ETV Bharat / state

ದಸರಾ : ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ - cultural program Application

ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಕಲಾವಿದರಿಂದ, ಕಲಾತಂಡಗಳಿಂದ ಮಂಗಳವಾರ (ಆ. 27) ರಂದು ಅರ್ಜಿ ಆಹ್ವಾನಿಸಿದ್ದು, ಸೆಪ್ಟೆಂಬರ್ 10 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ.

palace
ಮೈಸೂರು ಅರಮನೆ (ETV Bharat)
author img

By ETV Bharat Karnataka Team

Published : Aug 27, 2024, 10:20 PM IST

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಅ. 3 ರಿಂದ 12ರ ವರೆಗೆ ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಲಾಗಿದೆ. ಈ ಸಂಬಂಧ ಸಾಂಸ್ಕೃತಿಕ ಉಪಸಮಿತಿಯಿಂದ ನವರಾತ್ರಿ ಅ. 3 ರಿಂದ ಅ.11ರ ವರೆಗೆ ನಾನಾ ಕಲಾಪ್ರಕಾರಗಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅರಮನೆ ಹಾಗೂ ಇತರೆ ವೇದಿಕೆಗಳಲ್ಲಿ ಆಯೋಜಿಸಲಿದೆ. ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಕಲಾವಿದರಿಂದ, ಕಲಾ ತಂಡಗಳಿಂದ ಆ. 27 ರಿಂದ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಸೆಪ್ಟಂಬರ್ 10 ಕೊನೆಯ ದಿನವಾಗಿದೆ.

ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕಲಾಮಂದಿರ, ವಿನೋಬಾ ರಸ್ತೆ, ಮೈಸೂರು-570005 ಇಲ್ಲಿಗೆ ನೇರವಾಗಿ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಮಿಂಚಂಚೆ ಮೂಲಕವು ccdasara23@gamail.com ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

palace
ಮೈಸೂರು ಅರಮನೆ (ETV Bharat)

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ- 0821-2513225ಗೆ ಸಂಪರ್ಕಿಸಲು ತಿಳಿಸಿದೆ. ಕಲಾವಿದರಿಗೆ ಕಾರ್ಯಕ್ರಮ ಕೊಡಿಸುವುದಾಗಿ ಯಾವುದೇ ಮಧ್ಯವರ್ತಿಗಳು ಸಂಪರ್ಕಿಸಿ ಹಣದ ಬೇಡಿಕೆ ಇಟ್ಟಲ್ಲಿ ತಕ್ಷಣ ಮಾಹಿತಿ ಸಮೇತ ಮೇಲ್ಕಾಣಿಸಿದ ಸಹಾಯಕ ನಿರ್ದೇಶಕರ ಕಚೇರಿಗೆ ದೂರು ಸಲ್ಲಿಸಲು ಕೋರಿದೆ ಎಂದು ದಸರಾ ಮಹೋತ್ಸವ ಸಾಂಸ್ಕೃತಿಕ ಉಪಸಮಿತಿ ಕಾರ್ಯದರ್ಶಿ ಡಾ. ಎಂ. ಡಿ ಸುದರ್ಶನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸುವ ಕಲಾ ತಂಡಗಳಿಂದ ಅರ್ಜಿ ಆಹ್ವಾನ - Dasara Cultural Events

ETV Bharat Logo

Copyright © 2024 Ushodaya Enterprises Pvt. Ltd., All Rights Reserved.