ETV Bharat / state

2022ರಲ್ಲಿ ಪಾಕ್​ ಪರ ಘೋಷಣೆ ಆರೋಪ: ಮಂಡ್ಯದಲ್ಲಿ ಬಿಜೆಪಿಯ ಓರ್ವ ಕಾರ್ಯಕರ್ತನ ಬಂಧನ - congress

2022ರಲ್ಲಿ ನಡೆದೊಂದು ಪ್ರತಿಭಟನೆ ವೇಳೆ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗುವ ಭರದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆಂದು ಆರೋಪಿಸಿ ವಕೀಲರೊಬ್ಬರು ದೂರು ನೀಡಿದ್ದು, ಬಿಜೆಪಿಯ ಓರ್ವ ಕಾರ್ಯಕರ್ತನನ್ನು ಬಂಧಿಸಲಾಗಿದೆ.

Mandya police station
ಮಂಡ್ಯ ಪೊಲೀಸ್​ ಠಾಣೆ
author img

By ETV Bharat Karnataka Team

Published : Mar 7, 2024, 9:54 AM IST

Updated : Mar 7, 2024, 4:47 PM IST

ದೂರುದಾರನ ಆರೋಪ

ಮಂಡ್ಯ: ಎರಡು ವರ್ಷದ ಹಿಂದೆ ಬಿಜೆಪಿ ಪ್ರತಿಭಟನೆ ನಡೆಸುವ ಸಮಯದಲ್ಲಿ 'ಪಾಕಿಸ್ತಾನ್​​ ಜಿಂದಾಬಾದ್' ಎಂಬ ಘೋಷಣೆ ಕೂಗಿದ್ದಾರೆಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿರುವ ಪೊಲೀಸರು ಎಫ್​​ಐಆರ್‌ ದಾಖಲಿಸಿದ್ದಾರೆ.

ವಕೀಲ ಕನ್ನಂಬಾಡಿ ಕುಮಾರ್​ ನೀಡಿದ ದೂರಿನ ಅನ್ವಯ ಬಿಜೆಪಿ ಕಾರ್ಯಕರ್ತನನ್ನು ಘೋಷಣೆ ಕೂಗಿದ್ದಾರೆಂದ ಆರೋಪದ ಮೇಲೆ ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

ಒಂದೂವರೆ ವರ್ಷದ ಬಳಿಕ ಬಿಜೆಪಿ ಕಾರ್ಯಕರ್ತನ ವಿರುದ್ಧ ವಕೀಲ ಕನ್ನಂಬಾಡಿ ಕುಮಾರ್ ಎಂಬುವರು ದೂರು ನೀಡಿದ್ದಾರೆ. ಈ ಬಗ್ಗೆ ಮಂಡ್ಯದ ಪಶ್ಚಿಮ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

2022ರ ಡಿಸೆಂಬರ್ 18 ರಂದು ಪಾಕಿಸ್ತಾನದ ವಿದೇಶಾಂಗ ಸಚಿವರ ವಿರುದ್ಧ ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಪ್ರಧಾನಿ ಮೋದಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿ ಮಂಡ್ಯದ ಸಂಜಯ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಪಾಕಿಸ್ತಾನ್ ಮುರ್ದಾಬಾದ್, ಹಿಂದೂಸ್ತಾನ್ ಜಿಂದಾಬಾದ್ ಘೋಷಣೆ ಕೂಗುತ್ತಿದ್ದ ಬಿಜೆಪಿ ಕಾರ್ಯಕರ್ತ, ಘೋಷಣೆ ಕೂಗುವ ಭರದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪ್ರತಿಭಟನೆಯಲ್ಲಿ ಭಾಗಿಯಾಗದವನನ್ನು ಪ್ರಕರಣದಲ್ಲಿ ಎ1 ಆರೋಪಿ ಮಾಡಿದ್ದಾರೆ ಎಂದು ಶಿವಕುಮಾರ್ ಆರಾಧ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂದು ನಾನು ಊರಿನಿಂದ ಮಂಡ್ಯಕ್ಕೆ ಬರುವಷ್ಟರಲ್ಲಿ ಪ್ರತಿಭಟನೆ ಮುಗಿದು ಹೋಗಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಪೊಲೀಸರನ್ನು ದುರ್ಬಳಕೆ ಮಾಡಿಕೊಂಡು ಬಿಜೆಪಿ ಕಾರ್ಯಕರ್ತರನ್ನು ಕುಗ್ಗಿಸುವ ಕೆಲಸ ಮಾಡುತ್ತಿದೆ. ನಿಮಗೆ ತಾಕತ್ತಿದ್ದರೆ ಲೋಕಸಭಾ ಚುನಾವಣೆಯಲ್ಲಿ ತೋರಿಸಿ. ಅದು ಬಿಟ್ಟು ಕಾರ್ಯಕರ್ತರನ್ನು ತುಳಿಯಬಾರದು ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಎಫ್​ಎಸ್​ಎಲ್ ವರದಿ ಬಗ್ಗೆ ಕಾಂಗ್ರೆಸ್ ನಾಯಕರು ಏನ್ ಹೇಳ್ತಾರೆ: ಕೆ ಎಸ್ ಈಶ್ವರಪ್ಪ ಪ್ರಶ್ನೆ

Last Updated : Mar 7, 2024, 4:47 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.