ETV Bharat / state

ಅಂಜಲಿ ಕೊಲೆ ಪ್ರಕರಣ: ಮತ್ತೊಬ್ಬ ಅಧಿಕಾರಿ ತಲೆದಂಡ, ಎಸಿಪಿ ಅಮಾನತು - ACP Suspended - ACP SUSPENDED

ಅಂಜಲಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಪಿ ಅವರನ್ನು ಅಮಾನತು ಮಾಡಿ ಆದೇಶಿಸಲಾಗಿದೆ. ಇಲ್ಲಿಯವರೆಗೆ ಎಸಿಪಿ ಸೇರಿದಂತೆ ನಾಲ್ವರು ಪೊಲೀಸ್ ಅಧಿಕಾರಿಗಳ ತಲೆದಂಡ‌ವಾಗಿದೆ.

POLICE OFFICERS SUSPENDED
ಸಾಂದರ್ಭಿಕ ಚಿತ್ರ (ಕೃಪೆ: ETV Bharat)
author img

By ETV Bharat Karnataka Team

Published : May 21, 2024, 9:44 AM IST

ಹುಬ್ಬಳ್ಳಿ: ಅಂಜಲಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಕಾರಣ ಇಟ್ಟುಕೊಂಡು ಇಲ್ಲಿಯವರೆಗೆ ನಾಲ್ಕು ಜನರನ್ನು ಅಮಾನತು ಮಾಡಿದ್ದು, ಮತ್ಯಾರು ಸಸ್ಪೆಂಡ್ ಆಗ್ತಾರೆ ಎಂದು ಪೊಲೀಸ್​ ಅಧಿಕಾರಿಗಳು ನಿದ್ದೆಗೆಟ್ಟು ಕಾಯುವಂತಾಗಿದೆ. ಅಂಜಲಿ ಕೊಲೆ ಆದ ನಂತರ ಬೆಂಡಿಗೇರಿ ಪೊಲೀಸ್​ ಠಾಣೆಯ ಇನಸ್ಪೆಕ್ಟ‌ರ್ ಸಿ.ಬಿ. ಚಿಕ್ಕೋಡಿ, ಮಹಿಳಾ ಹೆಡ್ ಕಾನ್ಸ್‌ಟೇಬಲ್ ರೇಖಾ ಅವರನ್ನು ಕಮೀಷನರ್ ರೇಣುಕಾ ಸುಕುಮಾರ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದರು.

ಮೊನ್ನೆ ಕಾನೂನು ಸುವ್ಯವಸ್ಥೆ ಡಿಸಿಪಿ ಪಿ. ರಾಜೀವ್ ಅವರನ್ನು ಅಮಾನತು ಮಾಡಿ ಸರ್ಕಾರ ಆದೇಶ ಮಾಡಿತ್ತು. ಇಂದು ದಕ್ಷಿಣ ಉಪವಿಭಾಗ ಎಸಿಪಿ ವಿಜಯಕುಮಾರ ತಳವಾರ ಅವರನ್ನು ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇನ್ನೂ ಮೂರ್ನಾಲ್ಕು ಪೊಲೀಸರನ್ನು ಸಸ್ಪೆಂಡ್ ಮಾಡಲು ಕಮೀಷನ‌ರ್ ರೇಣುಕಾ ಮೇಡಂ ಲಿಸ್ಟ್ ರೆಡಿ ಮಾಡಿದ್ದಾರಂತೆ. ಇಂತಹ ಒಂದು ಪ್ರಕರಣದಲ್ಲಿ ಇಷ್ಟೊಂದು ದೊಡ್ಡ ಮಟ್ಟದ ಅಧಿಕಾರಿಗಳನ್ನ ಹಾಗೂ ಸಿಬ್ಬಂದಿಯರನ್ನು ಅಮಾನತು ಮಾಡಿರುವುದು ರಾಜ್ಯದಲ್ಲಿಯೇ ಮೊದಲ ಪ್ರಕರಣ ಎನ್ನಲಾಗಿದೆ.

