ETV Bharat / state

ಕಾಡು ಪ್ರಾಣಿಗಳ ಹಾವಳಿ ಇರುವ ಪ್ರದೇಶಗಳಲ್ಲಿನ ಶಸ್ತ್ರಾಸ್ತ್ರಗಳನ್ನು ಹಿಂದಿರುಗಿಸಲಾಗಿದೆ: ಹೈಕೋರ್ಟ್‌ಗೆ ಸರ್ಕಾರದ ಮಾಹಿತಿ - high court

ಪರವಾನಿಗೆ ಹೊಂದಿರುವ ಶಸ್ತ್ರಾಸ್ತ್ರಗಳನ್ನು ಚುನಾವಣಾ ಸಂದರ್ಭದಲ್ಲಿ ಸರ್ಕಾರದ ಸುಪರ್ದಿಗೆ ಒಪ್ಪಿಸುವಂತೆ ಆದೇಶ ನೀಡಲು ಅಧಿಕಾರವಿದೆಯೇ ಎಂಬುದರ ವಾದ ಆಲಿಸಲು ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿತು.

author img

By ETV Bharat Karnataka Team

Published : Apr 20, 2024, 4:31 PM IST

Etv Bharat
Etv Bharat

ಬೆಂಗಳೂರು: ಲೋಕಸಭೆಯ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿಯಿರುವ ಭಾಗಗಳಲ್ಲಿ ಪರವಾನಿಗೆ ಹೊಂದಿರುವ ರೈತರಿಂದ ಸ್ವಾಧೀನಕ್ಕೆ ಪಡೆದಿದ್ದ ಶಸ್ತ್ರಾಸ್ತ್ರಗಳನ್ನು ಕೆಲವು ಷರತ್ತುಗಳ ಅನ್ವಯ ಹಿಂದಿರುಗಿಸಿರುವುದಾಗಿ ಹೈಕೋರ್ಟ್​ಗೆ ಸರ್ಕಾರ ತಿಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಐವರನಾಡು ಗ್ರಾಮದ ಕೃಷಿಕ ಕೆ.ವಿ. ಪ್ರಸಾದ್ ಸೇರಿದಂತೆ ಹಲವು ಮಂದಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಸರ್ಕಾರದ ಪರವಾಗಿ ಹಾಜರಿದ್ದ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅವರು ಈ ಮಾಹಿತಿ ನೀಡಿದರು.

ಈ ಅಂಶವನ್ನು ದಾಖಲಿಸಿಕೊಂಡ ನ್ಯಾಯಪೀಠ, ಪರವಾನಿಗೆ ಹೊಂದಿರುವ ಶಸ್ತ್ರಾಸ್ತ್ರಗಳನ್ನು ಚುನಾವಣಾ ಸಂದರ್ಭದಲ್ಲಿ ಸರ್ಕಾರದ ಸುಪರ್ದಿಗೆ ಒಪ್ಪಿಸುವಂತೆ ಆದೇಶ ನೀಡಲು ಅಧಿಕಾರವಿದೆಯೇ ಎಂಬುದರ ಬಗ್ಗೆ ವಾದ ಆಲಿಸಲು ವಿಚಾರಣೆಯನ್ನು ಮುಂದೂಡಿತು.

ಕಳೆದ ಬಾರಿ ಅರ್ಜಿ ವಿಚಾರಣೆಗೆ ಬಂದಾಗ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ ಅರ್ಜಿದಾರರ ಮನವಿಗೆ ಸಂಬಂಧಿಸಿದಂತೆ ಉತ್ತರಿಸಿ, ‘ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಮಾರ್ಗದರ್ಶಿ ಸೂತ್ರಗಳನ್ನು ಹೊರಡಿಸಿದೆ. ಇದರ ಅನುಸಾರ ಪರವಾನಗಿ ಹೊಂದಿದ ಆಯುಧಗಳನ್ನು ಠೇವಣಿ ಇರಿಸುವಂತೆ ಸ್ಥಳೀಯವಾಗಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಅಗತ್ಯ ಇರುವವರಿಗೆ ಇದರಿಂದ ವಿನಾಯಿತಿ ನೀಡಬಹುದಾಗಿದೆ. ಆದರೆ, ಇದನ್ನು ಆಯಾ ಜಿಲ್ಲಾಧಿಕಾರಿಗಳೇ ನಿರ್ಧರಿಸಲಿದ್ದಾರೆ ಎಂದು ತಿಳಿಸಿದ್ದರು.

