ದಾರೆ.

ಇದನ್ನೂ ಓದಿ: ಗಡುವಿನೊಳಗೆ ಬೆಂಗಳೂರಿನ ರಸ್ತೆಗುಂಡಿ ಮುಚ್ಚದಿದ್ದರೆ ನಿರ್ದಾಕ್ಷಿಣ್ಯ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್ - D K Shivakumar

ETV Bharat Logo

Copyright © 2025 Ushodaya Enterprises Pvt. Ltd., All Rights Reserved.