ಹಾವೇರಿ: ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಎರಡೂ ರಾಷ್ಟ್ರೀಯ ಪಕ್ಷದ ನಾಯಕರು ತಮ್ಮ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರವನ್ನೂ ನಡೆಸುತ್ತಿದ್ದಾರೆ. ಇದರ ಭಾಗವಾಗಿ ಇಂದು ಹಾವೇರಿಗೆ ಚುನಾವಣಾ ಚಾಣಕ್ಯ ಅಮಿತ್ ಶಾ ಆಗಮಿಸುತ್ತಿದ್ದು, ರಾಣೆಬೆನ್ನೂರಲ್ಲಿ ಭರ್ಜರಿ ರೋಡ್ ಶೋ ನಡೆಸಿಲಿದ್ದಾರೆ. ಬಳಿಕ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ್ ಬೊಮ್ಮಾಯಿ ಪರ ಮತಯಾಚಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ರಾಣೆಬೆನ್ನೂರು ನಗರದ ಕುರುಬಗೇರಿ ಕ್ರಾಸ್ ನಿಂದ ರೋಡ್ ಶೋ ಆರಂಭವಾಗಲಿದ್ದು, ಇಲ್ಲಿಂದ ಎಂ.ಜಿ ರಸ್ತೆಯ ಮೂಲಕ ಅಶೋಕ್ ಸರ್ಕಲ್ ವರೆಗೆ ಸುಮಾರು ಎರಡು ಕಿಲೋ ಮೀಟರ್ ವರೆಗೂ ಸಾಗಲಿದೆ.
ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಸತತವಾಗಿ ಹ್ಯಾಟ್ರಿಕ್ ಗೆಲವು ಪಡೆದುಕೊಂಡಿದ್ದು, ಈ ಬಾರಿಯೂ ಗೆಲುವು ಸಾಧಿಸಲು ಬಿಜೆಪಿ ನಾಯಕರು ಮಾಸ್ಟರ್ ಪ್ಲ್ಯಾನ್ ರೂಪಿಸುತ್ತಿದ್ದಾರೆ. ಕಾಂಗ್ರೇಸ್ ಆಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಸಹ 7 ಶಾಸಕರು ಮತ್ತು ಗ್ಯಾರಂಟಿ ಯೋಜನೆಯನ್ನು ಟ್ರಂಪ್ ಕಾರ್ಡ್ ಆಗಿ ಬಳಕೆ ಮಾಡಿ ಗೆಲುವಿಗೆ ತಂತ್ರ ರೂಪಿಸುತ್ತಿದ್ದಾರೆ.
ಇದರ ಮಧ್ಯೆಯೇ ಪ್ರಧಾನಿ ಮೋದಿ ಬೊಮ್ಮಾಯಿ ಅವರಿಗೆ ಪತ್ರ ಬರೆಯುವ ಮೂಲಕ ಮತ್ತೊಷ್ಟು ಶಕ್ತಿ ನೀಡಿದ್ದಾರೆ. ಚುನಾವಣೆಯಲ್ಲಿ ಗೆದ್ದು ಬರುವಂತೆ ಶುಭ ಕೋರಿದ್ದಾರೆ. ನೀವು ಸಂಸದರಾಗಿ ನನ್ನ ತಂಡ ಸೇರುತ್ತಿರುವುದು ದೊಡ್ಡ ಆಸ್ತಿ. ನೀವು ಮುಖ್ಯಮಂತ್ರಿಯಾಗಿ, ನೀರಾವರಿ, ಗೃಹ, ಕಾನೂನು ಸಚಿವರಾಗಿ ಪ್ರಮುಖ ಜವಾಬ್ದಾರಿಗಳನ್ನು ನಿಭಾಯಿಸಿದ್ದೀರಿ ಇದೀಗ ಲೋಕಸಭೆಯಲ್ಲಿ ಗೆದ್ದು ಬರುವಂತೆ ಶುಭ ಕೋರಿದ್ದಾರೆ.
ಇದನ್ನೂ ಓದಿ: ಮೋದಿ ಸೋಲಿಸಲು ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಅವಶ್ಯವಾಗಿದೆ: ಸಿ.ಎಂ. ಇಬ್ರಾಹಿಂ - CM Ibrahim