ETV Bharat / state

ಕೋಲಾರ: ಆನಂದ ಮಾರ್ಗ ಆಶ್ರಮದ ಚಿನ್ಮಯಾನಂದ ಸ್ವಾಮೀಜಿ ಬರ್ಬರ ಕೊಲೆ, ಮೂವರ ಬಂಧನ - Chinmayananda Swamiji killed - CHINMAYANANDA SWAMIJI KILLED

ಮಾಲೂರು ತಾಲೂಕಿನ ಸಂತಳ್ಳಿಯಲ್ಲಿರುವ ಆನಂದ ಮಾರ್ಗ ಆಶ್ರಮದಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದ್ದು, ಸ್ವಾಮೀಜಿಯೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಈ ಸಂಬಂಧ ಮಾಲೂರು ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಆನಂದ ಮಾರ್ಗ ಆಶ್ರಮ
ಆನಂದ ಮಾರ್ಗ ಆಶ್ರಮ (ETV Bharat)
author img

By ETV Bharat Karnataka Team

Published : Jun 22, 2024, 9:27 PM IST

ಕೋಲಾರ: ಆನಂದ ಮಾರ್ಗ ಆಶ್ರಮದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಸ್ವಾಮೀಜಿಯೊಬ್ಬರ ಕೊಲೆಯಾಗಿರುವ ಘಟನೆ ಮಾಲೂರು ತಾಲೂಕಿನ ಸಂತಳ್ಳಿಯಲ್ಲಿ ನಡೆದಿದೆ. ಆಚಾರ್ಯ ಚಿನ್ಮಯಾನಂದ ಹತ್ಯೆಯಾದ ಸ್ವಾಮೀಜಿ. ಘಟನೆ ಸಂಬಂಧ ಆಚಾರ್ಯ ಧರ್ಮಪ್ರಾಣಾನಂದ, ಪ್ರಾಣೇಶ್ವರಾನಂದ ಹಾಗೂ ಅರುಣ್ ಕುಮಾರ್‌ ಎಂಬ ಮೂವರು ಆರೋಪಿಗಳನ್ನು ಮಾಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಇಂದು ಬೆಳಗ್ಗೆ ಮಾಲೂರಿನ ಸಂತಳ್ಳಿ ಗೇಟ್​ ಬಳಿಯ ಆಶ್ರಮದಲ್ಲಿ ಸ್ನಾನ ಮಾಡುತ್ತಿದ್ದ ಚಿನ್ಮಯಾನಂದ ಸ್ವಾಮೀಜಿ ಅವರನ್ನು ಹೊರಗೆ ಎಳೆದುಕೊಂಡು ಬಂದ ಆರೋಪಿಗಳು ದೊಣ್ಣೆಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಸ್ವಾಮೀಜಿಯನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಸ್ವಾಮೀಜಿ ಮೃತಪಟ್ಟಿದ್ದಾರೆ. ಆಶ್ರಮ ಹಾಗೂ ಆಸ್ಪತ್ರೆಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಾರಾಯಣ ಭೇಟಿ ನೀಡಿ ಪರಿಶೀಲಿಸಿದರು.

ಆಶ್ರಮಕ್ಕೆ ಸೇರಿದ ಪಾಲಿಟೆಕ್ನಿಕಲ್‌ ಕಾಲೇಜು ಸಂಬಂಧ ಚಿನ್ಮಯಾನಂದ ಮತ್ತು ಧರ್ಮಪ್ರಾಣಾನಂದ, ಪ್ರಾಣೇಶ್ವರಾನಂದ, ಅರುಣ್ ಕುಮಾರ್‌ ಗುಂಪುಗಳ ನಡುವೆ ಹಲವು ವರ್ಷಗಳಿಂದ ನ್ಯಾಯಾಲಯದಲ್ಲಿ ವ್ಯಾಜ್ಯ ನಡೆಯುತ್ತಿದೆ. ಇದೇ ವಿಚಾರವಾಗಿ ಹಿಂದೆಯೂ ಎರಡು ಗುಂಪುಗಳ ನಡುವೆ ಹಲವು ಬಾರಿ ಗಲಾಟೆ ನಡೆದಿತ್ತು. ಈ ಸಂಬಂಧ ಪೊಲೀಸ್​ ಠಾಣೆಯಲ್ಲಿ 30ಕ್ಕೂ ಹೆಚ್ಚು ಪ್ರಕರಣಗಳು ಸಹ ದಾಖಲಾಗಿವೆ.

ಇದನ್ನೂ ಓದಿ: ಶಿವಮೊಗ್ಗ: ಕೌಟುಂಬಿಕ ಕಲಹ, ತಂದೆಯನ್ನೇ ಭೀಕರವಾಗಿ ಕೊಂದ ಅಪ್ರಾಪ್ತ ಮಗ - SON KILLS FATHER

ETV Bharat Logo

Copyright © 2024 Ushodaya Enterprises Pvt. Ltd., All Rights Reserved.