ETV Bharat / state

ಶಿವಮೊಗ್ಗ: ಜಿಲ್ಲಾ ಸರ್ಕಾರಿ ವಕೀಲರ ನೇಮಕಕ್ಕೆ ಅರ್ಜಿ ಆಹ್ವಾನ - additional government lawyer job - ADDITIONAL GOVERNMENT LAWYER JOB

ಸಾಗರ ಮತ್ತು ಸೊರಬ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ

application-invited-for-shivamogga-additional-government-lawyer-recruitment
ಸಾಂದರ್ಭಿಕ ಚಿತ್ರ (ಸಂಗ್ರಹ ಚಿತ್ರ)
author img

By ETV Bharat Karnataka Team

Published : Jul 23, 2024, 4:10 PM IST

ಹೈದರಾಬಾದ್​: ಶಿವಮೊಗ್ಗ ಜಿಲ್ಲೆಯ ಸಾಗರ ಮತ್ತು ಸೊರಬ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಈಗಾಗಲೇ ವಕೀಲಿ ವೃತ್ತಿಯಲ್ಲಿ ನಿರತರಾಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಹುದ್ದೆ ವಿವರ ಮತ್ತು ಅರ್ಹತೆ: ಅಪರ ಸರ್ಕಾರಿ ವಕೀಲ ವೃತ್ತಿ - ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 7 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಮಾಡಿರಬೇಕು. ಜಿಲ್ಲಾ ಬಾರ್​ ಅಸೋಸಿಯೇಷನ್​​ನ ಸದಸ್ಯತ್ವ ಹೊಂದಿರಬೇಕು. ಕರ್ನಾಟಕ ಕಾನೂನು ಅಧಿಕಾರಿಗಳ ನಿಯಮಗಳ ಎಲ್ಲ ಷರತ್ತಿಗೆ ಅರ್ಹರಾಗಿರಬೇಕು.

ಅರ್ಜಿ ಸಲ್ಲಿಸುವ ವಿಧಾನ: ಈ ಹುದ್ದೆಯಲ್ಲಿ ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ವೈಯಕ್ತಿಕ ಮಾಹಿತಿ, ಶೈಕ್ಷಣಿಕ ಪ್ರಮಾಣ ಪತ್ರ, ಗುರುತಿನ ಚೀಟಿ, ವಕೀಲಿ ವೃತ್ತಿ ನಿರ್ವಹಣೆ ಅನುಭವ ಪತ್ರ ಸೇರಿದಂತೆ ಪ್ರಮುಖ ದಾಖಲಾತಿಗಳೊಂದಿಗಿನ ಅರ್ಜಿಗಳನ್ನು ಜಿಲ್ಲಾಧಿಕಾರಿಗಳ ನ್ಯಾಯಾಂಗ ಶಾಖೆಯಲ್ಲಿ ಸಲ್ಲಿಸಬೇಕು.

ಅರ್ಜಿ ಸಲ್ಲಿಕೆಗೆ ಕಡೇಯ ದಿನ ಆಗಸ್ಟ್​ 8 ಆಗಿದೆ. ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿಗೆ ನ್ಯಾಯಾಂಗ ಶಾಖೆ, ಜಿಲ್ಲಾಧಿಕಾರಿ ಕಚೇರಿ, ದೂ. ಸಂ: 08182- 221100, 221010, 9110642146 ನ್ನು ಸಂಪರ್ಕಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ತಿಳಿಸಿದ್ದಾರೆ.

ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ ಸಿಬಿಐಗೆ ವಹಿಸಲು ಕೋರಿ ಯೂನಿಯನ್ ಬ್ಯಾಂಕ್ ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್​ ನೋಟಿಸ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.