ETV Bharat / state

ಪಶುವೈದ್ಯಕೀಯ ವಿದ್ಯಾಲಯ: ಸಹಾಯಕ ಪ್ರಾಧ್ಯಾಪಕರುಗಳ ನೇಮಕಕ್ಕೆ ಅರ್ಜಿ ಆಹ್ವಾನ - Assistant Professors Recruitment

ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳ ಉದ್ಯೋಗಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

author img

By ETV Bharat Karnataka Team

Published : Jul 9, 2024, 2:07 PM IST

Job information
ಸಾಂದರ್ಭಿಕ ಚಿತ್ರ (ETV Bharat)

ಶಿವಮೊಗ್ಗ: ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರುಗಳ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಡೀನ್ ಕಚೇರಿ, ಪಶುವೈದ್ಯಕೀಯ ಮಹಾವಿದ್ಯಾಲಯ, ವಿನೋಬನಗರ, ಶಿವಮೊಗ್ಗ - ಜುಲೈ 15ರಂದು ಬೆಳಗ್ಗೆ 11 ಗಂಟೆಯಿಂದ ನೇರ ಸಂದರ್ಶನ ನಡೆಸಲಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಖಾಲಿಯಿರುವ ಪ್ರಾಣಿ ಆಹಾರ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಔಷಧ ಹಾಗೂ ವಿಷಶಾಸ್ತ್ರ ವಿಭಾಗ, ಪಶುವೈದ್ಯಕೀಯ ಸಾರ್ವಜನಿಕ ಆರೋಗ್ಯ ಮತ್ತು ಸಮುದಾಯ ರೋಗ ಅಧ್ಯಯನ ಶಾಸ್ತ್ರ ವಿಭಾಗ, ಜಾನುವಾರು ಸಾಕಾಣಿಕಾ ಸಂಕೀರ್ಣ ವಿಭಾಗ (ಪ್ರಾಣಿ ಅನುವಂಶೀಯತೆ ಮತ್ತು ತಳಿಶಾಸ್ತ್ರ), ಪಶುವೈದ್ಯಕೀಯ ಶರೀರಕ್ರಿಯಾ ಮತ್ತು ಜೀವರಸಾಯನ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಶಸ್ತ್ರಚಿಕಿತ್ಸೆ ಮತ್ತು ಕ್ಷ-ಕಿರಣ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಚಿಕಿತ್ಸಾ ಸಂಕೀರ್ಣ ವಿಭಾಗಗಳಲ್ಲಿ ನೇಮಕ ಮಾಡಿಕೊಳ್ಳಲಾಗುವುದು.

ಇದನ್ನೂ ಓದಿ: ಕರ್ನಾಟಕದಲ್ಲೂ ಸಂಭ್ರಮದ ಶ್ರೀ ಜಗನ್ನಾಥ ಸ್ವಾಮಿ ರಥೋತ್ಸವ: ಎಲ್ಲಿ ಗೊತ್ತೇ? - Jagannatha Swamy Rathotsava

ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ನಿಯಮಾವಳಿಯಂತೆ ಹಾಗೂ ಮಾರ್ಗಸೂಚಿಯಂತೆ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಆಯ್ಕೆಯಾದ ರಾಷ್ಟ್ರೀಯ ಅರ್ಹತಾ ಪರೀಕ್ಷೆ ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳಿಗೆ ಮಾಸಿಕ 56,700 ರೂ. ಮತ್ತು ಪ್ರಮಾಣ ಪತ್ರ ಹೊಂದಿರದ ಅಭ್ಯರ್ಥಿಗಳಿಗೆ ಮಾಸಿಕ 50,000ರೂ. ವೇತನ ಪಾವತಿಸಲಾಗುವುದು ಎಂದು ಡೀನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂಖ್ಯೆ 08182-200872 ಅಥವಾ ವೆಬ್‍ಸೈಟ್ www.kvafsu.edu.in ಅನ್ನು ಸಂಪರ್ಕಿಸುವುದು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.