ಶಿವಮೊಗ್ಗ: ಶಿಕಾರಿಪುರ ತೋಟಗಾರಿಕೆ ಇಲಾಖಾ ವತಿಯಿಂದ 2024-25ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ (ಅಂಗಾಂಶ ಬಾಳೆ, ಹೈಬ್ರಿಡ್ ತರಕಾರಿ, ಕಾಳುಮೆಣಸು, ಬಿಡಿ ಹೂ, ಸುಗಂಧರಾಜ ಮತ್ತು ಗುಲಾಬಿ), ಮಾವು ಪುನಶ್ಚೇತನ, ಕೃಷಿ ಹೊಂಡ, ತರಕಾರಿ ಬೆಳೆಗೆ ಪ್ಲಾಸ್ಟಿಕ್ ಹೊದಿಕೆ ಮತ್ತು ಪ್ಯಾಕ್ ಹೌಸ್ ಘಟಕಗಳಡಿ ಸಹಾಯಧನ ನೀಡುತ್ತಿದ್ದು, ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ನಿಗದಿತ ನಮೂನೆಯ ಅರ್ಜಿಯನ್ನು ಶಿಕಾರಿಪುರ ತಾಲೂಕು ತೋಟಗಾರಿಕೆ ಇಲಾಖೆಯಲ್ಲಿ ಪಡೆದು, ಭರ್ತಿ ಮಾಡಿ ಜುಲೈ 15ರೊಳಗೆ ಸಲ್ಲಿಸುವಂತೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಶಿಕಾರಿಪುರ ತಾಲೂಕು ತೋಟಗಾರಿಕೆ ಕಚೇರಿಯನ್ನು ಸಂಪರ್ಕಿಸಬಹುದು.
ವಿಶೇಷಚೇತನರಿಂದ ವಿವಿಧ ಕಾರ್ಯಕ್ರಮಗಳಡಿ ಅರ್ಜಿ ಆಹ್ವಾನ: ವಿಶೇಷಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ 2024-25ನೇ ಸಾಲಿಗೆ 13 ಫಲಾನುಭವಿ ಆಧರಿತ ಯೋಜನೆಗಳನ್ನು ಸುವಿಧಾ ಯೋಜನೆಯಡಿ ಡಿ.ಬಿ.ಟಿ. ತಂತ್ರಾಂಶದಲ್ಲಿ ವಿಶೇಷಚೇತನರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಯೋಜನೆಗಳೇನು?: ಪ್ರತಿಭಾವಂತ ವಿಶೇಷಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರವಾಹನ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ದೃಷ್ಟಿದೋಷ ಹೊಂದಿರುವ ವಿಶೇಷಚೇತನರಿಗೆ ಬೈಲ್‍ಕಿಟ್ ಯೋಜನೆ.
ಆಸಕ್ತರು ಗ್ರಾಮಾಒನ್, ಕರ್ನಾಟಕ ಒನ್ ಮತ್ತು ಸೇವಾಸಿಂಧು- https://sevasindhu.karnataka.gov.in/Sevasindhu/DepartmentServicesKannada ಪೋರ್ಟಲ್‍ನಲ್ಲಿ ಜುಲೈ 31ರೊಳಗೆ ಅರ್ಜಿ ಸಲ್ಲಿಸಿ. ಬಳಿಕ ಆ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಂಡು ಎಲ್ಲಾ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿದ ದ್ವಿಪ್ರತಿಗಳಲ್ಲಿ ಆಯಾ ತಾಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹಾಗೂ ತಾಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರುಗಳಿಗೆ ಸಲ್ಲಿಸುವಂತೆ ಜಿಲ್ಲಾ ವಿಶೇಷಚೇತನರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ:
- ಶಿವಮೊಗ್ಗ-9980150110/8746997896
- ಭದ್ರಾವತಿ-7899137243
- ಶಿಕಾರಿಪುರ-9741161346
- ತೀರ್ಥಹಳ್ಳಿ-9480767638
- ಸಾಗರ-9535247757
- ಸೊರಬ-9110493122
- ಹೊಸನಗರ-9731922693
ಜಿಲ್ಲಾ ಕಚೇರಿ ದೂ.ಸಂ.:08182-295234/251676 ಸಂಪರ್ಕಿಸಿ.
ಇದನ್ನೂ ಓದಿ: ರೈತರ ಗಮನಕ್ಕೆ: ಪಹಣಿಗೆ ಆಧಾರ್ ಜೋಡಣೆ ಕಡ್ಡಾಯ- ಲಿಂಕ್ ಮಾಡಲು ಕೆಲವೇ ದಿನ ಬಾಕಿ - Aadhaar link to RTC