ETV Bharat / state

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾಸ್ ಮಾಡಿಸುವುದಾಗಿ ಹಣ ವಸೂಲಿ: ಮತ್ತೋರ್ವ ಆರೋಪಿ ಬಂಧನ - MONEY CHEATING CASE

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾಸ್ ಮಾಡಿಸುವುದಾಗಿ ಹಣ ಪಡೆದು ಮೋಸ ಮಾಡುತ್ತಿದ್ದ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

MONEY CHEATING CASE
ಸಾಂದರ್ಭಿಕ ಚಿತ್ರ (ETV Bharat)
author img

By ETV Bharat Karnataka Team

Published : Jan 4, 2025, 3:18 PM IST

ಬೆಂಗಳೂರು‌: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾಸ್ ಮಾಡಿಸುವುದಾಗಿ ಅಭ್ಯರ್ಥಿಗಳು ಹಾಗೂ ಅವರ ಕಡೆಯವರಿಂದ ಹಣ ಸಂಗ್ರಹಿಸುತ್ತಿದ್ದ ಮತ್ತೋರ್ವ‌ ಆರೋಪಿಯನ್ನು ನಗರದ ಉಪ್ಪಾರಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸಿಕಂದರ್ ಚೌಧರಿ (44) ಬಂಧಿತ ಆರೋಪಿ. ಗಾಂಧಿನಗರದ ವೈ.ರಾಮಚಂದ್ರ ರಸ್ತೆಯಲ್ಲಿರುವ ಸಜ್ಜನ್ ಲಾಡ್ಜ್‌ನಲ್ಲಿ ತಂಗಿದ್ದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.

ಮಧ್ಯವರ್ತಿಗಳ ಮೂಲಕ ಕೆಎಎಸ್, ಪಿಡಿಒ, ಪಿಎಸ್ಐ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುತ್ತಿರುವ ಪರೀಕ್ಷಾರ್ಥಿಗಳನ್ನು ಸಂಪರ್ಕಿಸುತ್ತಿದ್ದ ಆರೋಪಿ, ಪರೀಕ್ಷೆಯಲ್ಲಿ ಉತ್ತೀರ್ಣಗೊಳಿಸುವುದಾಗಿ ನಂಬಿಸುತ್ತಿದ್ದ. ಜನವರಿ 2ರಂದು ಗಾಂಧಿನಗರದ ಸಜ್ಜನ್ ಲಾಡ್ಜ್‌ನಲ್ಲಿ ರೂಮ್ ಪಡೆದುಕೊಂಡಿದ್ದ.

ಕೆಲ ಅಭ್ಯರ್ಥಿಗಳು ಮತ್ತು ಅವರ ಕಡೆಯವರನ್ನು ಭೇಟಿಯಾಗುತ್ತಿರುವುದರ ಕುರಿತು ಮಾಹಿತಿ ಕಲೆ ಹಾಕಿದ್ದ ಉಪ್ಪಾರಪೇಟೆ ಠಾಣೆ ಪೊಲೀಸರು, ಸ್ಥಳಕ್ಕೆ ತೆರಳಿ ಆರೋಪಿಯನ್ನು ಬಂಧಿಸಿದ್ದಾರೆ. ಜೊತೆಗೆ, ಆತನ ಜೊತೆ ಸಂಪರ್ಕ‌ ಹೊಂದಿದ್ದವರು ಹಾಗೂ ಭೇಟಿಯಾಗಿದ್ದವರ ಕುರಿತು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಹೊಸ ವರ್ಷಾಚರಣೆ ದಿನ ಕಾನ್ಸ್​ಟೇಬಲ್ ಮೇಲೆ ಹಲ್ಲೆ: ವಿದೇಶಿ ಪ್ರಜೆ ಅರೆಸ್ಟ್

ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಅಭ್ಯರ್ಥಿಗಳನ್ನು ಪಾಸ್ ಮಾಡಿಸುವುದಾಗಿ ನಂಬಿಸಿ ಹಣ ಗಳಿಸುತ್ತಿದ್ದ ಗೋವಿಂದರಾಜು ಎಂಬಾತನನ್ನು ಡಿಸೆಂಬರ್ 29 ರಂದು ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದರು. ಆರೋಪಿಯು ಮೆಜೆಸ್ಟಿಕ್‌ನಲ್ಲಿರುವ ಸೌತ್ ವೆಸ್ಟರ್ನ್ ರೈಲ್ವೆಯಲ್ಲಿ ಚೀಫ್ ಟಿಕೆಟ್ ಇನ್ಸ್‌ಪೆಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ. ಅಭ್ಯರ್ಥಿಗಳನ್ನು ಸಂಪರ್ಕಿಸಿ, 'ತನಗೆ ಪರೀಕ್ಷೆಗೆ ಸಂಬಂಧಿಸಿದಂತಹ ಕೆಲ ಅಧಿಕಾರಿಗಳ ಪರಿಚಯವಿದೆ. ಪರೀಕ್ಷೆಯಲ್ಲಿ ಪಾಸ್ ಮಾಡಿಸಿ ಹುದ್ದೆ ಕೊಡಿಸುತ್ತೇನೆ' ನಂಬಿಸಿ ಹಣ ಸಂಗ್ರಹಿಸುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿತ್ತು.

ಇದನ್ನೂ ಓದಿ: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾಸ್ ಮಾಡಿಸಲು ಹಣ ವಸೂಲಿ ಆರೋಪ; ರೈಲ್ವೆ ಇಲಾಖೆಯ ಚೀಫ್ ಟಿಕೆಟ್ ಇನ್ಸ್‌ಪೆಕ್ಟರ್ ಬಂಧನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.