ಇದನ್ನೂ ಓದಿ: ಮಗುವನ್ನು ಸುಪರ್ದಿಗೆ ಪಡೆಯಲು ಆರ್ಥಿಕ ಸದೃಢತೆಯೊಂದೇ ಆಧಾರವಲ್ಲ: ತಂದೆಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ - High Court

ಅರ್ಜಿದಾರರ ಮನವಿ ಏನಾಗಿತ್ತು ? ನಾನೊಬ್ಬ ಕೃಷಿಕ. ನಾನು ಜನ ವಿರಳವಾದ ಬೆಳ್ಳಾರೆ ಗ್ರಾಮದಲ್ಲಿ ವಾಸ ಮಾಡುತ್ತಿದ್ದೇನೆ. ಹೀಗಾಗಿ, ನನ್ನ ಜೀವ ರಕ್ಷಣೆ ಮತ್ತು ಕೃಷಿ ಚಟುವಟಿಕೆ ವೇಳೆ ವನ್ಯಪ್ರಾಣಿಗಳಿಂದ ಆತ್ಮರಕ್ಷಣೆ ಮಾಡಿಕೊಳ್ಳಲು ನನಗೆ ಬಂದೂಕಿನ ಅಗತ್ಯವಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನನ್ನ ಬಂದೂಕನ್ನು ತನ್ನ ಸುಪರ್ದಿಗೆ ಪಡೆದಿದೆ. ಆಯುಧ ಸುಪರ್ದಿಗೆ ಪಡೆಯುವ ಆದೇಶದಿಂದ ನನಗೆ ವಿನಾಯಿತಿ ನೀಡುವಂತೆ ಕೋರಲಾದ ಮನವಿಯನ್ನು ತಿರಸ್ಕರಿಸಲಾಗಿದೆ. ಇದು ಸಹಜ ನ್ಯಾಯತತ್ವ ಹಾಗೂ ಸಂವಿಧಾನದ 14, 16 ಮತ್ತು 21ನೇ ವಿಧಿಗಳಿಗೆ ವಿರುದ್ಧವಾಗಿದೆ. ಆದ್ದರಿಂದ, ಸರ್ಕಾರ ಈ ಸಂಬಂಧ 2024ರ ಮಾರ್ಚ್ 26ರಂದು ಹೊರಡಿಸಿರುವ ಆದೇಶವನ್ನು ರದ್ದುಪಡಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.

ಷರತ್ತುಗಳು:

  • ಚುನಾವಣಾ ಪ್ರಚಾರ ಸಭೆ, ಮೆರವಣಿಗೆ, ಪಾದಯಾತ್ರೆ ಗಳಲ್ಲಿ ಶಸ್ತ್ರಾಸ್ತ್ರ ಒಯ್ಯಲು ಅವಕಾಶವಿಲ್ಲ.
  • ಮತದಾನದ ದಿನದಂದು ಶಸ್ತ್ರಾಸ್ತ್ರವನ್ನು ಮತಗಟ್ಟೆಗೆ ತೆಗೆದುಕೊಂಡು ಹೋಗುವಂತಿಲ್ಲ.
  • ಶಸ್ತ್ರಾಸ್ತ್ರಕ್ಕೆ ಪರವಾನಿಗೆ ಹೊಂದಿದ್ದರೂ ಬಹಿರಂಗ ಪ್ರದರ್ಶನ ಮಾಡುವುದಕ್ಕೆ ಅವಕಾಶವಿಲ್ಲ.
  • ಸಾರ್ವಜನಿಕರಿಗೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಬೆದರಿಕೆ ಹಾಕುವುದಕ್ಕೆ ಬಳಸಬಾರದು.
  • ಪೊಲೀಸರ ತಪಾಸಣೆ ವೇಳೆ ಹಾಜರು ಪಡಿಸಿ ದಾಖಲೆಗಳನ್ನು ಒದಗಿಸಬೇಕು.
  • ಷರತ್ತುಗಳನ್ನು ಉಲ್ಲಂಘಿಸಿದಲ್ಲಿ ಯಾವುದೇ ಮನ್ಸೂಚನೆ ನೀಡದೆ ಶಸ್ತ್ರಾಸ್ತ್ರ ವಶಕ್ಕೆ ಪಡೆದುಕೊಳ್ಳಬಹುದಾಗಿದೆ.
  • ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸುವಂತಿಲ್ಲ ಎಂಬ ಷರತ್ತುಗಳನ್ನು ವಿಧಿಸಲಾಗಿದೆ.

ಇದನ್ನೂ ಓದಿ: ಹೆಚ್‌.ಡಿ.ಕುಮಾರಸ್ವಾಮಿಗೆ ಮಹಿಳಾ ಆಯೋಗ ಜಾರಿಗೊಳಿಸಿದ್ದ ನೋಟಿಸ್‌ಗೆ ಹೈಕೋರ್ಟ್ ತಡೆಯಾಜ್ಞೆ - H D Kumaraswamy

ETV Bharat Logo

Copyright © 2024 Ushodaya Enterprises Pvt. Ltd., All Rights Reserved.