ETV Bharat / state

ರಾಜ್ಯಕ್ಕೆ ಇಂದು ಅಮಿತ್ ಶಾ: ಬಿಜೆಪಿ, ಜೆಡಿಎಸ್ ನಾಯಕರ ಜೊತೆ ಸಭೆ, ಚನ್ನಪಟ್ಟಣದಲ್ಲಿ ರೋಡ್ ಶೋ - Amith shah Campaign - AMITH SHAH CAMPAIGN

ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಬಿಜೆಪಿ, ಜೆಡಿಎಸ್ ನಾಯಕರ ಜೊತೆ ಅಮಿತ್ ಶಾ ಸಭೆ ನಡೆಸಿ ಚರ್ಚಿಸಲಿದ್ದಾರೆ. ಬಳಿಕ ಚನ್ನಪಟ್ಟಣಕ್ಕೆ ತೆರಳಿ ರೋಡ್​ ಶೋ ನಡೆಸಲಿದ್ದಾರೆ.

ಇಂದು ಬೊಂಬೆನಗರಿ ಚನ್ನಪಟ್ಟಣಕ್ಕೆ ಚುನಾವಣಾ ಚಾಣಕ್ಯ ಅಮಿತಾ ಶಾ ಮೊದಲ ಭೇಟಿ

author img

By ETV Bharat Karnataka Team

Published : Apr 2, 2024, 9:11 AM IST

Updated : Apr 2, 2024, 9:53 AM IST

ರಾಮನಗರ/ಬೆಂಗಳೂರು: ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ‌ ಇದೇ ಪ್ರಥಮ ಬಾರಿಗೆ ರಾಜ್ಯಕ್ಕೆ ಚುನಾವಣಾ ಚಾಣಿಕ್ಯ ಅಮಿತ್ ಶಾ ಆಗಮಿಸುತ್ತಿದ್ದು, ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಲೋಕಸಭಾ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಒಟ್ಟಾಗಿ ಪ್ರಚಾರ ಕಾರ್ಯ ನಡೆಸುವ ನಿಟ್ಟಿನಲ್ಲಿ ಉಭಯ ಪಕ್ಷಗಳ ನಾಯಕರ ನಡುವೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಉಭಯ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ.

ರೇಸ್ ಕೋರ್ಸ್ ರಸ್ತೆಯಲ್ಲಿರುವ ತಾಜ್ ವೆಸ್ಟ್ ಎಂಡ್ ಹೋಟೆಲ್​​ನಲ್ಲಿ ಇಂದು ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಸಭೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಅಪೇಕ್ಷಿತರು ಭಾಗಿಯಾಗಲಿದ್ದಾರೆ. ಅಮಿತ್ ಶಾ ಕರೆದಿರುವ ಬೆಳಗಿನ ಉಪಹಾರ ಸಭೆಯಲ್ಲಿ ಬಿಜೆಪಿಯ 15 ಹಾಗೂ ಜೆಡಿಎಸ್‌ ನ 8 ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ.

ಈಗಾಗಲೇ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭಗೊಂಡಿದ್ದ ಎಲ್ಲಾ ಕ್ಷೇತ್ರದಲ್ಲಿಯೂ ಜಂಟಿ ಪ್ರಚಾರ ಕಾರ್ಯ ನಡೆಸುವ, ಮಿತ್ರಪಕ್ಷದ ನಾಯಕರು, ಕಾರ್ಯಕರ್ತರ ವಿಶ್ವಾಸಕ್ಕೆ ಪಡೆದುಕೊಂಡು ಒಟ್ಟಾಗಿ ಹೋಗುವ ಕುರಿತು ಚರ್ಚಿಸಲಾಗುತ್ತದೆ. ಮಿತ್ರಪಕ್ಷಗಳ ನಡುವೆ ಇರುವ ಗೊಂದಲ, ಅಸಮಾಧಾನಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಅಮಿತ್ ಶಾ ಎಲ್ಲರ ಅಭಿಪ್ರಾಯ ಪಡೆದು ಸಮಾಲೋಚನೆ ನಡೆಸಿ ಸಲಹೆ ಸೂಚನೆ ನೀಡಲಿದ್ದಾರೆ‌.

