ಬೆಂಗಳೂರು: ಲೋಕಸಭೆ ಚುನಾವಣೆಯ ಫಲಿತಾಂಶ ಬಹುತೇಕ ಹೊರಬಂದಿದ್ದು ಬಿಜೆಪಿ, ಕೇಂದ್ರದಲ್ಲಿ ಸರ್ಕಾರ ರಚಿಸುವ ಕಸರತ್ತು ಆರಂಭಿಸಿದೆ. ಈ ನಿಟ್ಟಿನಲ್ಲಿ ನಾಳೆ ಎನ್‌ಡಿಎ ನಾಯಕರ ಸಭೆ ಕರೆದಿದೆ. ಈ ಸಭೆಯಲ್ಲಿ ಪಾಲ್ಗೊಳ್ಳುವಂತೆ ಕರ್ನಾಟಕದ ಮಿತ್ರಪಕ್ಷ ಜೆಡಿಎಸ್‌ಗೆ ಅಮಿತ್ ಶಾ ಆಹ್ವಾನ ನೀಡಿದ್ದಾರೆ.
ಮಂಡ್ಯ ಕ್ಷೇತ್ರದಿಂದ ಭಾರೀ ಅಂತರಿಂದ ಗೆದ್ದಿರುವ ಜೆಡಿಎಸ್ ರಾಜ್ಯಾಧ್ಯಕ್ಷರೂ ಆದ ಹೆಚ್.ಡಿ.ಕುಮಾರಸ್ವಾಮಿ ನಾಳೆ ನವದೆಹಲಿಗೆ ಪ್ರಯಾಣಿಸಲಿದ್ದಾರೆ.
ನಿರೀಕ್ಷಿತ ಪ್ರಮಾಣದ ಫಲಿತಾಂಶ ಬಾರದ ಹಿನ್ನೆಲೆಯಲ್ಲಿ ಸರ್ಕಾರ ರಚನೆಯ ಕಸರತ್ತು ಶುರು ಮಾಡಿರುವ ಬಿಜೆಪಿ ನಾಯಕರು ಎನ್‌ಡಿಎ ನಾಯಕರ ಮಹತ್ವದ ಸಭೆ ಕರೆದಿದ್ದಾರೆ. ಕರ್ನಾಟಕದಲ್ಲಿ ಮೂರು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಜೆಡಿಎಸ್, ಮಂಡ್ಯ ಮತ್ತು ಕೋಲಾರದಲ್ಲಿ ಗೆಲುವು ಸಾಧಿಸಿದೆ.
ಇದನ್ನೂ ಓದಿ: ಮಂಡ್ಯ ಲೋಕಸಭಾ ಕ್ಷೇತ್ರ: ಗೆಲುವಿನ ಸನಿಹದಲ್ಲಿ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ - Mandya Loksabha Constituency