ETV Bharat / state

ಹೆಚ್​ಡಿಕೆ ಭೇಟಿಯಾದ ಆಂಧ್ರ ಸಚಿವ ನಾ.ರಾ.ಲೋಕೇಶ್; ಪುನಶ್ಚೇತನ ಪ್ಯಾಕೇಜ್ ಬಗ್ಗೆ ಚರ್ಚೆ - NARA LOKESH MEETS HDK

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾದ ಆಂಧ್ರ ಪ್ರದೇಶದ ಐಟಿ ಸಚಿವ ನಾ.ರಾ.ಲೋಕೇಶ್ ಅವರು ಪುನಶ್ಚೇತನ ಪ್ಯಾಕೇಜ್ ಬಗ್ಗೆ ಚರ್ಚೆ ನಡೆಸಿದರು.

NARA LOKESH MEETS HDK
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾದ ಆಂಧ್ರ ಪ್ರದೇಶದ ಐಟಿ ಸಚಿವ ನಾ.ರಾ.ಲೋಕೇಶ್ (ETV Bharat)
author img

By ETV Bharat Karnataka Team

Published : Feb 5, 2025, 10:45 PM IST

ಬೆಂಗಳೂರು/ನವದೆಹಲಿ: ಕೇಂದ್ರ ಸರ್ಕಾರ ವಿಶಾಖಪಟ್ಟಣಕ್ಕೆ ರಾಷ್ಟ್ರೀಯ ಉಕ್ಕು ಕಾರ್ಖಾನೆ ಅಥವಾ ವೈಜಾಗ್ ಸ್ಟೀಲ್ (RINl) ಪುನಶ್ಚೇತನ ಪ್ಯಾಕೇಜ್ ಘೋಷಿಸಿದ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶದ ಐಟಿ ಸಚಿವ ನಾ.ರಾ.ಲೋಕೇಶ್ ಅವರು, ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು.

ನವದೆಹಲಿಯಲ್ಲಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸದಲ್ಲಿ ಸಚಿವ ಕುಮಾರಸ್ವಾಮಿ ಅವರನ್ನು ಭೇಟಿಯಾದ ನಾ.ರಾ.ಲೋಕೇಶ್ ಅವರು ವೈಜಾಗ್ ಸ್ಟೀಲ್ ಪುನಶ್ಚೇತನ ಪ್ಯಾಕೇಜ್ ಘೋಷಿಸಿದ ಹಿನ್ನೆಲೆಯಲ್ಲಿ ವಿಶೇಷವಾಗಿ ಕೃತಜ್ಞತೆ ಸಲ್ಲಿಸಿದರು.

Andhra Pradesh IT Minister Nara Lokesh meets Union Minister H.D. Kumaraswamy
ಆಂಧ್ರ ಪ್ರದೇಶದ ಐಟಿ ಸಚಿವ ನಾ.ರಾ.ಲೋಕೇಶ್ ಅವರನ್ನು ಸನ್ಮಾನಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (ETV Bharat)

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಖಾತೆ ಸಚಿವರನ್ನು ಭೇಟಿಯಾದ ಲೋಕೇಶ್ ಅವರು, ಬಹುಮುಖ್ಯವಾಗಿ ವೈಜಾಗ್ ಸ್ಟೀಲ್ ಪುನಶ್ಚೇತನ ಯೋಜನೆ ಹಾಗೂ ಭವಿಷ್ಯದಲ್ಲಿ ಕಾರ್ಖಾನೆಯನ್ನು ಯಾವ ರೀತಿಯಲ್ಲಿ ಅಭಿವೃದ್ಧಿ ಪಥದಲ್ಲಿ ನಡೆಸಬೇಕು ಎಂಬ ಬಗ್ಗೆ ಸವಿಸ್ತಾರವಾಗಿ ಸಮಾಲೋಚನೆ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಮಾಡುವ ಗುರಿ ನಿಗದಿ ಮಾಡಿದ್ದು, ಅದರಂತೆ ನಾವು ಉಕ್ಕು ಕ್ಷೇತ್ರದಲ್ಲಿ ಸಂಪೂರ್ಣ ಸ್ವಾವಲಂಬನೆ ಸಾಧಿಸಬೇಕಿದೆ. ಅದರಲ್ಲಿಯೂ ಪರಿಸರ ಪೂರಕವಾದ ಗ್ರೀನ್ ಸ್ಟೀಲ್, ಸ್ಪೆಶಾಲಿಟಿ ಸ್ಟೀಲ್ ತಯಾರಿಕೆಯಲ್ಲಿ ಭಾರತ ಮುಂಚೂಣಿಗೆ ಬರಬೇಕಿದೆ. ಈ ನಿಟ್ಟಿನಲ್ಲಿ ವೈಜಾಗ್ ಸ್ಟೀಲ್​ಗೆ ಶಕ್ತಿ ತುಂಬಲು ಕೇಂದ್ರ ಸರ್ಕಾರ ನಿರ್ಧರಿಸಿತು ಎಂದು ಲೋಕೇಶ್ ಅವರಿಗೆ ಸಚಿವರು ಹೇಳಿದರು.

