ETV Bharat / state

2024ರ ರೌಂಡ್ ಅಪ್: ರಾಜ್ಯ ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆಗಳು, ಮೇಲಾಟಗಳ ಮೆಲುಕು - YEAR ENDER 2024

2024ರಲ್ಲಿ ಲೋಕಸಭೆ ಚುನಾವಣೆ, ನಂತರ ನಡೆದ ಉಪ ಚುನಾವಣೆಗಳಿಂದಾಗಿ ಕರ್ನಾಟಕ ಸಾಕಷ್ಟು ಅಚ್ಚರಿ, ಮೇಲಾಟಗಳನ್ನು ಕಂಡಿದೆ. 2023 ಇನ್ನೇನು ಕೆಲವೇ ದಿನಗಳಲ್ಲಿ ಕೊನೆಗೊಳ್ಳಲಿದ್ದು, ವರ್ಷದ ಮಹತ್ವದ ರಾಜಕೀಯ ಬೆಳವಣಿಗೆಗಳ ಮೇಲೊಂದು ಕ್ವಿಕ್‌ ರೌಂಡ್‌ ಅಪ್‌.

YEAR END 2024
2024ರ ರೌಂಡ್ ಅಪ್ (ETV Bharat)
author img

By ETV Bharat Karnataka Team

Published : Dec 23, 2024, 3:53 PM IST

ಬೆಂಗಳೂರು: 2024 ಮುಗಿದು ಇನ್ನೇನು 2025ರ ಹೊಸ ವರ್ಷದ ಹೊಸ್ತಿಲಲ್ಲಿದ್ದೇವೆ. ಈ ವರ್ಷ ಲೋಕಸಭೆ ಚುನಾವಣೆ, ಪಕ್ಷಾಂತರಗಳು, ಮೈತ್ರಿ ರಾಜಕೀಯ, ಉಪ ಚುನಾವಣೆಯ ಫಲಿತಾಂಶ, ಬಣ ಬಡಿದಾಟ, ಬಂಡಾಯ ಹೀಗೆ ಹಲವು ವಿದ್ಯಮಾನಗಳಿಗೆ ರಾಜ್ಯ ಸಾಕ್ಷಿಯಾಗಿದೆ. ಅವುಗಳನ್ನು ಸಂಕ್ಷಿಪ್ತವಾಗಿ ನೋಡೋಣ.

ಲೋಕಸಭೆ ಚುನಾವಣೆ: ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿದ್ದ ಆಡಳಿತಾರೂಢ ಕಾಂಗ್ರೆಸ್, ವರ್ಷದ ಬಳಿಕ ನಡೆದ ಲೋಕಸಭೆ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿತು. ಬಿಜೆಪಿ 17 ಕ್ಷೇತ್ರಗಳಲ್ಲಿ ಗೆದ್ದರೆ ಜೆಡಿಎಸ್ 2, ಕಾಂಗ್ರೆಸ್ 9 ಕ್ಷೇತ್ರಗಳಲ್ಲಿ ಗೆಲುವು ಕಂಡಿತು.‌ ಕಳೆದ ಲೋಕಸಭೆ ಚುನಾವಣೆಗೆ ಹೋಲಿಸಿದರೆ ಕಾಂಗ್ರೆಸ್ ತನ್ನ ಗೆಲುವಿನ ಸಂಖ್ಯೆ ಹೆಚ್ಚಿಸಿಕೊಂಡಿದೆ. ಆದರೆ, ವಿಧಾನಸಭೆ ಚುನಾವಣೆಯ ಯಶಸ್ಸನ್ನು ಪುನಾರಾವರ್ತಿಸಲು ಸಾಧ್ಯವಾಗಲಿಲ್ಲ. ಬೆಂಗಳೂರು ಗ್ರಾಮಾಂತರ ಕ್ಷೇತ್ರ ಕುತೂಹಲ ಕೆರಳಿಸಿತ್ತು. ಡಿಸಿಎಂ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಸೋಲುವ ಮೂಲಕ ಅಚ್ಚರಿಯ ಫಲಿತಾಂಶ ಹೊರಬಂದಿತ್ತು. ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಡಿ.ಕೆ.ಸುರೇಶ್ ಅವರನ್ನು ಸೋಲಿಸಿ ಕಾಂಗ್ರೆಸ್​ಗೆ ದೊಡ್ಡ ಶಾಕ್ ಕೊಟ್ಟರು. ಮತ್ತೊಂದು ಹೈ ಪ್ರೊಫೈಲ್ ಕ್ಷೇತ್ರ ಮಂಡ್ಯದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಗೆದ್ದರು.