ANJALI MURDER CASE  FOUR POLICE OFFICERS  OFFICERS SUSPENDED  DHARWAD  ANJALI MURDER CASE  FOUR POLICE OFFICERS  OFFICERS SUSPENDED  DHARWAD
ಅಮಾನತು ಆದೇಶ ಪ್ರತಿ (ಕೃಪೆ: ETV Bharat Karnataka)

ಸಂಪೂರ್ಣ ವಿವರ: ಪ್ರೀತಿ ನಿರಾಕರಿಸಿದ್ದಕ್ಕೆ ಕೋಪಗೊಂಡ ಯುವಕ ಯುವತಿಯ ಮನೆಗೆ ನುಗ್ಗಿ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ನಗರದಲ್ಲಿ ಮೇ 15ರಂದು ನಡೆದಿತ್ತು. ಹುಬ್ಬಳ್ಳಿಯ ವೀರಾಪುರ ಗುಡಿಓಣಿ ನಿವಾಸಿ ಅಂಜಲಿ ಅಂಬಿಗೇರ (20) ಹತ್ಯೆಯಾದ ಯುವತಿ. ವಿಶ್ವ ಅಲಿಯಾಸ್ ಗಿರೀಶ್ ಸಾವಂತ (21) ಕೊಲೆ ಆರೋಪಿ.

ANJALI MURDER CASE  FOUR POLICE OFFICERS  OFFICERS SUSPENDED  DHARWAD

ಕೊಲೆ ಮಾಡಿ ಆರೋಪಿ ಪರಾರಿ: ಆರೋಪಿ ವಿಶ್ವ ಕಳೆದ ಹಲವು ದಿನಗಳಿಂದ ಅಂಜಲಿಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ. ಆದರೆ ,ಆಕೆ ಪ್ರೀತಿ ನಿರಾಕರಿಸಿದ್ದಾಳೆ. ಬುಧವಾರ ಬೆಳಗ್ಗೆ ಗುಡಿಓಣಿಯಲ್ಲಿನ ಮನೆಯಲ್ಲಿ ಯುವತಿಯು ಮಲಗಿದ್ದ ವೇಳೆಯಲ್ಲೇ ವಿಶ್ವ ತೆರಳಿದ್ದ. ಬಳಿಕ ಮನೆಯವರೊಂದಿಗೆ ಜಗಳವಾಡಿ ಯುವತಿಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದನು ಎಂದು ಪೊಲೀಸರು ತಿಳಿಸಿದ್ದರು.

ಟ್ರೈನ್​ನಿಂದ ಜಿಗಿದಿದ್ದ ಆರೋಪಿ: ಅಂಜಲಿ ಕೊಲೆ ಮಾಡಿದ ಆರೋಪಿಯನ್ನು ಮೇ 16ರ ಗುರುವಾರ ತಡರಾತ್ರಿ ದಾವಣಗೆರೆಯಲ್ಲಿ ಹುಬ್ಬಳ್ಳಿ-ಧಾರವಾಡ ಅವಳಿ ನಗರ ಪೊಲೀಸರು ಬಂಧಿಸಿದ್ದರು. ಬುಧವಾರ ಮುಂಜಾನೆ ಅಂಜಲಿ ಮನೆಗೆ ನುಗ್ಗಿದ ಆರೋಪಿ ಚಾಕುವಿನಿಂದ ಎದೆ, ಹೊಟ್ಟೆ ಹಾಗೂ ಕುತ್ತಿಗೆ ಇರಿದು ಪರಾರಿಯಾಗಿದ್ದ. ಅಂಜಲಿ ಕೊಲೆಗೈದ ಬಳಿಕ ಆರೋಪಿ ಗಿರೀಶ್ ಹುಬ್ಬಳ್ಳಿಯಿಂದ ರೈಲಿನಲ್ಲಿ ಹೊರಟಿದ್ದನು. ಇದೇ ರೈಲಿನಲ್ಲಿ ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಹಲ್ಲೆಗೆ ಮುಂದಾಗಿದ್ದ. ಈ ವೇಳೆ ಆತನನ್ನು ಹಿಡಿದ ಸಾರ್ವಜನಿಕರು ಥಳಿಸಲು ಮುಂದಾದರು. ಇದರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ದಾವಣಗೆರೆ ತಾಲೂಕಿನ ಮಾಯಕೊಂಡ ಸಮೀಪ ಚಲಿಸುತ್ತಿದ್ದ ರೈಲಿನಿಂದ ಜಿಗಿದಿದ್ದಾನೆ.