ಪ್ಯಾಕೇಜ್ ಪರಿಣಾಮಕಾರಿ ಬಳಕೆ ಹಾಗೂ ನಿಗದಿತ ಗುರಿಯಂತೆ ಕಾರ್ಖಾನೆಯ ಮೂರು ಬ್ಲಾಸ್ಟ್ ಫರ್ ನೆಸ್ (ಊದು ಕುಲುಮೆ)ಗಳ ಮೂಲಕ ವಾರ್ಷಿಕ 7.3 ದಶಲಕ್ಷ ಟನ್ ಉಕ್ಕು ತಯಾರು ಮಾಡುವುದು ಕೇಂದ್ರದ ಗುರಿಯಾಗಿದೆ. ಈ ಗುರಿ ಸಾಧನೆಗೆ ಆಂಧ್ರ ಪ್ರದೇಶದ ಸರ್ಕಾರ ಹಾಗೂ ಕಾರ್ಮಿಕರ ಸಹಕಾರ ಅತ್ಯಗತ್ಯವಾಗಿ ಬೇಕಿದೆ ಎಂದರು.

ಈ ನಿಟ್ಟಿನಲ್ಲಿ ಆಂಧ್ರ ಪ್ರದೇಶ ಸರ್ಕಾರದ ವತಿಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಲೋಕೇಶ್ ಅವರು ಕೇಂದ್ರ ಸಚಿವರಿಗೆ ಭರವಸೆ ನೀಡಿದರು.

ಸಮಾಲೋಚನೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಆಂಧ್ರ ಪ್ರದೇಶದ ಐಟಿ ಸಚಿವ ನಾ.ರಾ.ಲೋಕೇಶ್ ಮತ್ತು ಅವರ ತಂಡ. (ETV Bharat)

ಕಾರ್ಖಾನೆಯ ಪುನಶ್ಚೇತನ ವಿಷಯದಲ್ಲಿ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ತೋರಿದ ಬದ್ಧತೆಯ ಶ್ಲಾಘಿಸಿದ ಕೇಂದ್ರ ಸಚಿವರು, ತಮ್ಮ ಸಚಿವಾಲಯಗಳ ವತಿಯಿಂದ ಆಂಧ್ರ ಪ್ರದೇಶದ ಅಭಿವೃದ್ಧಿಗೆ ಅಗತ್ಯ ಇರುವ ಎಲ್ಲ ಸಹಕಾರ ನೀಡುವುದಾಗಿ ಲೋಕೇಶ್ ಅವರಿಗೆ ಹೇಳಿದರು.

ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸಚಿವರು ಹಾಗೂ ಲೋಕೇಶ್ ಅವರು ಸಮಾಲೋಚನೆ ನಡೆಸಿದರು. ಲೋಕೇಶ್, ರಾಮ್ ಮೋಹನ್ ನಾಯ್ಡು ಸೇರಿದಂತೆ ಎಲ್ಲ ಸಂಸದರನ್ನು ಮಾಜಿ ಪ್ರಧಾನಿಗಳು ಹಾಗೂ ಸಚಿವರು ಆತ್ಮೀಯವಾಗಿ ಸತ್ಕರಿಸಿದರು.

ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸಂಸದ ಡಾ.ಸಿ.ಎನ್.ಮಂಜುನಾಥ್, ಕೋಲಾರ ಸಂಸದ ಮಲ್ಲೇಶ್ ಬಾಬು ಮುಂತಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ: ಸಿಇಸಿ ಆದೇಶ ಪಾಲಿಸಿ ಎನ್ನುವುದು ರಾಜಕೀಯ ದ್ವೇಷವೇ: ಹೆಚ್​ಡಿಕೆಗೆ ಸಚಿವ ಈಶ್ವರ್ ಖಂಡ್ರೆ ಪ್ರಶ್ನೆ - KIOCL ISSUE

ETV Bharat Logo

Copyright © 2025 Ushodaya Enterprises Pvt. Ltd., All Rights Reserved.