ETV Bharat / state

ಹುಬ್ಬಳ್ಳಿ: ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ಯೋಜನೆಗಳ ಫಲಾನುಭವಿಗಳ ಆಯ್ಕೆಗೆ ಅರ್ಜಿ ಆಹ್ವಾನ - Horticulture Department Schemes

author img

By ETV Bharat Karnataka Team

Published : Jul 1, 2024, 10:35 PM IST

ಹುಬ್ಬಳ್ಳಿ ತಾಲೂಕಿನ ತೋಟಗಾರಿಕೆ ಇಲಾಖೆ ವತಿಯಿಂದ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ, ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಯಂತ್ರೋಪಕರಣ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಜುಲೈ 15 ರೊಳಗೆ ಅರ್ಜಿಯನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.

ಹುಬ್ಬಳ್ಳಿ
ಹುಬ್ಬಳ್ಳಿ (ETV Bharat)

ಹುಬ್ಬಳ್ಳಿ: ತಾಲೂಕಿನ ತೋಟಗಾರಿಕೆ ಇಲಾಖೆಯಿಂದ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ, ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಹನಿ ನೀರಾವರಿ), ಯಂತ್ರೋಪಕರಣ ಯೋಜನೆಗಳಡಿಯಲ್ಲಿ ಅರ್ಹ ಫಲಾನುಭವಿಗಳ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಹಣ್ಣು (ಬಾಳೆ), ಹೈಬ್ರೀಡ್​ ತಕಾರಿಗಳ ಪ್ರದೇಶ ವಿಸ್ತರಣೆ ಮತ್ತು ಹೂವು ಪ್ರದೇಶ ವಿಸ್ತರಣೆ (ಕತ್ತರಿಸಿದ ಹೂ, ಗಡ್ಡೆ ಜಾತಿಯ ಹೂ, ಬಿಡಿ ಹೂ) ವೈಯಕ್ತಿಕ ಕೃಷಿಹೊಂಡ, ಸಮುದಾಯ ಕೃಷಿಹೊಂಡ, ಸಣ್ಣ ಟ್ರ್ಯಾಕ್ಟರ್, ಪಾಲಿಹೌಸ್, ಈರುಳ್ಳಿ ಶೇಖರಣಾ ಘಟಕ, ಪ್ಯಾಕ್ ಹೌಸ್ ಹಾಗೂ ತಳ್ಳುವ ಗಾಡಿಗಳಿಗೆ ರೈತರಿಗೆ ಸಹಾಯಧನ ಸೌಲಭ್ಯ ಇರುತ್ತದೆ. ಹನಿ ನೀರಾವರಿ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ ಹಣ್ಣು ಮತ್ತು ತರಕಾರಿಗಳಿಗೆ ಸಹಾಯಧನ ಸೌಲಭ್ಯ ಇರುತ್ತದೆ. ಯಂತ್ರೋಪಕರಣಗಳ ಯೋಜನೆಯಡಿ ತೋಟಗಾರಿಕೆ ಬೆಳೆಗಳಿಗೆ ಸಂಬಂಧಿಸಿದ ಯಂತ್ರೋಪಕರಣಗಳಿಗೆ ಸಹಾಯಧನ ಸೌಲಭ್ಯ ಇದೆ.

ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸುವ ರೈತರು ಸ್ವಂತ ಜಮೀನು ಮತ್ತು ನೀರಾವರಿ ಸೌಲಭ್ಯ ಹೊಂದಿರಬೇಕು. ಜೊತೆಗೆ ಆಧಾರ್​ ಕಾರ್ಡ್, ಮತದಾರರ ಗುರುತಿನ ಚೀಟಿ, ಗಣಕೀಕೃತ ಬೆಳೆ ದೃಢೀಕರಣ ಪತ್ರ ಹಾಗೂ ರಾಷ್ಟ್ರೀಕೃತ ಬ್ಯಾಂಕ್​ಗಳ ಪಾಸ್​ಬುಕ್ ಹೊಂದಿರಬೇಕು. ಪರಿಶಿಷ್ಟ ಜಾತಿ ಶೇ.17, ಪರಿಶಿಷ್ಟ ಪಂಗಡ ಶೇ.7, ಮಹಿಳೆಯರು ಶೇ.33, ಅಲ್ಪಸಂಖ್ಯಾತರು ಶೇ.5 ಹಾಗೂ ವಿಶೇಷ ಚೇತನರಿಗೆ ಶೇ.3 ಮೀಸಲಾತಿಗೆ ಆದ್ಯತೆ ನೀಡಲಾಗುವುದು.

ಸಹಾಯಕ ತೋಟಗಾರಿಕೆ ಅಧಿಕಾರಿ, ರೈತ ಸಂಪರ್ಕ ಕೇಂದ್ರ ಹುಬ್ಬಳ್ಳಿ (ಮೊಬೈಲ್​ ನಂ.9740164868) ಸಹಾಯಕ ತೋಟಗಾರಿಕೆ ಅಧಿಕಾರಿ, ರೈತ ಸಂಪರ್ಕ ಕೇಂದ್ರ, ಛಬ್ಬಿ (ಮೊ.ನಂ.9164126426) ಸಹಾಯಕ ತೋಟಗಾರಿಕ ಅಧಿಕಾರಿ, ರೈತ ಸಂಪರ್ಕ ಕೇಂದ್ರ ಶಿರಗುಪ್ಪಿ (ಮೊ.ನಂ. 9663474155) ರವರನ್ನು ಸಂಪರ್ಕಿಸಿ, ಜುಲೈ 15 ರೊಳಗೆ ಅರ್ಜಿಯನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಸಲ್ಲಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಪ್ರಭುಲಿಂಗ ಆರ್. ಗಡ್ಡದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಗ್ನಿವೀರ್ ವಾಯು ಸೇವೆ ಪರೀಕ್ಷೆಗೆ ಅರ್ಜಿ ಆಹ್ವಾನ: ಇನ್ನು ಭಾರತೀಯ ವಾಯುಪಡೆಯಿಂದ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ವಾಯು ಸೇವೆಯ ಆಯ್ಕೆ ಪರೀಕ್ಷೆಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಜುಲೈ 8ರಿಂದ 28 ರವರಗೆ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿದಾರರು 3 ಜುಲೈ 2004 ರಿಂದ 3 ಜನವರಿ 2008ರ ನಡುವೆ (ಎರಡೂ ದಿನಗಳನ್ನು ಒಳಗೊಂಡಂತೆ) ಜನಿಸಿರಬೇಕು. ಹೆಚ್ಚಿನ ಮಾಹಿತಿ ಮತ್ತು ಆನ್‌ಲೈನ್ ನೋಂದಣಿಗಾಗಿ https://agnipathvayu.cdac.in ವೆಬ್‌ಸೈಟ್‌ಗೆ ಭೇಟಿ ನೀಡಬೇಕೆಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಜುಲೈ 2 ರಂದು ಹು - ಧಾ ಮಹಾನಗರ ವಿವಿಧ ಬಡಾವಣೆಗಳಿಗೆ ನೀರು ಪೂರೈಕೆ.. ನಿಮ್ಮ ಪ್ರದೇಶಗಳ ವಿವರ ಹೀಗಿದೆ! - Water supply

ETV Bharat Logo

Copyright © 2024 Ushodaya Enterprises Pvt. Ltd., All Rights Reserved.