YEAR END 2024
ಡಾ.ಸಿ.ಎನ್.ಮಂಜುನಾಥ್ (ETV Bharat)

ಬಿಜೆಪಿ-ಜೆಡಿಎಸ್ ಮೈತ್ರಿ ರಾಜಕೀಯ: ಲೋಕಸಭೆ ಚುನಾವಣೆಗೆ ಮುನ್ನ ನಡೆದ ಬಿಜೆಪಿ-ಜೆಡಿಎಸ್ ಮೈತ್ರಿ ರಾಜ್ಯ ರಾಜಕೀಯದ ದೊಡ್ಡ ವಿದ್ಯಮಾನ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ಅಖಾಡಕ್ಕಿಳಿದಿದ್ದವು.‌ ಆ ಮೂಲಕ ರಾಜ್ಯದಲ್ಲಿನ ಆಡಳಿತಾರೂಢ ಕಾಂಗ್ರೆಸ್​ಗೆ ಪ್ರಬಲ ಪೈಪೋಟಿ ನೀಡಿತು. 2019ರ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದರೆ, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿತು. ದೀರ್ಘಕಾಲದ ಮೈತ್ರಿಯ ಉದ್ದೇಶದೊಂದಿಗೆ ಜೆಡಿಎಸ್ ಹಾಗೂ ಬಿಜೆಪಿ ರಾಜ್ಯದಲ್ಲಿ ದೋಸ್ತಿ ಮಾಡಿಕೊಂಡಿದೆ. ಈ ಮೈತ್ರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್​ಗೆ ಉತ್ತಮ ಫಲಿತಾಂಶ ನೀಡಿತು. ಗ್ಯಾರಂಟಿಗಳ ಜನಪ್ರಿಯತೆ ಮಧ್ಯೆ ಆಡಳಿತಾರೂಢ ಕಾಂಗ್ರೆಸ್ ಅನ್ನು ರಾಜ್ಯದಲ್ಲಿ ಒಂದಂಕಿಗೆ ಕಟ್ಟಿಹಾಕುವಲ್ಲಿ ಮೈತ್ರಿ ಯಶಕಂಡಿತು.

ಪಕ್ಷಾಂತರ ರಾಜಕೀಯ: 2023ರ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದ ಸಿಟ್ಟಿನಲ್ಲಿ ಕಾಂಗ್ರೆಸ್ ಸೇರಿದ್ದ ಜಗದೀಶ್ ಶೆಟ್ಟರ್, 2024ರಲ್ಲಿ ಮತ್ತೆ ಮಾತೃಪಕ್ಷ ಬಿಜೆಪಿಗೆ ಮರಳಿ, ಬೆಳಗಾವಿ ಲೋಕಸಭೆ ಕ್ಷೇತ್ರದಿಂದ ಗೆದ್ದರು. ಇತ್ತ ತುಮಕೂರು ಕ್ಷೇತ್ರದಿಂದ ಟಿಕೆಟ್ ಕೈ ತಪ್ಪಿದ್ದರಿಂದ ಮುದ್ದಹನುಮೇಗೌಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಆದರೆ, ಚುನಾವಣೆಯಲ್ಲಿ ಕ್ಷೇತ್ರದ ಜನರು ಅವರ ಕೈ ಹಿಡಿಯಲಿಲ್ಲ.‌ ಕೊಪ್ಪಳದ ಮಾಜಿ ಸಂಸದ ಕರಡಿ ಸಂಗಣ್ಣಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಕಾರಣ ಕಾಂಗ್ರೆಸ್ ಸೇರಿದ್ದರು. ಅದೇ ರೀತಿ ಜಯಪ್ರಕಾಶ್ ಹೆಗ್ಡೆ ಟಿಕೆಟ್ ಸಿಗದೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕೈ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.‌ ಇತ್ತೀಚೆಗೆ ಸಿ.ಪಿ.ಯೋಗೇಶ್ಚರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವುದು ಅಚ್ಚರಿ ಮೂಡಿಸಿತು. ಚನ್ನಪಟ್ಟಣ ಉಪಸಮರದಲ್ಲಿ ಬಿಜೆಪಿ ಟಿಕೆಟ್ ಸಿಗದ ಕಾರಣ ಅನ್ಯಮಾರ್ಗವಿಲ್ಲದೆ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರಿದ್ದು ರಾಜಕೀಯ ಪಡಸಾಲೆಯಲ್ಲಿ ಅಚ್ಚರಿ ಮೂಡಿಸಿತು.