ಬಿಜೆಪಿ: ಹಿರಿಯ ನಾಯಕ ಬಿ.ಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯ ಚುನಾವಣಾ ಉಸ್ತುವಾರಿ ರಾಧಾಮೋಹನ್ ದಾಸ್, ಆರ್.ಅಶೋಕ್, ಪ್ರಹ್ಲಾದ್ ಜೋಶಿ, ಸದಾನಂದಗೌಡ, ಬಸವರಾಜ್ ಬೊಮ್ಮಾಯಿ, ನಳೀನ್ ಕುಮಾರ್ ಕಟೀಲ್, ಗೋವಿಂದ್ ಕಾರಜೋಳ, ಸಿ.ಟಿ ರವಿ, ಶ್ರೀರಾಮುಲು, ಸಿ.ಎನ್ ಅಶ್ವಥ್ ನಾರಾಯಣ್, ನಿರ್ಮಲ್ ಕುಮಾರ್ ಸುರಾನಾ, ಜಿ.ವಿ ರಾಜೇಶ್ ಅವರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಜೆಡಿಎಸ್‌: ಹೆಚ್.ಡಿ ಕುಮಾರಸ್ವಾಮಿ, ಜಿ.ಟಿ ದೇವೇಗೌಡ, ಬಂಡೆಪ್ಪ ಖಾಶೆಂಪುರ್, ವೆಂಕಟರಾವ್ ನಾಡಗೌಡ, ಪುಟ್ಟರಾಜು, ಸಾ.ರಾ ಮಹೇಶ್, ಹೆಚ್.ಕೆ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಇಂದಿನ ಅಮಿತ್ ಶಾ ಸಭೆಯಲ್ಲಿರಲಿದ್ದಾರೆ.

ಇದನ್ನೂ ಓದಿ: ಕೆಪಿಸಿಸಿಗೆ ಮೇಜರ್ ಸರ್ಜರಿ: ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ಸೇರಿ ನೂತನ ಪದಾಧಿಕಾರಿಗಳ ನೇಮಕ - KPCC

ಚನ್ನಪಟ್ಟಣದಲ್ಲಿ ರೊಡ್ ಶೋ: ಬೊಂಬೆನಗರಿ ಚನ್ನಪಟ್ಟಣದಲ್ಲಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ ಮಾಡಲಿದ್ದಾರೆ. ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ‌ ಇದೇ ಪ್ರಥಮ ಬಾರಿಗೆ ಚನ್ನಪಟ್ಟಣಕ್ಕೆ ಚುನಾವಣಾ ಚಾಣಿಕ್ಯ ಅಮಿತ್ ಶಾ ಆಗಮಿಸುತ್ತಿದ್ದಾರೆ. ನಗರದ ಹಳೆಯ ಬೆಂಗಳೂರು ಮೈಸೂರು ಹೆದ್ದಾರಿಯ ಸ್ಪನ್​ ಸಿಲ್ಕ್​ಮಿಲ್​ನಿಂದ ಆರಂಭವಾಗಲಿರುವ ರೋಡ್ ಶೋನಲ್ಲಿ ಮಂಡ್ಯ ಕ್ಷೇತ್ರದ ಎನ್​ಡಿಎ ಅಭ್ಯರ್ಥಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಡಾ. ಸಿ.ಎನ್ ಮಂಜುನಾಥ್ ಪರ ಮತಯಾಚನೆ ಮಾಡಲಿದ್ದಾರೆ.

ಈ ಕುರಿತು ಮಾತನಾಡಿದ ಮಾಜಿ ಸಚಿವ ಸಿ ಪಿ ಯೋಗೀಶ್ವರ್, ಇಂದು ಸಂಜೆ ಚನ್ನಪಟ್ಟಣದಲ್ಲಿ ಪಕ್ಷದ ಕಾರ್ಯಕ್ರಮ ನಡೆಯಲಿದ್ದು, ಇದರಲ್ಲಿ ಅಮಿತ್ ಶಾ ಭಾಗಿಯಾಗಲಿದ್ದಾರೆ. ಎರಡೂ ಪಕ್ಷಗಳ ಮುಖಂಡರು ಅಭಿಮಾನಿಗಳು, ಹಿತೈಷಿಗಳು ಬೆಂಬಲಿಗರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಲಿದ್ದಾರೆ ಎಂದು ಹೇಳಿದ್ದಾರೆ.

ಸದ್ಯ ಬೆಂಗಳೂರು ಗ್ರಾಮಾಂತರದಲ್ಲಿ ಡಾ.ಮಂಜುನಾಥ್ ಪರ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದು, ಈ ಬಾರಿಯ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತಾರೆ ಎಂಬ ವಿಶ್ವಾಸವನ್ನು ಸಿಪಿವೈ ವ್ಯಕ್ತಪಡಿಸಿದರು. ಇಂದು ನಡೆಯಲಿರುವ ರೋಡ್ ಶೋನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್. ಅಶೋಕ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆಂದು ಎಂದು ತಿಳಿಸಿದರು.

ಇದನ್ನೂ ಓದಿ: ಅಮಿತ್ ಶಾ ವಿರುದ್ಧ ಗೂಂಡಾ, ರೌಡಿ ಹೇಳಿಕೆ: ಯತೀಂದ್ರಗೆ ನೋಟಿಸ್ ಜಾರಿ - Notice to Yatindra

Last Updated : Apr 2, 2024, 9:53 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.