ETV Bharat / state

189 ಗೃಹರಕ್ಷಕರ ಸೇವೆಗೆ ಅರ್ಜಿ ಆಹ್ವಾನ: ಪೀರ್​ ಸಪೋರ್ಟರ್​ ಹುದ್ದೆ ನೇಮಕಾತಿಗೆ ನೇರ ಸಂದರ್ಶನ - 189 vacancy for Home Guard Service - 189 VACANCY FOR HOME GUARD SERVICE

ಶಿವಮೊಗ್ಗ ಜಿಲ್ಲೆಯ ವಿವಿಧ ಗೃಹರಕ್ಷಕ ದಳದ ಘಟಕಗಳಲ್ಲಿ ಒಟ್ಟು 189 ಗೃಹರಕ್ಷಕರ ಸ್ಥಾನಗಳಲ್ಲಿ ಸೇವೆ ಸಲ್ಲಿಸಲು ಅರ್ಹತೆಯುಳ್ಳ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

189 ಗೃಹರಕ್ಷಕರ ಸೇವೆಗೆ ಅರ್ಜಿ ಆಹ್ವಾನ
189 ಗೃಹರಕ್ಷಕರ ಸೇವೆಗೆ ಅರ್ಜಿ ಆಹ್ವಾನ (ETV Bharat)
author img

By ETV Bharat Karnataka Team

Published : Aug 8, 2024, 9:48 AM IST

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ವಿವಿಧ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿಯಿರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ ಒಟ್ಟು 189 ಸ್ಥಾನಗಳಲ್ಲಿ ಸೇವೆ ಸಲ್ಲಿಸಲು ಅರ್ಹತೆಯುಳ್ಳ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಭಾರತೀಯ ಪ್ರಜೆಯಾಗಿದ್ದು, 19 ರಿಂದ 45 ವರ್ಷ ವಯೋಮಿತಿಯ, 10ನೇ ತರಗತಿ ಪಾಸಾಗಿರುವ, ವೈದ್ಯಕೀಯವಾಗಿ ಸಶಕ್ತರಾಗಿರುವ ಹಾಗೂ ಪೊಲೀಸ್ ಠಾಣೆಯಲ್ಲಿ ಯಾವುದೇ ಕ್ರಿಮಿನಲ್ ಮೊಕದ್ದಮೆಗಳು/ಆರೋಪ ಅಥವಾ ಅಪರಾಧಿಯಾಗಿರದವರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಸಮಾದೇಷ್ಟರ ಕಾರ್ಯಾಲಯ, ಗೃಹರಕ್ಷಕ ದಳ, ಶಾಂತ ಮ್ಯಾನ್‌ಷನ್​​, 2ನೇ ಮಹಡಿ, ಗಾಂಧಿನಗರ ಮುಖ್ಯರಸ್ತೆ, ಶಿವಮೊಗ್ಗ ಅಥವಾ ಜಿಲ್ಲೆಯ ಎಲ್ಲಾ ಗೃಹರಕ್ಷಕ ದಳ ಘಟಕ/ಉಪ ಘಟಕಗಳ ಕಚೇರಿಗಳಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಆಗಸ್ಟ್ 12ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಗೌರವ ಸಮಾದೇಷ್ಠರಾದ ಡಾ. ಚೇತನ ಹೆಚ್.ಪಿ. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-295630 / 255630ಗಳನ್ನು ಸಂಪರ್ಕಿಸಬಹುದು.

ಪೀರ್​ ಸಪೋರ್ಟರ್​ ಹುದ್ದೆ ನೇಮಕಾತಿಗೆ ನೇರ ಸಂದರ್ಶನ: ಜಿಲ್ಲಾ ಕುಟುಂಬ ಕಲ್ಯಾಣ ಸಂಘ, ಕ್ಷಯರೋಗ ವಿಭಾಗ, ಎನ್​.ವಿ.ಹೆಚ್.ಸಿ.ಪಿ ಶಿವಮೊಗ್ಗ ಇವರ ಅಡಿಯಲ್ಲಿ ಮಾಸಿಕ ಗೌರವಧನ ಆಧಾರದ ಮೇಲೆ(ಮಾರ್ಚ್ 2025 ರ ವರೆಗೆ ಮಾತ್ರ) ಪೀರ್ ಸಪೋರ್ಟರ್(ಪರಸ್ಪರ ಬೆಂಗಲಿಗರು) ಹುದ್ದೆ ನೇಮಕಾತಿಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ. ಅರ್ಜಿ ಜೊತೆಗೆ ಮೂಲ ದಾಖಲಾತಿ ಮತ್ತು ನಕಲು ಪ್ರತಿಯೊಂದಿಗೆ ನೇರ ಸಂದರ್ಶನಕ್ಕೆ ಜಿಲ್ಲಾ ಕ್ಷಯರೋಗ ನಿಯಂತ್ರಣ ಕಚೇರಿ, ಜಿಲ್ಲಾ ಮೆಗ್ಗಾನ್​ ಬೋಧನಾ ಆಸ್ಪತ್ರೆ ಆವರಣ ಇಲ್ಲಿ ಆ. 14 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಹಾಜರಾಗಬೇಕು.

ಇದನ್ನೂ ಓದಿ: ಶೀಘ್ರದಲ್ಲೇ ವೈದ್ಯಕೀಯ ಕಾಲೇಜುಗಳಿಗೆ 650 ಸಹಾಯಕ ಪ್ರಾಧ್ಯಾಪಕರು, 1,200 ದಾದಿಯರ ನೇಮಕ: ಶರಣಪ್ರಕಾಶ್‌ ಪಾಟೀಲ್​ - Sharan Prakash Patil

ETV Bharat Logo

Copyright © 2024 Ushodaya Enterprises Pvt. Ltd., All Rights Reserved.