ETV Bharat / state

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಯೋಜನೆಗಳಿಗೆ ಅರ್ಜಿ ಆಹ್ವಾನ - Veerashaiva Lingayat Schemes

author img

By ETV Bharat Karnataka Team

Published : Aug 3, 2024, 7:57 PM IST

ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

veerashaiva lingayat
ವಿಧಾನಸೌಧ (ETV Bharat)

ಬೆಂಗಳೂರು: 2024-25ನೇ ಸಾಲಿನ ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ (ಪ್ರವರ್ಗ-110) ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸೇವಾಸಿಂಧು ತಂತ್ರಾಂಶದ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ಸಾಲ ಯೋಜನೆ (ಬಸದಬೆಳಗು ಮತ್ತು ವಿದೇಶ ವಿದ್ಯಾವಿಕಾಸ), ಜೀವಜಲ (ಗಂಗಾಕಲ್ಯಾಣ), ಸ್ವಯಂ ಉದ್ಯೋಗ ಯೋಜನೆಗಳಿಗೆ (ಕಾಯಕಕಿರಣ, ಸ್ವಾವಲಂಬ ಸಾರಥಿ, ವಿಭೂತಿ ನಿರ್ಮಾಣ ಘಟಕ, ಭೋಜನಾಲಯ ಕೇಂದ್ರ ಮತ್ತು ಸ್ವಯಂ ಉದ್ಯೋಗ ಬ್ಯಾಂಕ್ ಸಹಯೋಗದೊಂದಿಗೆ) ಅರ್ಜಿ ಆಹ್ವಾನ ಮಾಡಲಾಗಿದೆ.

ಅರ್ಹ ಫಲಾಪೇಕ್ಷಿಗಳು ಗ್ರಾಮ ಒನ್/ ಬೆಂಗಳೂರು ಬನ್/ ಕರ್ನಾಟಕ ಒನ್ ನಾಗರೀಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟ‌ಲ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. 2023-24ನೇ ಸಾಲಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾಗದವರು ಆದೇ ಯೋಜನೆಗೆ ಈ ವರ್ಷ ಮರು ಅರ್ಜಿ ಸಲ್ಲಿಸುವ ಅಗತ್ಯತೆ ಇಲ್ಲ.

ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಯಡಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ತರಬೇತಿಯನ್ನು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾದ ITIs, GTTC KGTTL ATDC, VTU ಮೂಲಕ ಪಡೆಯಲು ಅರ್ಜಿದಾರರು https://www.kaushalkar.com/ ಜಾಲತಾಣದಲ್ಲಿ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ https://kvldcl.karnataka.gov.in ಅಥವಾ ನಿಗಮದ ದೂರವಾಣಿ ಸಂಖ್ಯೆ 080 22865522/ 9900012351 ಅನ್ನು ಸಂಪರ್ಕಿಸಬಹುದು. ಆಥವಾ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿಗಳನ್ನು ಸಂಪರ್ಕಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಮರೇಗೌಡ ಹೆಚ್.ಮಾಲಿಪಾಟೀಲ ಪ್ರಕಟಣೆಯಲ್ಲಿ ಕೋರಿದ್ದಾರೆ.

ಇದನ್ನೂ ಓದಿ: 1940 ಗ್ರಾಮೀಣ ಡಾಕ್​ ಸೇವಕ್​ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎರಡೇ ದಿನ ಬಾಕಿ - Karnataka Postal Circle Recruitment

ETV Bharat Logo

Copyright © 2024 Ushodaya Enterprises Pvt. Ltd., All Rights Reserved.