ETV Bharat / state

ಕೊಪ್ಪ ತಾಲೂಕಿನಲ್ಲಿ ಮತ್ತೊಂದು ಮಂಗನ ಕಾಯಿಲೆ ಸೋಂಕು ದೃಢ - ಚಿಕ್ಕಮಗಳೂರು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆ ಸೋಂಕಿನ ಪ್ರಕರಣಗಳ ಸಂಖ್ಯೆ 9ಕ್ಕೇರಿಕೆಯಾಗಿದೆ.

ಚಿಕ್ಕಮಗಳೂರು
ಚಿಕ್ಕಮಗಳೂರು
author img

By ETV Bharat Karnataka Team

Published : Feb 8, 2024, 10:55 PM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ 55 ವರ್ಷದ ಮಹಿಳೆಗೆ ಮಂಗನ ಕಾಯಿಲೆ ಸೋಂಕು ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಪ್ರಕರಣಗಳ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಪ್ರಮುಖವಾಗಿ, ಮಲೆನಾಡು ಭಾಗದಲ್ಲಿ ಈ ಸೋಂಕು ಹೆಚ್ಚಳವಾಗುತ್ತಿದೆ. ಈಗಾಗಲೇ ನಾಲ್ವರು ಗುಣಮುಖರಾಗಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ.

ಶೃಂಗೇರಿ ತಾಲೂಕಿನ ಬೇಗಾನೆಯ ವೃದ್ದರೊಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ಸದ್ಯ ನಾಲ್ಕು ಸಕ್ರಿಯ ಪ್ರಕರಣಗಳಿಗೆ ಕೊಪ್ಪ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಅತಿ ಹೆಚ್ಚು ಪ್ರಕರಣಗಳು ಕೊಪ್ಪ ತಾಲೂಕಿನ ಒಎಲ್‌ವಿ ಎಸ್ಟೇಟ್ ಭಾಗದಲ್ಲಿ ಪತ್ತೆಯಾಗಿದೆ. ಹೀಗಾಗಿ ಆರೋಗ್ಯ ಇಲಾಖೆ ತಾಲೂಕಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಕೆಎಫ್​ಡಿ ವಾರ್ಡ್ ತೆರೆದಿದೆ. ಅರಣ್ಯದಲ್ಲಿ ಕೆಎಫ್​ಡಿ ಸೋಂಕು ಹರಡದಂತೆ ಔಷಧಿ ಸಿಂಪಡಣೆ ಮಾಡಲಾಗುತ್ತಿದೆ. ಆರೋಗ್ಯ ಸಿಬ್ಬಂದಿ ಮನೆ ಮನೆಗೆ ತೆರಳಿ ಔಷಧಿ ವಿತರಿಸುತ್ತಿದ್ದಾರೆ.

ಡೆಂಗ್ಯೂಗೆ ಯುವತಿ ಬಲಿ: ಚಿಕ್ಕಮಗಳೂರು ನಗರದ ಮಹಮದ್ ಗಲ್ಲಿಯಲ್ಲಿ ಡೆಂಗ್ಯೂಗೆ ಕಾಲೇಜು ಯುವತಿಯೊಬ್ಬರು ಬಲಿಯಾಗಿದ್ದಾರೆ. ಒಳ ಚರಂಡಿ ಮತ್ತು ಪೈಪ್​ಲೈನ್ ಕಾಮಗಾರಿಗಳು ನಡೆಯುತ್ತಿರುವುದೇ ಇದಕ್ಕೆ ಕಾರಣ ಎಂದು ಸಾರ್ವಜನಿಕರು ಆರೋಪಿಸಿದರೆ, ಸರ್ಕಾರಿ ವೈದ್ಯರು ಇದು ಡೆಂಗ್ಯೂ ಡೆತ್ ಅಲ್ಲ ಎನ್ನುತ್ತಿದ್ದಾರೆ.

ಡೆಂಗ್ಯೂಗೆ ಯುವತಿ ಬಲಿ
ಡೆಂಗ್ಯೂಗೆ ಯುವತಿ ಬಲಿ

ನಗರದಲ್ಲಿ ನಡೆಯುತ್ತಿರುವ ಯುಜಿಡಿ ಕಾಮಗಾರಿಯಿಂದ ಮತ್ತು ಪೈಪ್​ಲೈನ್ ಅಳವಡಿಸಲು ತೆಗೆದಿರುವ ಗುಂಡಿಗಳಲ್ಲಿ ತಿಂಗಳುಗಟ್ಟಲೆ ನೀರು ನಿಂತು ಇಡೀ ನಗರ ಸೊಳ್ಳೆಗಳ ಆವಾಸ ಸ್ಥಾನವಾಗಿದೆ. ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳು ಹರಡುತ್ತಿವೆ. ಇದರಿಂದ ಸಾರ್ವಜನಿಕರಿಗೆ ಆರೋಗ್ಯದ ಸಮಸ್ಯೆಗಳು ಹೆಚ್ಚುತ್ತಿವೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಏನಿದು ಮಂಗನ ಕಾಯಿಲೆ? ಎಲ್ಲೆಲ್ಲಿ ಹರಡುತ್ತಿದೆ? ಲಕ್ಷಣ, ಮುನ್ನೆಚ್ಚರಿಕೆ ಕ್ರಮಗಳನ್ನು ತಿಳಿಯಿರಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.