ಬೆಂಗಳೂರು: ಲೋಕಸಭಾ ಚುನಾವಣಾ ಪ್ರಚಾರ ಹಿನ್ನೆಲೆ ಮಂಗಳವಾರ (ನಾಳೆ) ನಗರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ. ಈ ಮೊದಲು ಅವರು ಬೆಂಗಳೂರಿನ ಉತ್ತರ, ದಕ್ಷಿಣ ಮತ್ತು ಗ್ರಾಮಾಂತರ ಮೂರು ಕ್ಷೇತ್ರಗಳಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ತಿಳಿಸಲಾಗಿತ್ತು. ಆದರೆ, ಈ ವೇಳಾಪಟ್ಟಿಯಲ್ಲಿ ಇದೀಗ ಸ್ವಲ್ಪ ಬದಲಾವಣೆ ಆಗಿದೆ. ಅದರ ಅನುಸಾರ, ಒಂದು ಕ್ಷೇತ್ರದಲ್ಲಿ ಮಾತ್ರ ರೋಡ್ ಶೋ ನಡೆಸಲಿದ್ದಾರೆ.
ಏಪ್ರಿಲ್ 23ರಂದು ನಗರಕ್ಕೆ ಆಗಮಿಸಲಿರುವ ಅವರು ಅವರು ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಮಾತ್ರ ಅವರು ರೋಡ್ ಶೋ ನಡೆಸಲಿದ್ದು, ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪರ ರೋಡ್ ಶೋ ನಡೆಸುವ ಮೂಲಕ ಮತಯಾಚಿಸಲಿದ್ದಾರೆ.
ಹೊಸ ವೇಳಾಪಟ್ಟಿ ಪ್ರಕಾರ ಅವರು, ನಾಳೆ ಸಂಜೆ 7 ಗಂಟೆಗೆ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅಮಿತ್ ಶಾ ಅವರ ರೋಡ್ ಶೋ 7.30ಕ್ಕೆ ಆರಂಭವಾಗಲಿದೆ. ಬೊಮ್ಮನಹಳ್ಳಿ ಸರ್ಕಲ್ ನಿಂದ ಹೊರಟು ಐಐಎಂಬಿ ಬನ್ನೇರುಘಟ್ಟ ರಸ್ತೆ, ಬಿಳೇಕಹಳ್ಳಿವರೆಗೂ ರೋಡ್ ಶೋ ನಡೆಸಲಿರುವ ಅಮಿತ್ ಶಾ, ರಾತ್ರಿ 8.30ರ ವರೆಗೂ ಪ್ರಚಾರ ಕೈಗೊಳ್ಳಲಿದ್ದಾರೆ. ನಂತರ ಹೆಚ್ಎಎಲ್ ಗೆ ತೆರಳಿ ಅಲ್ಲಿಂದ ಕೇರಳಕ್ಕೆ ಪ್ರಯಾಣ ಬೆಳೆಸಲಿದ್ದಾರೆ.
ಶನಿವಾರ ಪ್ರಧಾನ ಮಂತ್ರಿ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನ ಭೇಟಿ ನೀಡಿ, ಮತದಾರರಲ್ಲಿ ಮತಯಾಚಿಸಿದ್ದರು. ಬೆಂಗಳೂರಿನಲ್ಲಿ ಚುನಾವಣೆಗೆ ಇನ್ನು ನಾಲ್ಕು ದಿನ ಬಾಕಿ ಇದ್ದು, ಚುನಾವಣಾ ಪ್ರಚಾರ ಅಬ್ಬರದಿಂದ ಸಾಗಿದೆ.
ಇದನ್ನೂ ಓದಿ: ವೀಕೆಂಡ್ ಎಂದು ಪ್ರವಾಸಕ್ಕೆ ಹೋಗದೆ ಮತದಾನದಲ್ಲಿ ಪಾಲ್ಗೊಳ್ಳಿ: ತೇಜಸ್ವಿ ಸೂರ್ಯ