YEAR END 2024
ಕೆ.ಎಸ್.ಈಶ್ವರಪ್ಪ (ETV Bharat)

ಕೆ.ಎಸ್.ಈಶ್ವರಪ್ಪ ಬಂಡಾಯ, ಉಚ್ಛಾಟನೆ: ಕೆ.ಎಸ್.ಈಶ್ವರಪ್ಪ ಬಿಜೆಪಿ ಹಿರಿಯ ನಾಯಕ. ತಮ್ಮ ಮಗನಿಗೆ ಲೋಕಸಮರದಲ್ಲಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಂಡಾಯದ ಬಾವುಟ ಹಾರಿಸಿದ್ದರು. ಶಿವಮೊಗ್ಗ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವುದು ಅಚ್ಚರಿಯ ಬೆಳವಣಿಗೆಯಾಗಿತ್ತು.‌ ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿರುದ್ಧ ಕಣಕ್ಕಿಳಿದ ಕೆ.ಎಸ್.ಈಶ್ವರಪ್ಪ ಚುನಾವಣೆಯಲ್ಲಿ ಹೀನಾಯ ಸೋಲು ಕಾಣಬೇಕಾಯಿತು. ಬಂಡಾಯದ ಬಾವುಟ ಹಾರಿಸಿದ ಕಾರಣ ಈಶ್ವರಪ್ಪರನ್ನು ಬಿಜೆಪಿಯಿಂದ ಉಚ್ಛಾಟಿಸಲಾಯಿತು.

YEAR END 2024
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (ETV Bharat)

ಬಣ ರಾಜಕೀಯ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್​ನಲ್ಲಿ ಬಣ ರಾಜಕೀಯದ ಮೇಲಾಟ ಕಂಡುಬಂತು. ಬಿಜೆಪಿಯಲ್ಲಿ ವಿಜಯೇಂದ್ರ ಟೀಂ ಹಾಗೂ ಯತ್ನಾಳ್ ಟೀಂ ಮಧ್ಯೆ ಬಹಿರಂಗ ಬಣ ಗುದ್ದಾಟವಾಯಿತು. ಕುಟುಂಬ ರಾಜಕಾರಣದ ವಿರುದ್ದ ಸೆಟೆದು ನಿಂತ ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಯಡಿಯೂರಪ್ಪ ವಿರುದ್ಧ ತೊಡೆತಟ್ಟಿದರು. ಯತ್ನಾಳ್ ಬಂಡಾಯದ ಟೀಂಗೆ ರಮೇಶ್ ಜಾರಕಿಹೊಳಿ, ಕುಮಾರ ಬಂಗಾರಪ್ಪ, ಹರೀಶ್, ಅರವಿಂದ ಲಿಂಬಾವಳಿ ಸೇರಿಕೊಂಡರು. ಇತ್ತ ವಿಜಯೇಂದ್ರ ಪರ ಮಾಜಿ ಶಾಸಕ ರೇಣುಕಾಚಾರ್ಯ, ಕಟ್ಟಾ ಸುಬ್ರಮಣ್ಯ ನಾಯ್ಡು, ಬಿ.ಸಿ.ಪಾಟೀಲ್ ಸೇರಿದಂತೆ ಕೆಲ ಮುಖಂಡರು ಬೆಂಬಲವಾಗಿ ನಿಂತರು.

YEAR END 2024
(ಬಲದಿಂದ) ಕುಮಾರ್ ಬಂಗಾರಪ್ಪ, ರಮೇಶ್​ ಜಾರಕಿಹೊಳಿ, ಬಸನಗೌಡ ಪಾಟೀಲ್ ಯತ್ನಾಳ್ (ETV Bharat)

ಕಾಂಗ್ರೆಸ್​ನಲ್ಲೂ ಬಣ ರಾಜಕೀಯದ ಮುಸುಕಿನ ಗುದ್ದಾಟ ಜೋರಾಗೇ ಸದ್ದು ಮಾಡಿತು. ನಾಯಕತ್ವ ಬದಲಾವಣೆ ಕೂಗಿನ ಮಧ್ಯೆ ಸಿಎಂ ಸಿದ್ದರಾಮಯ್ಯ ಬಣ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಬಣದ ಮುಸುಕಿನ ಗುದ್ದಾಟ ಮುನ್ನೆಲೆಗೆ ಬಂತು. ಸಚಿವರಾದ ಸತೀಶ್ ಜಾರಕಿಹೊಳಿ, ಜಿ.ಪರಮೇಶ್ವರ್, ಹೆಚ್.ಸಿ.ಮಹದೇವಪ್ಪ ತಂಡಗಳು ಪ್ರತ್ಯೇಕ ಸಭೆಗಳನ್ನು ನಡೆಸಿ ಕಾಂಗ್ರೆಸ್ ಗುಂಪುಗಾರಿಕೆ ಸುದ್ದಿಯಾಯಿತು. ಹೈಕಮಾಂಡ್ ತಪರಾಕಿ ಬಳಿಕ ಸದ್ಯ ಬಣಗಳು ಮೌನಕ್ಕೆ ಶರಣಾಗಿವೆ.