ಕೊಲೆ ಆರೋಪಿ ಬಂಧನ: ಇದರ ಪರಿಣಾಮ, ತಲೆ ಹಾಗೂ ಮುಖಕ್ಕೆ ಗಂಭೀರ ಸ್ವರೂಪದ ಗಾಯಗಳಾಗಿದ್ದವು. ಯುವಕನನ್ನು ಗಮನಿಸಿದ ಸ್ಥಳೀಯರು ತಕ್ಷಣ ಆಂಬ್ಯುಲೆನ್ಸ್​ ಮೂಲಕ ದಾವಣಗೆರೆ ಚಿಗಟೇರಿ ಜಿಲ್ಲಾಸ್ಪತ್ರೆಗೆ ಕರೆತಂದು ದಾಖಲಿಸಿದ್ದರು. ಈ ವಿಚಾರ ದಾವಣಗೆರೆ ರೈಲ್ವೆ ಪೊಲೀಸರಿಗೆ ಗೊತ್ತಾಗಿದೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನು ವಿಚಾರಿಸಿದ್ದಾರೆ. ಈ ಸಂದರ್ಭದಲ್ಲಿ ಆತ ಕೊಟ್ಟ ಮಾಹಿತಿಯಿಂದ ಪೊಲೀಸರಿಗೆ ಅನುಮಾನ ಮೂಡಿದೆ. ಬಳಿಕ ಮತ್ತಷ್ಟು ವಿಚಾರಣೆ ನಡೆಸಿದ್ದು, ಆರೋಪಿ ಸತ್ಯ ಬಾಯಿಬಿಟ್ಟಿದ್ದಾನೆ. ಪೊಲೀಸರಿಗೆ ಈತನೇ ಅಂಜಲಿಯನ್ನು ಹತ್ಯೆ ಮಾಡಿದ ಆರೋಪಿ ಎಂದು ಗೊತ್ತಾಗಿದೆ. ಕೂಡಲೇ ಆತನನ್ನು ಪೊಲೀಸರು ಬಂಧಿಸಿ, ಹುಬ್ಬಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಹುಬ್ಬಳ್ಳಿ ಪೊಲೀಸರು ಆರೋಪಿಯನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದರು.

ಎರಡು ಲಕ್ಷ ರೂಪಾಯಿಯ ಚೆಕ್​ ವಿತರಣೆ: ಇಂದು ಸಚಿವ ಸಂತೋಷ್​ ಲಾಡ್​ ಮತ್ತು ಶಾಸಕ ಪ್ರಸಾದ ಅಬ್ಬಯ್ಯ ಅಂಜಲಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಬಳಿಕ ಸಚಿವ ಲಾಡ್​ ತಮ್ಮ ಫೌಂಡೇಶನ್​ ವತಿಯಿಂದ ಸಂತ್ರಸ್ತ ಕುಟುಂಬಕ್ಕೆ ಎರಡು ಲಕ್ಷ ಮೌಲ್ಯದ ಚೆಕ್​ ನೀಡಿದರು. ಆರೋಪಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮೃತಳ ಕುಟುಂಬಕ್ಕೆ ಭರವಸೆ ನೀಡಿದರು.

ಓದಿ: ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ಸಿಐಡಿ ತನಿಖೆಗೆ ವಹಿಸಲಾಗುವುದು: ಗೃಹ ಸಚಿವ ಜಿ.ಪರಮೇಶ್ವರ - Minister G Parmeshwar visited Hubli

ETV Bharat Logo

Copyright © 2024 Ushodaya Enterprises Pvt. Ltd., All Rights Reserved.