ETV Bharat / state

ಕೆ.ಎಸ್.ಈಶ್ವರಪ್ಪ ವಿರುದ್ದ ಮತ್ತೊಂದು ಸುಮೊಟೊ ಪ್ರಕರಣ ದಾಖಲು - SUMOTO CASE AGAINST ESHWARAPPA

ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ವಿರುದ್ಧ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

k-s-eshwarappa
ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ (ETV Bharat)
author img

By ETV Bharat Karnataka Team

Published : Dec 5, 2024, 8:05 PM IST

ಶಿವಮೊಗ್ಗ: ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪನವರ ವಿರುದ್ದ ಶಿವಮೊಗ್ಗ ನಗರದಲ್ಲಿ ಮತ್ತೊಂದು ಸುಮೊಟೊ‌ ಪ್ರಕರಣ ದಾಖಲಾಗಿದೆ. ಪ್ರಚೋದನಕಾರಿ ಭಾಷಣ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಕೋಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೊಲೀಸ್ ಇನ್ಸ್‌ಪೆಕ್ಟರ್ ಹರೀಶ್ ಕೆ.ಪಟೇಲ್ ಅವರು ಸ್ವಯಂ ದೂರು ನೀಡಿದ್ದು, ಅದರಂತೆ ಠಾಣೆಯ ಸಿಬ್ಬಂದಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಡಿಸೆಂಬರ್ 3ರಂದು‌ ಈಶ್ವರಪ್ಪ, ಹಿಂದೂ ಜನಜಾಗೃತಿ ಸಮಿತಿ ಆಯೋಜಿಸಿದ್ದ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿ ಖಂಡಿಸುವ ಪ್ರತಿಭಟನಾ ಸಭೆಯಲ್ಲಿ ಭಾಗಿಯಾಗಿ ಭಾಷಣ ಮಾಡಿದ್ದರು.

20 ದಿನದಲ್ಲಿ 2ನೇ ಪ್ರಕರಣ: 20 ದಿನಗಳ ಹಿಂದೆ ಅಲ್ಪಸಂಖ್ಯಾತರ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿರುವ ಕುರಿತು ಜಯನಗರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಕೇಸು ದಾಖಲಾಗಿತ್ತು.

ಇದನ್ನೂ ಓದಿ: ಪ್ರಚೋದ‌ನಕಾರಿ ಹೇಳಿಕೆ ಆರೋಪ: ಕೆ.ಎಸ್.ಈಶ್ವರಪ್ಪ ವಿರುದ್ಧ ಸುಮೋಟೋ ಪ್ರಕರಣ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.