ETV Bharat / state

ಉಡುಪಿ: ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆಗೆ ಅರ್ಜಿ ಆಹ್ವಾನ - MANAGEMENT COMMITTEE OF TEMPLES

ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆಗೆ ಕನಿಷ್ಠ 25 ವರ್ಷ ವಯಸ್ಸಾಗಿರುವ ಆಸಕ್ತರು ಅರ್ಜಿ ಸಲ್ಲಿಸಬಹುದು.

application-invitation-for-formation-of-management-committee-of-temples-in-udupi
ಸಾಂದರ್ಭಿಕ ಚಿತ್ರ (ETV Bharat)
author img

By ETV Bharat Karnataka Team

Published : Dec 3, 2024, 2:40 PM IST

ಉಡುಪಿ: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಕಾಯ್ದೆ ಅಧಿನಿಯಮದನ್ವಯ ಜಿಲ್ಲೆಯಲ್ಲಿರುವ ಪ್ರವರ್ಗ ಸಿಗೆ ಸೇರಿದ 5 ದೇವಸ್ಥಾನಗಳಿಗೆ ವ್ಯವಸ್ಥಾಪನಾ ಸಮಿತಿಯನ್ನು ಮೂರು ವರ್ಷಗಳ ಅವಧಿಗೆ ರಚಿಸಲು ಆಸಕ್ತ ಭಕ್ತಾದಿಗಳು ಹಾಗೂ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕನಿಷ್ಠ 25 ವರ್ಷ ವಯಸ್ಸಾಗಿರುವ ಆಸಕ್ತರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಯಾವುದೇ ಒಂದು ಅಧಿಸೂಚಿತ ಸಂಸ್ಥೆ ಹಾಗೂ ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವ ಕೋರಿ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ತುಂಬಿ ಡಿ.9ರೊಳಗೆ ಸಲ್ಲಿಸಬೇಕು.

ಪ್ರವರ್ಗ ಸಿ ದೇವಸ್ಥಾನಗಳು: ಕಾರ್ಕಳ ತಾಲೂಕು ತೆಳ್ಳಾರು ಗ್ರಾಮದ ಶ್ರೀ ಜಲದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಮಾಳ ಹಳೆಪಳ್ಳಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಾಮಾನ್ಯ ವರ್ಗದ 1 ಸ್ಥಾನಕ್ಕೆ ಮಾತ್ರ ಮರು ಪ್ರಕಟಣೆ ಹಾಗೂ ತೆಳ್ಳಾರು ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಮರು ಪ್ರಕಟಣೆ, ಬ್ರಹ್ಮಾವರ ತಾಲೂಕು ಹೊಸಾಳ ಬದನಗೋಳಿ ಶ್ರೀ ಬ್ರಹ್ಮ ದೇವಸ್ಥಾನದ ಸಾಮಾನ್ಯ ವರ್ಗದ 1 ಸ್ಥಾನಕ್ಕೆ ಮಾತ್ರ ಮರು ಪ್ರಕಟಣೆ, ಬೈಂದೂರು ತಾಲೂಕು ಬಿಜೂರು ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸದಸ್ಯ ಸ್ಥಾನಕ್ಕೆ ಮರು ಪ್ರಕಟಣೆ ಹೊರಡಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ಆಯುಕ್ತರ ಕಚೇರಿ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ಕೊಠಡಿ ಸಂಖ್ಯೆ 206, ಬಿ ಬ್ಲಾಕ್, ಮೊದಲನೇ ಮಹಡಿ, ಜಿಲ್ಲಾ ಕಚೇರಿಗಳ ಸಂಕೀರ್ಣ, ರಜತಾದ್ರಿ, ಮಣಿಪಾಲ ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದು.

ಇದನ್ನೂ ಓದಿ: ಮಂಗಳೂರಲ್ಲಿ ಕೇಂದ್ರೀಕೃತವಾದ ಫೆಂಗಲ್ ಚಂಡಮಾರುತ: ಸಂಜೆವರೆಗೂ ಸುರಿಯಲಿದೆ ಭಾರಿ ಮಳೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.