ETV Bharat / state

ಚನ್ನಪಟ್ಟಣದಲ್ಲಿ ಭರ್ಜರಿ ರೋಡ್ ಶೋ ನಡೆಸಿದ ಅಮಿತ್ ಶಾ: ಡಾ.ಮಂಜುನಾಥ್ ಪರ ಮತಬೇಟೆ - Amit Shah Road Show

ಬೆಂಗಳೂರು ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಡಾ.ಮಂಜುನಾಥ್ 5 ಲಕ್ಷಕ್ಕೂ ಹೆಚ್ಚು ಮತ ಅಂತರದಿಂದ ಜಯ ಸಾಧಿಸಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದರು.

ಚೆನ್ನಪಟ್ಟಣದಲ್ಲಿ ಅಮಿತ್ ಶಾ ಭರ್ಜರಿ ರೋಡ್ ಶೋ
ಚೆನ್ನಪಟ್ಟಣದಲ್ಲಿ ಅಮಿತ್ ಶಾ ಭರ್ಜರಿ ರೋಡ್ ಶೋ
author img

By ETV Bharat Karnataka Team

Published : Apr 2, 2024, 10:47 PM IST

Updated : Apr 2, 2024, 11:03 PM IST

ಚನ್ನಪಟ್ಟಣದಲ್ಲಿ ಭರ್ಜರಿ ರೋಡ್ ಶೋ ನಡೆಸಿದ ಅಮಿತ್ ಶಾ: ಡಾ.ಮಂಜುನಾಥ್ ಪರ ಮತಬೇಟೆ

ರಾಮನಗರ: ರಾಜ್ಯದಲ್ಲಿ ಬಿಜೆಪಿಯ ಅಬ್ಬರದ ಪ್ರಚಾರ ಆರಂಭಗೊಂಡಿದೆ. ಇಂದು ರಾಜ್ಯಕ್ಕೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆ, ಸಮಾವೇಶಗಳ ಬಳಿಕ ಚನ್ನಪಟ್ಟಣದಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಪರ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಅಮಿತ್ ಶಾ, ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದ್ದಾರೆ.

ಈ ವೇಳೆ ಅಮಿತ್ ಶಾ ಮಾತನಾಡಿ, ಈ ಬಾರಿ ನರೇಂದ್ರ ಮೋದಿಯವರಿಗೆ ಹೆಚ್ಚು ಶಕ್ತಿ ನೀಡಬೇಕಾದರೆ ಬಿಜೆಪಿ ಹಾಗೂ ಜೆಡಿಎಸ್​ಗೆ ವೋಟ್​ ನೀಡಬೇಕು. ಮೋದಿ ಅವರ ಆಶಯದಂತೆ‌ ದೇಶದಲ್ಲಿ ಈ ಬಾರಿ 400ಕ್ಕೂ ಹೆಚ್ಚು ಸ್ಥಾನ ಗೆಲ್ಲಿಸುವ ಮೂಲಕ ದೊಡ್ಡ ಶಕ್ತಿ ನೀಡಬೇಕು. ಹಾಗಾಯೇ ನರೇಂದ್ರ ಮೋದಿ ಅವರು ಕಳೆದ 10 ವರ್ಷದಲ್ಲಿ ಆಡಳಿತದಲ್ಲಿ ದೇಶದ ಆರ್ಥಿಕ ಶಕ್ತಿ ಎಷ್ಟು ಮುಂದುವರೆದಿದೆ ಎಂಬುದು ನಿಮ್ಮ ಕಣ್ಣ ಮುಂದೆಯೇ ಇದೆ ಎಂದರು.