YEAR END 2024
ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ (ETV Bharat)

ಇತ್ತ ಜೆಡಿಎಸ್ ಪಕ್ಷದಲ್ಲೂ ಬಣ ರಾಜಕೀಯ ಜೋರಾಗೇ ಸದ್ದಾಯಿತು. ಜಿ.ಟಿ.ದೇವೇಗೌಡರು ಬಹಿರಂಗವಾಗಿ ಪಕ್ಷದ ನಾಯಕತ್ವದ ಮೇಲೆ ತಮ್ಮ ಅಸಮಾಧಾನ ಹೊರಹಾಕಿದರು.‌ ಪಕ್ಷದ ಪ್ರಮುಖ ತೀರ್ಮಾನಗಳಲ್ಲಿ ತಮ್ಮನ್ನು ಕಡೆಗಣಿಸುತ್ತಿರುವ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದರು.

ಉಪ ಚುನಾವಣೆಯಲ್ಲಿ ಅಚ್ಚರಿ ಫಲಿತಾಂಶ: ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಮೂರೂ ಕ್ಷೇತ್ರಗಳನ್ನು 'ಕೈ' ವಶ ಮಾಡಿಕೊಂಡಿತು. ಬಿಜೆಪಿ-ಜೆಡಿಎಸ್ ಸೋಲುವ ಮೂಲಕ ಮುಖಭಂಗ ಅನುಭವಿಸಿದವು. ವಿಶೇಷವಾಗಿ ಕುತೂಹಲ ಕೆರಳಿಸಿದ್ದ ಚನ್ನಪಟ್ಟಣ ಉಪಸಮರದಲ್ಲಿ ಕೊನೇ ಕ್ಷಣಕ್ಕೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿ ಟಿಕೆಟ್ ಗಿಟ್ಟಿಸಿಕೊಂಡು ಸಿ.ಪಿ.ಯೋಗೇಶ್ವರ್ ಗೆಲುವಿನ ನಗೆ ಬೀರಿದರು. ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಸೋಲು ಕಂಡರು.

ಕುಮಾರಸ್ವಾಮಿ ಹಾಗೂ ಡಿಸಿಎಂ ಡಿಕೆಶಿಯ ಪ್ರತಿಷ್ಠೆಯ ಕಣವಾಗಿದ್ದ ಚನ್ನಪಟ್ಟಣದಲ್ಲಿ ಡಿ.ಕೆ.ಬ್ರದರ್ಸ್ ತಂತ್ರಗಾರಿಕೆ ಫಲ ನೀಡಿತು. ಸಿ.ಪಿ.ಯೋಗೇಶ್ವರ್ ಅವರನ್ನು ಕೊನೇ ಕ್ಷಣದಲ್ಲಿ ಕಾಂಗ್ರೆಸ್ ಸೆಳೆದು ಟಿಕೆಟ್ ನೀಡಿ ಚನ್ನಪಟ್ಟಣವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅಖಾಡ ಶಿಗ್ಗಾಂವಿ ಉಪಸಮರದಲ್ಲಿ ಅವರ ಪುತ್ರ ಭರತ್ ಬೊಮ್ಮಾಯಿಯನ್ನು ಸೋಲಿಸುವ ಮೂಲಕ ಕಾಂಗ್ರೆಸ್ ಅಚ್ಚರಿ ಮೂಡಿಸಿತು.‌ ಸಂಡೂರಿನಲ್ಲೂ ಸಂಸದ ತುಕಾರಾಂ ಪತ್ನಿ ಗೆಲುವು ಸಾಧಿಸುವ ಮೂಲಕ ಮೂರು ಕ್ಷೇತ್ರಗಳ ಉಪಸಮರದಲ್ಲಿ ಕಾಂಗ್ರೆಸ್ ಗೆದ್ದು ಬೀಗಿತು.‌

ಇದನ್ನೂ ಓದಿ: ಪಿತ್ರಾರ್ಜಿತ ಆಸ್ತಿಯಲ್ಲಿ ಮೃತ ಹೆಣ್ಣು ಮಕ್ಕಳಿಗೂ ಸಮಾನ ಪಾಲು: 2024ರಲ್ಲಿ ಹೈಕೋರ್ಟ್​ನ ಪ್ರಮುಖ ತೀರ್ಪುಗಳು - HIGH COURT ORDERS IN 2024

ETV Bharat Logo

Copyright © 2025 Ushodaya Enterprises Pvt. Ltd., All Rights Reserved.