ETV Bharat / state

ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣ; ಎಸ್ಐಟಿಯಿಂದ ಮತ್ತೋರ್ವ ಆರೋಪಿ ಅರೆಸ್ಟ್​ - Valmiki Corporation Scam - VALMIKI CORPORATION SCAM

ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಪ್ರಕರಣಕ್ಕೆ ಸಂಬಂಧಿಸಂತೆ ಎಸ್ಐಟಿ ತಂಡ ಮತ್ತೋರ್ವ ಆರೋಪಿಯನ್ನು ಬಂಧಿಸಿದೆ.

Valmiki Development Corporation
ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ (https://kmvstdcl.karnataka.gov.in)
author img

By ETV Bharat Karnataka Team

Published : Jul 16, 2024, 10:41 AM IST

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು, ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಆಂಧ್ರಪ್ರದೇಶ ಮೂಲದ ಶ್ರೀನಿವಾಸ್ ರಾವ್ ಬಂಧಿತ ಆರೋಪಿ.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂ.ಜಿ.ರಸ್ತೆ ಶಾಖೆಯಲ್ಲಿರುವ ನಿಗಮದ ಖಾತೆಯಿಂದ ಹೈದರಾಬಾದ್‌ನ 18 ಬ್ಯಾಂಕ್ ಖಾತೆಗಳಿಗೆ 94 ಕೋಟಿ ರೂ. ಹಣ ವರ್ಗಾವಣೆಯಾಗಿತ್ತು. ಪ್ರಕರಣದಲ್ಲಿ ಈಗಾಗಲೇ ಬಂಧಿತನಾಗಿರುವ ಸತ್ಯನಾರಾಯಣ ವರ್ಮಾ ಆ ಖಾತೆಗಳ ಮೇಲ್ವಿಚಾರಣೆ ವಹಿಸಿಕೊಂಡಿದ್ದ. ಮತ್ತು ಆ ಬ್ಯಾಂಕ್ ಖಾತೆಯಿಂದ ಶ್ರೀನಿವಾಸ್ ರಾವ್ ಹೆಸರಿಗೆ 10 ಕೋಟಿ ರೂ ವರ್ಗಾಯಿಸಿದ್ದ. ಹಣವನ್ನು ವಿತ್ ಡ್ರಾ ಮಾಡಿಕೊಂಡಿದ್ದ ಆರೋಪಿ ಶ್ರೀನಿವಾಸ್ ರಾವ್, ಪ್ರಕರಣ ಬೆಳಕಿಗೆ ಬರುತ್ತಿದಂತೆ ತಲೆಮರೆಸಿಕೊಂಡಿದ್ದ. ಸದ್ಯ ಆತನನ್ನ ಬಂಧಿಸಲಾಗಿದ್ದು, 9 ದಿನಗಳ ಕಾಲ ಕಸ್ಟಡಿಗೆ ಪಡೆದಿರುವ ಎಸ್ಐಟಿ ಅಧಿಕಾರಿಗಳು ಹಣ ಜಪ್ತಿ ಮಾಡುವ ಕಾರ್ಯದಲ್ಲಿ ತೊಡಗಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ವಾಲ್ಮೀಕಿ ನಿಗಮ ಅವ್ಯವಹಾರ ಪ್ರಸ್ತಾಪ: ಪರಿಷತ್​ನಲ್ಲೂ ಆಡಳಿತ, ವಿಪಕ್ಷಗಳ ಮಧ್ಯೆ ಆರೋಪ-ಪ್ರತ್ಯಾರೋಪ - Legislative Council Session

ETV Bharat Logo

Copyright © 2024 Ushodaya Enterprises Pvt. Ltd., All Rights Reserved.