ದೇಶವನ್ನು ಆರ್ಥಿಕವಾಗಿ ಪ್ರಪಂಚದಲ್ಲಿಯೇ 5ನೇ ದೊಡ್ಡ ದೇಶವನ್ನಾಗಿ ಮಾಡಿದ ಕೀರ್ತಿ ಮೋದಿಗೆ ಸಲ್ಲಲಿದ್ದು, ಮುಂದಿನ ದಿನಗಳಲ್ಲಿ ಮತ್ತೊಮ್ಮೆ ಶಕ್ತಿ ತುಂಬಿದರೆ ದೇಶ 3ನೇ ಸ್ಥಾನ‌ ಪಡೆಯುವುದರಲ್ಲಿ ಯಾವುದೇ ಸಂಶಯವಿಲ್ಲ. ಹಾಗೆಯೇ ದೇಶ ಸುರಕ್ಷಿತವಾಗಿರಬೇಕೆಂದರೆ ಬಿಜೆಪಿಗೆ ಮತ ನೀಡಬೇಕು. ಡಾ.ಮಂಜುನಾಥ್ ಅವರು 5 ಲಕ್ಷಕ್ಕೂ ಹೆಚ್ಚು ಮತ ಅಂತರದಿಂದ ಜಯ ಸಾಧಿಸಲಿದ್ದಾರೆ. ನಮಗೆ ಭ್ರಷ್ಟಾಚಾರ ಮುಕ್ತ ಆಡಳಿತ ಬೇಕು. ಮೋದಿ ವಿರುದ್ಧ ಒಂದೇ ಒಂದು ಭ್ರಷ್ಟಾಚಾರ ಪ್ರಕರಣ ಇಲ್ಲ. ಭ್ರಷ್ಟಾಚಾರರಹಿತ ಆಡಳಿತ ನೀಡಿದ್ದಾರೆ. ಹಾಗೆಯೇ ಮಂಜುನಾಥ್​ ಅವರು ಪ್ರಾಮಾಣಿಕರಾಗಿರುವ ಆಗಿದ್ದು, ಅವರನ್ನು ಭಾರೀ ಅಂತರದಿಂದ ಗೆಲ್ಲಿಸುವಂತೆ ಹೃದಯಪೂರ್ವಕವಾಗಿ ಮತದಾರರಲ್ಲಿ ಮನವಿ ಮಾಡಿದರು.

ಇದಕ್ಕೂ ಮುನ್ನ ಚನ್ನಪಟ್ಟಣಕ್ಕೆ ಆಗಮಿಸಿದ ಅಮಿತ್ ಶಾಗೆ ಪೂರ್ಣಕುಂಭ ಸ್ವಾಗತ ಕೋರಲಾಯಿತು. ತೆರೆದ ವಾಹನದಲ್ಲಿ ಅಮಿತ್ ಶಾ ಜತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ, ಬೆಂಗಳೂರು ಗ್ರಾಮಂತರ ಅಭ್ಯರ್ಥಿ ಸಿ.ಎನ್.ಮಂಜುನಾಥ್ ಮೊದಲ ಸಾಲಿನಲ್ಲಿ ಕಾಣಿಸಿಕೊಂಡರು. ವಾಹನದ ಹಿಂಭಾಗದಲ್ಲಿ ನಿಖಿಲ್ ಕುಮಾರಸ್ವಾಮಿ, ಸಿ.ಪಿ.ಯೋಗೇಶ್ವರ್, ಅಶ್ವಥ್​ ನಾರಾಯಣ್ ಸೇರಿದಂತೆ ಇತರ ಕೆಲ ಮುಖಂಡರು ಇದ್ದರು.

ಏಪ್ರಿಲ್ 4ರಂದು ಡಾ.ಸಿ.ಎನ್​ ಮಂಜುನಾಥ್​ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಬಿಜೆಪಿ ವಿರುದ್ಧ ಇಂಡಿಯಾ ಒಕ್ಕೂಟದಿಂದ ಒಗ್ಗಟ್ಟಿನ ಹೋರಾಟ: ಡಿ.ಕೆ.ಶಿವಕುಮಾರ್​ - D K Shivakumar

Last Updated : Apr 2, 2024, 11:03 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.